ಐಸಿಸಿ ಟೆಸ್ಟ್ ರ್ಯಾಂಕಿಂಗ್: ಭಾರತದ ನಂ.2 ಸ್ಥಾನ ಭದ್ರ

ದುಬೈ, ಜು.12: ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ಭಾರತ ದ್ವಿತೀಯ ಸ್ಥಾನ ಕಾಯ್ದುಕೊಂಡಿದ್ದರೆ, ರವಿಚಂದ್ರನ್ ಅಶ್ವಿನ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಹಾಗೂ ಬೌಲರ್‌ಗಳ ಪಟ್ಟಿಯಲ್ಲಿ ಎರಡನೆ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇಲ್ಲಿ ಮಂಗಳವಾರ ಹೊಸ ಐಸಿಸಿ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಗೊಳಿಸಲಾಗಿದ್ದು, ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದಾರೆ.
ನ್ಯೂಝಿಲೆಂಡ್‌ನ ಕೇನ್ ವಿಲಿಯಮ್ಸನ್ ಹಾಗೂ ದಕ್ಷಿಣ ಆಫ್ರಿಕದ ಹಾಶಿಮ್ ಅಮ್ಲ ಕ್ರಮವಾಗಿ 2ನೆ ಹಾಗೂ 3ನೆ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ನಂ.1 ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಭುಜನೋವಿನಿಂದ ಬಳಲುತ್ತಿರುವ ಆ್ಯಂಡರ್ಸನ್ ಪಾಕಿಸ್ತಾನ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.
ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ 3ನೆ ರ್ಯಾಂಕಿನಲ್ಲಿದ್ದರೆ, ಪಾಕಿಸ್ತಾನದ ಸ್ಪಿನ್ನರ್ ಯಾಸಿರ್ ಷಾ 4ನೆ ರ್ಯಾಂಕಿನಲ್ಲಿದ್ದಾರೆ.
Next Story





