Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವೈದ್ಯರ...

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ತಾ.ಪಂ. ಬಿಜೆಪಿ ಸದಸ್ಯನಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ12 July 2016 7:38 PM IST
share
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ತಾ.ಪಂ. ಬಿಜೆಪಿ ಸದಸ್ಯನಿಂದ ಹಲ್ಲೆ

ಬೆಳ್ತಂಗಡಿ, ಜು.12: ಕೊಕ್ಕಡ ಜೋಡುಮಾರ್ಗದಲ್ಲಿ ತನ್ನ ಮನೆ ಮತ್ತು ಕ್ಲಿನಿಕ್ ಅನ್ನು ಹೊಂದಿರುವ ಗಣೇಶ ಕ್ಲಿನಿಕ್‌ನ ವೈದ್ಯ ಡಾ. ಗಣೇಶ ಭಟ್ ಎಂಬವರು ತನ್ನ ಕ್ಲಿನಿಕ್‌ನಲ್ಲಿ ರೋಗಿಗಳನ್ನು ಆರೋಗ್ಯ ತಪಾಸಣೆ ಮಾಡುತ್ತಿದ್ದ ಸಂದರ್ಭ ಬಿಜೆಪಿ ಮುಖಂಡ ಕೊಕ್ಕಡದ ತಾ.ಪಂ.ಸದಸ್ಯ ಲಕ್ಷ್ಮೀನಾರಾಯಣ ಟಿ.ಎಂ. ಎಂಬಾತ ಕ್ಲಿನಿಕ್‌ನೊಳಗೆ ನುಗ್ಗಿ ವೈದ್ಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ ಡಾ.ಗಣೇಶ್ ಭಟ್ ದೇವಸ್ಥಾನಕ್ಕೆ ತನ್ನ ಕಾರಲ್ಲಿ ಹೋಗುತ್ತಿರುವ ಸಂದರ್ಭ ತಾ.ಪಂ. ಸದಸ್ಯ ತನ್ನ ವಾಹನವನ್ನು ಹಿಂದಕ್ಕೆ ತೆಗೆದಾಗ ಗಣೇಶ್ ಭಟ್ ಅವರು, ನೋಡಿ ತೆಗೆಯಬಾರದೆ ಎಂದು ಕೇಳಿದ್ದರು ಎನ್ನಲಾಗಿದೆ. ಬಳಿಕ ಅಲ್ಲಿಂದ ಇಬ್ಬರೂ ತೆರಳಿದ್ದರು. ಬಳಿಕ ಇದೇ ವಿಚಾರಕ್ಕೆ ಮಧ್ಯಾಹ್ನದ ನಂತರ ಕ್ಲಿನಿಕ್‌ಗೆ ತೆರಳಿದ ತಾ.ಪಂ. ಸದಸ್ಯ ನೇರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಿಂದ ಗಾಯಗೊಂಡ ವೈದ್ಯರು ನೆಲ್ಯಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆಯಲು ಬಂದ ಪೊಲೀಸರಿಗೆ ದೂರು ನೀಡಿದ್ದಾರೆ. ವೈದ್ಯರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಡಿಷನಲ್ ಎಸ್ಪಿ ಡಾ. ವೇದಮೂರ್ತಿ ನೆಲ್ಯಾಡಿಯ ಆಸ್ಪತ್ರೆಯಲ್ಲಿ ಹಲ್ಲೆಗೊಳಗಾದ ವೈದ್ಯರನ್ನು ಭೇಟಿ ಮಾಡಿ ಘಟನೆಯ ವಿವರವನ್ನು ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು ಜನಪ್ರತಿನಿಧಿಯೇ ಗೂಂಡಾಗಿರಿಗೆ ಮುಂದಾಗಿರುವುದು ಅತ್ಯಂತ ಶೋಚನೀಯ ವಿಚಾರವಾಗಿದ್ದು ಆರೋಪಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

 ಡಾಕ್ಟರ್ ಗಣೇಶ್ ಭಟ್ ಮೇಲೆ ಕೊಕ್ಕಡ ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮೀ ನಾರಾಯಣ ಅವರು ಕ್ಷುಲ್ಲಕ ಕಾರಣಕ್ಕೆ ತೀವ್ರ ಹಲ್ಲೆ ನಡೆಸಿದ್ದನ್ನು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಖಂಡಿಸಿದ್ದಾರೆ. ವೃತ್ತಿ ನಿರತ ವೈದ್ಯರ ಮೇಲೆ ಹಲ್ಲೆ ನಡೆಸುವುದು ಗಂಭೀರ ಕ್ರಿಮಿನಲ್ ಪ್ರಕರಣವಾಗಿದ್ದು, ಆರೋಪಿಯನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಜನಪ್ರತಿನಿಧಿಯನ್ನು ತಾಲೂಕು ಪಂಚಾಯತು ಸದಸ್ಯತ್ವದಿಂದ ವಜಾಗೊಳಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X