Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲಕಿಯರ ನಿಲಯಕ್ಕೆ ತಾಪಂ ಅಧ್ಯಕ್ಷರಿಂದ...

ಬಾಲಕಿಯರ ನಿಲಯಕ್ಕೆ ತಾಪಂ ಅಧ್ಯಕ್ಷರಿಂದ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ12 July 2016 10:17 PM IST
share
ಬಾಲಕಿಯರ ನಿಲಯಕ್ಕೆ ತಾಪಂ ಅಧ್ಯಕ್ಷರಿಂದ ದಿಢೀರ್ ಭೇಟಿ

ಮೂಡಿಗೆರೆ, ಜು.12: ಪಟ್ಟಣದ ಚತ್ರಮೈದಾನ ದಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತಾಪಂ ಅಧ್ಯಕ್ಷ ಕೆ.ಸಿ.ರತನ್ ಸೋಮವಾರ ಸಂಜೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ಆಲಿಸಿದರು.

ತಾಲೂಕಿನಲ್ಲಿರುವ ಅನೇಕ ಹಾಸ್ಟೆಲ್‌ಗಳಲ್ಲಿ ವಿವಿಧ ರೀತಿಯ ಕುಂದುಕೊರತೆಗಳನ್ನು ಅರಿತ ತಾಪಂ ಅಧ್ಯಕ್ಷ ಕೆ.ಸಿ.ರತನ್ ವಾರದಲ್ಲಿ ಒಂದು ಅಥವಾ ಎರಡು ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಲು ಆರಂಭಿಸಿದ್ದಾರೆ. ಚತ್ರಮೈದಾನದಲ್ಲಿರುವ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಮಯದಲ್ಲಿ ವಿದ್ಯಾರ್ಥಿಗಳ ಹಾಜರಾತಿ ಬುಕ್ಕನ್ನು ತರುವಂತೆ ವಾರ್ಡನ್‌ಗೆ ತಿಳಿಸಿ, ವಿದ್ಯಾರ್ಥಿಗಳು ಎಷ್ಟಿದ್ದಾರೆಂದು ಮಾಹಿತಿ ತಿಳಿದುಕೊಂಡರು. ಹಾಜರಾತಿಯಲ್ಲಿದ್ದ 44 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ಮಾತ್ರ ಹಾಜರಿದ್ದರು. ಉಳಿದ ವಿದ್ಯಾರ್ಥಿಗಳು ಎಲ್ಲಿ ಎಂದು ಕೇಳಿದಾಗ, ವಿದ್ಯಾರ್ಥಿಗಳು ಮಾತು ಕೇಳುವುದಿಲ್ಲ. ನಮ್ಮನ್ನೇ ಗದರಿಸುತ್ತಾರೆ ಎಂಬ ಉತ್ತರ ವಾರ್ಡನ್‌ಗಳಿಂದ ಕೇಳಿಬಂತು. ಇದನ್ನು ಆಲಿಸಿದ ತಾಪಂ ಅಧ್ಯಕ್ಷ ಇನ್ನು ಮುಂದೆ ಎಲ್ಲಾ ವಾರ್ಡನ್‌ಗಳು ಶಿಸ್ತಾಗಿ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಎಲ್ಲಿ ಹೋಗಬೇಕಾದರೂ ಅವರ ಬರವಣಿಗೆಯಿಂದ ಪತ್ರ ಬರೆಸಿಕೊಳ್ಳಿ. ಮಾತು ಕೇಳದ ವಿದ್ಯಾರ್ಥಿಗಳಿದ್ದರೆ ಅವರ ಪೋಷಕರನ್ನು ಕರೆಸಿ ಬುದ್ಧಿವಾದ ಹೇಳಿಸಿ ಸರಿ ಮಾಡುವ ಕೆಲಸ ಮಾಡಬೇಕು ಎಂದರು.

 ಇದಕ್ಕೂ ಮುನ್ನ ಹಾಸ್ಟೆಲ್‌ಗೆ ಭೇಟಿ ನೀಡಿದ ವೇಳೆ ವಿದ್ಯುತ್ ಮತ್ತು ಯುಪಿಎಸ್ ಕೈಕೊಟ್ಟ ಕಾರಣ ವಿದ್ಯಾರ್ಥಿನಿಯರು ಕತ್ತಲೆ ಕೋಣೆಯಲ್ಲಿ ಇರುವುದು ಕಂಡು ಬಂದಿತು. ಬಳಿಕ ಸಮಸ್ಯೆ ಸರಿಪಡಿಸುವ ಬಗ್ಗೆ ಸಂಬಂಧಿಸಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ಅಲ್ಲದೆ, ವಾರ್ಡನ್‌ಗಳಿಗೆ ಶಿಸ್ತುಪಾಲನೆ ಸರಿಯಿಲ್ಲ. ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ಎಚ್ಚರ ವಹಿಸಬೇಕು. ಇಲ್ಲಿ ದಿನನಿತ್ಯ ಬಳಕೆಯಾಗುವ ಪದಾರ್ಥ ಹಾಗೂ ಇನ್ನಿತರ ಬಗ್ಗೆ ಪುಸ್ತಕದಲ್ಲಿ ದಾಖಲಾತಿ ಇರಬೇಕು ಎಂದರು.

ಈ ವೇಳೆ ಹೆಸಗಲ್ ಗ್ರಾಪಂ ಸದಸ್ಯರಾದ ಹೆಸಗಲ್‌ಗಿರೀಶ್, ಪ್ರಶಾಂತ್, ವಾರ್ಡನ್ ಝುಲೇಕಾ, ಜೆ.ಎಸ್.ರಘು, ಹಳೆಮೂಡಿಗೆರೆ ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X