Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕಿತ್ಸೆ ನೀಡಲು ನಿರಾಕರಿಸಿದ ಸಿಬ್ಬಂದಿ:...

ಚಿಕಿತ್ಸೆ ನೀಡಲು ನಿರಾಕರಿಸಿದ ಸಿಬ್ಬಂದಿ: ರೋಗಿ ಮೃತು್ಯ

ಸಾರ್ವಜನಿಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 July 2016 10:13 PM IST
share
ಚಿಕಿತ್ಸೆ ನೀಡಲು ನಿರಾಕರಿಸಿದ ಸಿಬ್ಬಂದಿ: ರೋಗಿ ಮೃತು್ಯ

 ಅಂಕೋಲಾ, ಜು.13: ಪಟ್ಟಣದ ಖಾಸಗಿ ಆಸ್ಪತ್ರೆಯೊಂದರಲ್ಲ್ಲಿ ಮಂಗಳವಾರ ಬೆಳಗಿನ ಜಾವ ಭಾವಿಕೇರಿಯಿಂದ ಬಂದ ರೋಗಿಯೋರ್ವರಿಗೆ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸಿರುವುದರಿಂದ ಆತನ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಬುಧವಾರ ಪಟ್ಟಣದ ಕಮಲಾ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಭಾವಿಕೇರಿ ಕಾನಬೀರ ಕೊಪ್ಪದ ಅರವಿಂದ ವಿಷ್ಣು ಆಚಾರಿ (50)ಮೃತ ವ್ಯಕ್ತಿ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಮನೆಯವರು ಮಂಗಳವಾರ ಬೆಳಗೆ ಜಾವ ಆಸ್ಪತ್ರೆಗೆ ಕರೆ ತಂದರು. ಆದರೆ ಅಲ್ಲಿದ್ದ ಸಿಬ್ಬಂದಿ ರೋಗಿಗೆ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸಿದರು ಎಂದು ಆರೋಪಿಸಲಾಗಿದೆ. ಬಳಿಕ ಆರ್ಯ ಮೆಡಿಕಲ್ ಸೆಂಟರ್ ಹಾಗೂ ಕ್ರಿಸ್ತ ಮಿತ್ರ ಆಶ್ರಮ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಅಲ್ಲಿಯೂ ಕೂಡ ಸಿಬ್ಬಂದಿಯಿಂದ ಸ್ಪಂದನೆ ಸಿಗದಿದ್ದರಿಂದಾಗಿ ದಿಕ್ಕು ತೋಚದೆ ಇವರು ಕುಮಟಾದ ಆಸ್ಪತ್ರೆಗೆ ತೆರಳಿದರು.

ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸಲು ವೈದ್ಯರು ಸೂಚಿಸಿದರು. ಅದರಂತೆ ಮಣಿಪಾಲಕ್ಕೆ ತೆರಳುತ್ತಿದ್ದಾಗ ಕುಂದಾಪುರ ಸಮೀಪ ದಾರಿ ಮಧ್ಯದಲ್ಲಿಯೇ ಅರವಿಂದ ಆಚಾರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿಯೇ ರೋಗಿಗೆ ಚಿಕಿತ್ಸೆ ದೊರೆತಿದ್ದಲ್ಲಿ ಆತ ಬದುಕುಳಿಯುವ ಸಾಧ್ಯತೆಯಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆಸ್ಪತ್ರೆಯ ಮುಖ್ಯಸ್ಥ ಡಾ. ಡಿ.ಎಲ್. ಭಟ್ಕಳ ಮಾತನಾಡಿ, ಸಾಧ್ಯವಾದಷ್ಟು ಜನರಿಗೆ ನೆರವಾಗುವ ಕಾರ್ಯವನ್ನು ಮಾಡುತ್ತಿದ್ದೇವೆ. ಆದರೂ ಕೂಡ ನಮ್ಮ ಸಿಬ್ಬಂದಿಯಿಂದ ತೊಂದರೆ ಉಂಟಾಗುತ್ತಿರುವ ಸಣ್ಣ ಪುಟ್ಟ ಉದಾಹರಣೆಗಳಿವೆ. ನೊಂದವರು ನಮ್ಮ ಸಿಬ್ಬಂದಿಯ ವಿರುದ್ಧ ಲಿಖಿತವಾಗಿ ದೂರು ನೀಡಬಹುದು ಎಂದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಭಾವಿಕೇರಿ ಗ್ರಾಪಂ ಸದಸ್ಯ ಉದಯ ವಾಮನ ನಾಯಕ್‌ಮಾತನಾಡಿ, ಕೆ.ಎಲ್.ಇ ಆಸ್ಪತ್ರೆಯ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ಆಸ್ಪತ್ರೆಯಲ್ಲಿರುವ ಕೆಲ ಸಿಬ್ಬಂದಿಯ ನಿರ್ಲಕ್ಷ್ಯತನದಲ್ಲಿ ಆಸ್ಪತ್ರೆಯ ಗೌರವಕ್ಕೆ ಧಕ್ಕೆ ಬರುತ್ತದೆ ಎಂದರು. ಈ ಸಂದರ್ಭದಲ್ಲಿ ಈ ಪ್ರಕರಣವನ್ನು ಪ್ರಭಾಕರ ಕೋರೆಯವರ ಗಮನಕ್ಕೆ ತಂದರು. ತಾಪಂ ಸದಸ್ಯ ಸಂಜೀವ ಕುಚಿನಾಡ, ಭಾವಿಕೇರಿ ಗ್ರಾಪಂ ಉಪಾಧ್ಯಕ್ಷೆ ಶೋಭಾ ಶ್ರೀಧರ ನಾಯ್ಕ, ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ನಾಗರಾಜ ಆಚಾರ್ಯ, ಕಾರ್ಯದರ್ಶಿ ಸಂತೋಷ್ ಆಚಾರ್ಯ, ಖಜಾಂಚಿ ಕೃಷ್ಣಾ ವಿರ್ಜಾನಕರ, ವಿಶ್ವಕರ್ಮ ಯುವ ವೇದಿಕೆಯ ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಪ್ರಮುಖರಾದ ರಾಮಕೃಷ್ಣ ನಾಯಕ, ನಾಗೇಶ ಆಚಾರ್ಯ, ದತ್ತಾ ಆಚಾರ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X