ವಿಷ ಸೇವಿಸಿ ಆತ್ಮಹತ್ಯೆ
ಪುತ್ತೂರು, ಜು.13: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಪದವು ಎಂಬಲ್ಲಿ ಗುರುವಾರ ನಡೆದಿದೆ.
ಪದವು ನಿವಾಸಿ ಗೋವಿಂದ ನಾಯ್ಕ (75) ಆತ್ಮಹತ್ಯೆ ಮಾಡಿಕೊಂಡವರು.
ತನ್ನ ಪತ್ನಿಯ ಅಸೌಖ್ಯದಿಂದ ಮನನೊಂದು ಗೋವಿಂದ ನಾಯ್ಕ ಅವರು ಮಂಗಳವಾರ ರಾತ್ರಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಅಸ್ವಸ್ಥರಾಗಿದ್ದ ಅವರನ್ನು ತಕ್ಷಣವೇ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟರು.
ಮನೆಯಲ್ಲಿ ಯಾರೂ ಇಲ್ಲದ ಸಂದರ್ದಲ್ಲಿ ಅವರು ಈ ಕೃತ್ಯ ಎಸಗಿಕೊಂಡಿದ್ದು. ಅವರ ಪತ್ನಿ ಬೆಂಗಳೂರಿನ ತನ್ನ ಪುತ್ರಿಯ ಮನೆಯಲ್ಲಿದ್ದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





