ಶಿವಮೊಗ್ಗ: ಎಸ್ಪಿ ನೇತೃತ್ವದಲ್ಲಿ ರೌಡಿ ನಿಗ್ರಹ ದಳ ರಚನೆ

<ಬಿ. ರೇಣುಕೇಶ್
ಶಿವಮೊಗ್ಗ, ಜು. 13: ಶಿವಮೊಗ್ಗ ಹಾಗೂ ಭದ್ರಾ ವತಿ ನಗರಗಳಲ್ಲಿ ಹೆಚ್ಚಾಗುತ್ತಿರುವ ರೌಡಿಗಳು, ಸಮಾಜಘಾತುಕ ವ್ಯಕ್ತಿಗಳ ಉಪಟಳಕ್ಕೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್‌ರವರು ದಕ್ಷ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರೌಡಿ ನಿಗ್ರಹ ದಳ ರಚನೆ ಮಾಡಿದ್ದು, ಕ್ರಿಮಿನಲ್ಸ್‌ಗಳ ನಿದ್ದೆಗೆಡುವಂತೆ ಮಾಡಿದೆ. ತಮ್ಮ ನೇರ, ನಿರ್ಭೀತ ಕಾರ್ಯವೈಖರಿಯ ಮೂಲಕ ಜನಮಾನಸದಲ್ಲಿ ಉತ್ತಮ ಹೆಸರು ಸಂಪಾದಿಸಿರುವ ಶಿವಮೊಗ್ಗ ನಗರದ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ರೌಡಿ ನಿಗ್ರಹ ದಳವನ್ನು ಎಸ್ಪಿ ರವಿ ಡಿ. ಚೆನ್ನಣ್ಣನವರ್, ಈಗಾಗಲೇ ಕಾರ್ಯಾಚರಣೆ ಆರಂಭಿಸಿ ಸದ್ದಿಲ್ಲದೆ ಹಲವು ಕ್ರಿಮಿನಲ್‌ಗಳನ್ನು ಹೆಡೆಮುರಿ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬಡ್ಡಿಂಗ್ ರೌಡಿಗಳು: ಇತ್ತೀಚೆಗೆ ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ಅಪರಾಧ ಚಟುವಟಿಕೆ ಚಿಗುರಿಕೊಳ್ಳುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ ನಗರದ ವಿದ್ಯಾನಗರದ ಬಳಿ ಪೊಲೀಸ್ ಠಾಣೆಯ ಆವರಣದಲ್ಲಿಯೇ ಗುತ್ತಿಗೆದಾರನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆದಿತ್ತು. ಮತ್ತೊಂದೆಡೆ ನಗರದ ವಿವಿಧ ಬಡಾವಣೆಗಳಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಸಣ್ಣಪುಟ್ಟ ಹೊಡೆದಾಟಗಳಲ್ಲಿ ಭಾಗಿಯಾಗುತ್ತಿದ್ದರು. ಹದಿಹರಿಯದ ಯುವಕರು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವುದು ಹೆಚ್ಚಾಗುತ್ತಿತ್ತು. ಇದರ ಜೊತೆಗೆ ಕೆಲ ರೌಡಿಗಳು ಹಫ್ತಾ ವಸೂಲಿ, ರಿಯಲ್ ಎಸ್ಟೇಟ್‌ಗಳಂತಹಾ ಅಕ್ರಮ ವ್ಯವಹಾರಗಳಲ್ಲಿ ಕೈಯಾಡಿಸಿಕೊಂಡು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ನಗರದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿಕೊಂಡಿದ್ದರು ಎನ್ನಲಾಗಿದೆ.
ಅತ್ಯಂತ ಗುಪ್ತವಾಗಿ ಸಮಾಜ ಘಾತುಕ ಶಕ್ತಿಗಳ ಮಾಹಿತಿ ಸಂಗ್ರಹಿಸಿರುವ ಪೋಲಿಸ್ ಇಲಾಖೆ, ಇದೀಗ ಈ ಶಕ್ತಿಗಳನ್ನು ಮಟ್ಟ ಹಾಕಲು ರೌಡಿ ನಿಗ್ರಹ ದಳ ರಚನೆ ಮಾಡಿದೆ ಎಂದು ತಿಳಿದು ಬಂದಿದೆ.
