ಪಾಣಾಜೆಯಲ್ಲಿ ಕೋಟಿವೃಕ್ಷ ಅಭಿಯಾನ

ಪುತ್ತೂರು, ಜು.12: ಪುತ್ತೂರು ತಾಲೂಕಿನ ಪಾಣಾಜೆ ವಿವೇಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಮಂಗಳವಾರ ನಡೆಯಿತು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಯಾಗಿ ಅಭಿಯಾನ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶಾಹುಲ್ ಹಮೀದ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ, ಮಕ್ಕಳ ಸುರಕ್ಷಾ ಸಮಿತಿಯ ಪ್ರತಿನಿಧಿ ಜಯರಾಮ ರೈ ಕಡಮಾಜೆ ಮತ್ತಿತರರು ಉಪಸ್ಥಿತರಿದ್ದರು.
Next Story





