ಕುಶಾಲನಗರ, ಜು.10: ಇಲ್ಲಿನ ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಮ್ಮನಕೊಲ್ಲಿ ವಿರಭೂಮಿ ಪ್ರವಾಸಿ ತಾಣಕ್ಕೆ ತೆರಳುವ ವೃತ್ತದಲ್ಲಿ ಎರಡು ಆಟೊಗಳು ಮುಖಾಮುಖಿ ಢಿಕ್ಕಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.