Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿವೇಶನ ರಹಿತರ ಪತ್ತೆಗೆ ಪ್ರಾಮಾಣಿಕ...

ನಿವೇಶನ ರಹಿತರ ಪತ್ತೆಗೆ ಪ್ರಾಮಾಣಿಕ ಸಮೀಕ್ಷೆ ನಡೆಯಲಿ

ನಗರಸಭೆ ಸದಸ್ಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 July 2016 10:18 PM IST
share

ಚಿಕ್ಕಮಗಳೂರು, ಜು.12: ನಗರದಲ್ಲಿ ನಿವೇಶನ ರಹಿತರ ಪತ್ತೆಗೆ ಪ್ರಾಮಾಣಿಕವಾದ ಸಮೀಕ್ಷೆ ನಡೆಯಬೇಕು. ಅರ್ಹರಿಗೆ ಅನ್ಯಾಯ ವಾಗದಂತೆ ಎಚ್ಚರ ವಹಿಸಬೇಕು ಎಂದು ನಗರಸಭೆ ಸದಸ್ಯರು ಒತ್ತಾಯಿಸಿದ್ದಾರೆ.

ಸೋಮವಾರ ನಗರಸಭೆ ಅಧ್ಯಕ್ಷ ದೇವರಾಜ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಖಾಸಗಿ ಏಜೆನ್ಸಿ ನೇಮಕ ಮಾಡಿಕೊಳ್ಳುವ ವಿಚಾರದ ಕುರಿತು ಚರ್ಚೆಯಲ್ಲಿ ಭಾಗವಹಿಸಿದ ಬಹುತೇಕ ಸದಸ್ಯರು ಒತ್ತಡಗಳಿಗೆ ಮಣಿದು ಅರ್ಹರಲ್ಲದವರೂ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವಂತೆ ಮುಂದೆ ನಡೆಯುವ ಸಮೀಕ್ಷೆ ಸಂದರ್ಭದಲ್ಲಿ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ದೇವರಾಜ್ ಶೆಟ್ಟಿ ವಿಚಾರದ ಬಗ್ಗೆ ಸಭೆಗೆ ವಿವರಣೆ ನಿೀಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ, ನಿವೇಶನಗಳನ್ನು ವಿತರಿಸುವ ಬಗ್ಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ಸಭೆ ನಡೆದಿದೆ. ಯೋಜನೆ ಸಂಬಂಧ ವಿಸ್ತೃತ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸರಕಾರ ಸೂಚಿಸಿದೆ. ನಗರದ ವಿವಿಧೆಡೆ ಒಟ್ಟು 27 ಎಕರೆ ಜಾಗದಲ್ಲಿ ಜಿ ಪ್ಲಸ್ ಟು ಮಾದರಿಯ ಮನೆಗಳನ್ನು ನಿರ್ಮಿಸಲು ಸರಕಾರ ಅನುಮೋದನೆ ನೀಡಿದೆ. ಅದಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಬೇಕಿದೆ ಎಂದರು.

ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಕೆಲವು ಬಿಲ್‌ಕಲೆಕ್ಟರ್‌ಗಳು ಸದಸ್ಯರ ಮನೆಗಳಲ್ಲಿ ಕುಳಿತುಕೊಂಡು ಅವರು ಕೊಟ್ಟ ಹೆಸರುಗಳನ್ನೇ ಬರೆದುಕೊಂಡು ಬಂದಿದ್ದಾರೆ. ಪ್ರಾಮಾಣಿಕ ಸರ್ವೇ ಕಾರ್ಯ ನಡೆದಿಲ್ಲ. ಇಲ್ಲಿನ ಮೂಲ ನಿವಾಸಿಗಳಲ್ಲದ ಬೇರೆಡೆಯಿಂದ ಬಂದು ನೆಲೆಸಿರುವ ಬಹಳಷ್ಟು ಜನರಿಂದ ಕೆಲವು ಸದಸ್ಯರೇ ಅರ್ಜಿ ಹಾಕಿಸಿದ್ದಾರೆ. ಇದರಿಂದ ಅರ್ಹರಿಗೆ ಅನ್ಯಾಯವಾಗಿದೆ ಎಂದು ದೂರಿದರು. ಬರೇ ಪಟ್ಟಿಯನ್ನೇ ಮಾಡಿ ನಿವೇಶನಗಳನ್ನೇ ಕೊಡದೆ ಫಲಾನುಭವಿಗಳಿಗೆ ಮೋಸ ಮಾಡಿದ್ದೇವೆ. ಮುಂದಾದರೂ ಅದಕ್ಕೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದು ಒ ತ್ತಾಯಿಸಿದರು.

ಈಗ ಒಟ್ಟು 811 ನಿವೇಶನಗಳನ್ನು ರಚಿಸಲಾಗಿದೆ. ಆದರೆ ಮನೆ ನಿವೇಶನಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ಅದರಲ್ಲಿ ಜಿ ಪ್ಲಸ್ ಟು ಮಾದರಿಯ ಮನೆಗಳನ್ನು ನಿರ್ಮಾಣ ಮಾಡಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಈಗ ಅನುಮೋದನೆ ಸಿಕ್ಕಿದೆ. ಜಿ ಪ್ಲಸ್ ಟು ಕಟ್ಟಡ ನಿರ್ಮಾಣದಿಂದ ಒಟ್ಟು 2,291 ಫಲಾನುಭವಿಗಳಿಗೆ ಮನೆಗಳನ್ನು ನೀಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಏಜೆನ್ಸಿಯಿಂದ ಸಮೀಕ್ಷೆ ಮಾಡಿಸಲು ಉದ್ದೇಶಿಸಲಾಗಿದೆ ಎಂದರು.

ಹಿಂದೆ ಆಶ್ರಯ ಫಲಾನುಭವಿಗಳಿಗೆ ನಗರಸಭೆಯಿಂದ ನೀಡಲಾದ ತಿಳುವಳಿಕೆ ಪತ್ರವನ್ನೇ ಹಿಡಿದುಕೊಂಡು ಕೆಲವರು ಹೊತ್ತಲ್ಲದ ಹೊತ್ತಿನಲ್ಲೂ ಕುಡಿದು ಫೋನ್ ಮಾಡುತ್ತಾರೆ. ಎಲ್ರೀ ನಮ್ಮ ಆಶ್ರಯ ಮನೆ ಎಂದು ದಬಾಯಿಸುತ್ತಾರೆ. ಮೊದಲು ಅಂತಹವರಿಗೆ ಹಕ್ಕುಪತ್ರ ನೀಡುವ ಕೆಲಸ ಆಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X