Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಟಿವೃಕ್ಷ ಕಾರ್ಯಕ್ರಮ ಪರಿಸರ...

ಕೋಟಿವೃಕ್ಷ ಕಾರ್ಯಕ್ರಮ ಪರಿಸರ ಸಂರಕ್ಷಣೆಗೆ ಸಹಕಾರಿ

ಚಿಕ್ಕಮಗಳೂರು: ವನಮಹೋತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 July 2016 10:21 PM IST
share
ಕೋಟಿವೃಕ್ಷ ಕಾರ್ಯಕ್ರಮ ಪರಿಸರ ಸಂರಕ್ಷಣೆಗೆ ಸಹಕಾರಿ

ಚಿಕ್ಕಮಗಳೂರು, ಜು.12: ರಾಜ್ಯಾದ್ಯಂತ ಅರಣ್ಯ ಇಲಾಖೆ ಹಮ್ಮಿಕೊಂಡಿರುವ ಕೋಟಿವೃಕ್ಷ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತರಾಗಿ ಸರ್ವರೂ ಭಾಗಿಯಾದಾಗ ಪರಿಸರ ಸಂರಕ್ಷಣೆಗೆ ಸಹಕಾರಿಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಹೇಳಿದ್ದಾರೆ.

ಅವರು ನಗರ ಹೊರವಲಯದ ಹಿರೇಮಗಳೂರಿನ ರುದ್ರಭೂಮಿಯಲ್ಲಿ ನವಚೇತನ ಯುವಕ ಸಂಘ ಹಮ್ಮಿಕೊಂಡಿದ್ದ ಕೋಟಿವೃಕ್ಷ ಕಾರ್ಯಕ್ರಮಕ್ಕೆಚಾಲನೆ ನೀಡಿ ಮಾತನಾಡಿ, ಇಂದಿನ ಯುಗ ಮಾನಸದಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಐಶಾರಾಮಿ ಜೀವನ ನಡೆಸುವ ಸಲುವಾಗಿ ಮರಕಡಿಯುವುದನ್ನೆ ಯೋಚನೆ ಮಾಡುತ್ತಾನೆ ಹೊರತು ಸಸಿನೆಟ್ಟು ಗಿಡ ಬೆಳೆಸಿ ಮುಂದಿನ ಪೀಳಿಗೆಗೆ ಪರಿಸರ ಉಳಿಸುವ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೋಟಿ ವೃಕ್ಷ ಕಾರ್ಯಕ್ರಮದಲ್ಲಿ ಗಿಡ ನೆಡುವುದು ಮಾತ್ರ ಅರಣ್ಯ ಇಲಾಖೆ ಕೆಲಸವಲ್ಲ. ಅದನ್ನು ಪೋಷಿಸಿ ಬೆಳೆಸುವ ಹೊಣೆಗಾರಿಗೆ ನಿಮ್ಮ ಮೇಲಿದೆ ಎಂದರು. ಮರ ಕಡಿಯುವುದು ಸುಲಭ ಆದರೆ ಒಂದು ಗಿಡನೆಟ್ಟು ಅದಕ್ಕೆ ನಿತ್ಯ ನೀರೆರೆದು ಪೋಷಿಸಿ ಹೆಮ್ಮರವಾಗಿ ಬೆಳೆಸಬೇಕಾದರೆ ಅದರ ಹಿಂದಿನ ಶ್ರಮ ಬೆಳೆಸಿದವರಿಗೆ ಮಾತ್ರ ತಿಳಿಯುತ್ತದೆ ಎಂದು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ನಾಣ್ನುಡಿಯನ್ನು ಸರ್ವರೂ ಪಾಲಿಸೋಣ ಎಂದರು.

ನವಚೇತನ ಯುವಕ ಸಂಘದ ಅಧ್ಯಕ್ಷ ಬಿ.ರೇವನಾಥ್ ಮಾತನಾಡಿ, ಮನುಷ್ಯಗೆ ಒಳ್ಳೆಯ ಗಾಳಿ,ನೀರು ಪೂರೈಕೆಯಾಗಬೇಕಾದರೆ ಗಿಡ, ಮರಗಳು ಸಮೃದ್ಧಿಯಾಗಿರಬೇಕು. ಪ್ರಕೃತಿ ಸೊಬಗನ್ನು ಅನುಭವಿಸಲು ಉತ್ತಮ ಪರಿಸರದ ಅಗತ್ಯವಿದೆ. ಈ ಸಂಬಂಧ ಪ್ರತಿವರ್ಷ ನಮ್ಮ ಸಂಘದಿಂದ ರುದ್ರಭೂಮಿ, ಶಾಲೆ ಆವರಣ, ರಸ್ತೆಬದಿಗಳಲ್ಲಿ ಸೇರಿದಂತೆ ಅವಶ್ಯವಿರುವ ಕಡೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕೆಲವು ಕಡೆ ಕುಡಿಯುವ ನೀರಿಗಾಗಿ ಹಪಹಪಿಸುವುದನ್ನು ನೋಡಿದಾಗ ಮಲೆನಾಡಿನ ಜನರಾದ ನಾವು ಪುಣ್ಯವಂತರು ಎನಿಸುತ್ತದೆ. ಉತ್ತಮ ಗಾಳಿ, ನೀರು ಬೆಳಕು, ಪ್ರಕೃತಿ ಸೊಬಗನ್ನು ಮಡಿಲಲ್ಲಿಟ್ಟುಕೊಂಡು ಅದರ ನಡುವೆ ಆರೋಗ್ಯವಂತರಾಗಿ ಬದುಕುತ್ತಿದ್ದೇವೆ ಎಂದರೆ ಹಿರಿಯರು ಗಿಡ ಮರಗಳನ್ನು ಬೆಳೆಸಿರುವುದೆ ಕಾರಣ ಎಂದು ತಿಳಿಸಿದರು. ಮಾಜಿ ನಗರಸಭಾ ಸದಸ್ಯ ಎಚ್.ಎಸ್.ಜಗದೀಶ್,ಶೌರ್ಯಚರಣ್,ಸೋಮನಾಥ್, ನಂದನ್,ಜನಕರಾಜ್,ಮಂಜುನಾಥ್,ಸಂಜೈ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X