ಯಕ್ಷಗಾನ ಕಲಾರಂಗದಿಂದ ಸಚಿವ ಪ್ರಮೋದ್‌ಗೆ ಸನ್ಮಾನ

ಉಡುಪಿ, ಜು.10: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ನೂತನ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಇಂದು ಉಡುಪಿ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್, ಯಕ್ಷ ಗಾನ ಕಲಾರಂಗದಂತಹ ಸಂಸ್ಥೆ ಇರುವ ಕ್ಷೇತ್ರಕ್ಕೆ ನಾನು ಶಾಸಕನಾಗಿರುವುದು ನನ್ನ ಭಾಗ್ಯ. ಯಕ್ಷಗಾನಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ಹಾಗೂ ಪ್ರೋತ್ಸಾಹವನ್ನು ಮುಂದೆಯೂ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸೋದೆ ಮಠಾಧೀಶ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ, ಶ್ರೀರಘುಭೂಷಣ ಸ್ವಾಮೀಜಿ ಸಚಿವರನ್ನು ಆಶೀರ್ವದಿಸಿದರು. ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಕಿಶನ್ ಹೆಗ್ಡೆ, ಕಲಾರಂಗದ ಅಧ್ಯಕ್ಷ ಗಣೇಶ್ ರಾವ್, ಉಪಾಧ್ಯಕ್ಷ ಗಂಗಾಧರ್ ರಾವ್ ಮೊದಲಾದವರು ಉಪ ಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





