ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಹೈಕೋರ್ಟ್‌ನಲ್ಲಿ ಪಿಐಎಲ್, ಇನ್ಸ್‌ಪೆಕ್ಟರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು, ಜು.12: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರೊಬ್ಬರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದರೆ, ಮತ್ತೊಂದು ಕಡೆ ಮಡಿಕೇರಿ ಪೊಲೀಸ್ ಠಾಣಾ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಗಣಪತಿ ಸಾಯುವ ಮುನ್ನ ಮರಣ ಪೂರ್ವ ಹೇಳಿಕೆ, ಮರಣ ಪೂರ್ವ ಹೇಳಿಕೆಯ ವಿಡಿಯೋ ದಾಖಲೆ ಕೂಡ ಇದೆ. ಆದರೆ, ಪ್ರಕರಣ ನಡೆದು 5 ದಿನಗಳಾದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ವಕೀಲ ರಂಗನಾಥ್‌ರೆಡ್ಡಿ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
ಲೋಕಾಯುಕ್ತಕ್ಕೆ ದೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಅಮೃತೇಶ್ ಅವರು ಮಡಿಕೇರಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಉಪಲೋಕಾಯುಕ್ತ ಬಳಿ ದೂರು ದಾಖಲಿಸಿದ್ದಾರೆ. ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲು ಮಂಗಳೂರು ಡಿವೈಎಸ್ಪಿಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಕೊಡವಾಮೆ ಎಂಬ ಸಂಸ್ಥೆ ದೂರು ಸಲ್ಲಿಸಿದೆ.