ದೊಡ್ಡ ದಂಡು: ಭದ್ರಾವತಿ ನಗರದಲ್ಲಂತೂ ರೌಡಿಗಳು ಹಾಗೂ ಕ್ರಿಮಿನಲ್ಸ್‌ಗಳ ಹಾವಳಿ ವಿಪರೀತ ಮಟ್ಟಕ್ಕೆ ತಲುಪಿದೆ. ರಾಜಕೀಯ ಬೆಂಬಲವಿರುವ ಹಲವು ಕ್ರಿಮಿನಲ್ಸ್‌ಗಳಿಗೆ ಪೊಲೀಸರ ಭಯವೇ ಇಲ್ಲವಾಗಿದೆ. ಇದರಿಂದ ಕ್ರಿಮಿನಲ್ಸ್‌ಗಳ ಹಾವಳಿಯಿಂದಾಗಿ ಸ್ಥಳೀಯ ನಾಗರಿಕರು ಅಕ್ಷರಶಃ ರೋಸಿ ಹೋಗಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲೂ ಸ್ಥಳೀಯರು ಹಿಂದೇಟು ಹಾಕುತ್ತಿದ್ದರು. ಅಲ್ಲದೆ, ಹಲವು ಪಾತಕಿಗಳು ರಾಜ್ಯದ ವಿವಿಧೆಡೆಗಳಲ್ಲಿ ದರೋಡೆ, ಸುಲಿಗೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಮೂಲಕ ಪೊಲೀಸರ ನಿದ್ದೆಗೆಡುವಂತೆ ಮಾಡಿದ್ದಾರೆ. ಭದ್ರಾವತಿ ನಗರದಲ್ಲಿ ಬೀಡುಬಿಟ್ಟಿರುವ ರೌಡಿಗಳು, ಕ್ರಿಮಿನಲ್ಸ್‌ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕೆಂದು ನಿರ್ಧರಿಸಿರುವ ಎಸ್ಪಿ ರವಿ ಡಿ. ಚೆನ್ನಣ್ಣನವರ್‌ರವರು ಸ್ಥಳೀಯ ಪೊಲೀಸರು ಮೂಲಕ ಸಕ್ರೀಯವಾಗಿರುವ ಪಾತಕಿಗಳ ಸಮಗ್ರ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಯಾವುದೇ ಒತ್ತಡಕ್ಕೆ ಮಣಿಯದೆ ಈ ಪಾತಕಿಗಳನ್ನು ಮಟ್ಟ ಹಾಕುವಂತೆ ರೌಡಿ ನಿಗ್ರಹ ದಳಕ್ಕೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಫೀಲ್ಡಿಗೆ!: ರೌಡಿ ನಿಗ್ರಹ ದಳದ ನೇತೃತ್ವವಹಿಸಿರುವ ಇನ್‌ಸ್ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ನೇತೃತ್ವದ ಪೊಲೀಸ್ ತಂಡ ಈಗಾಗಲೇ ಕಾರ್ಯಾಚರಣೆಗಿಳಿದಿದ್ದು, ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಲವು ರೌಡಿಗಳನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.
ರೌಡಿಗಳ ಭೇಟೆಯಲ್ಲಿ ಶಿವಮೊಗ್ಗ ರೌಡಿ ನಿಗ್ರಹದಳ ಸಕ್ರಿಯವಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕ್ರಿಮಿನಲ್‌ಗಳ ಎದೆಯಲ್ಲಿ ನಡುಕ ಉಂಟಾಗಿದ್ದು, ಕೆಲವರು ತಲೆ ಮರೆಸಿ ಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ರೌಡಿ ನಿಗ್ರಹ ದಳ ಕಾರ್ಯಾಚರಣೆಗಿಳಿದಿರುವುದು ನಾಗರಿಕ ವಲಯದಲ್ಲಿ ವ್ಯಾಪಕ ಚರ್ಚೆಗೀಡಾಗಿರುವುದಂತೂ ಸತ್ಯ. 14 ಕೂ್ಕ ಅಧಿಕ ರೌಡಿಗಳ ಸೆರೆ:
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ ಅವಧಿಯಲ್ಲಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ಸುಮಾರು 14 ರೌಡಿಗಳನ್ನು ರೌಡಿ ನಿಗ್ರಹ ದಳದ ಇನ್‌ಸ್ಪೆಕ್ಟರ್ ಕೆ.ಟಿ. ಗುರುರಾಜ್, ಸಬ್ ಇನ್‌ಸ್ಪೆೆಕ್ಟರ್ ಅಭಯಪ್ರಕಾಶ್ ಸೋಮನಾಳ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಬಂಧಿತರನ್ನು ಅರುಣ್ (24), ಅನಿಲ್ (22), ಸೋಹೆಲ್ (23), ವಿನಯ್ (22), ಪೀಟರ್ (19), ಸೂರಜ್, (21), ಶಪು (20), ನಜ್ಜು (27) ಎಂದು ತಿಳಿದು ಬಂದಿದೆ.ಇಷ್ಟಕ್ಕೇ ಸುಮ್ಮನಾಗದ ರೌಡಿ ನಿಗ್ರಹ ದಳ ತನ್ನ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮತ್ತಷ್ಟು ರೌಡಿಗಳ ಬಂಧನ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಯುವತಿ ಯರು - ಮಹಿಳೆಯರಿಗೆ ಕಿರುಕುಳ ನೀಡುತ್ತಿರು ವವರನ್ನು ಪತ್ತೆ ಹಚ್ಚುವ ಉದ್ದೇಶದಿಂದ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ. ಈಗಾಗಲೇ ಈ ತಂಡವು ಹಲವು ಕಿಡಿಗೇಡಿಗಳನ್ನು ವಶಕ್ಕೆ ಪಡೆದು, ಇವರ ವಿರುದ್ಧ ಕಾನೂನು ರೀತಿಯ ಕ್ರಮ ಜರಗಿಸಲಾಗುತ್ತಿದೆ.
<
ರವಿ ಡಿ. ಚೆನ್ನಣ್ಣನವರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಎಸಿ್ಪ ಮನವಿ:
ಲ್ಯಾಂಡ್ ಮಾಫಿಯಾ, ಮೀಟರ್ ಬಡ್ಡಿ ವ್ಯವಹಾರ, ಬೆದರಿಕೆ ಹಾಕುವುದು, ಹಪ್ತಾ ವಸೂಲಿ, ಗಲಾಟೆ ಮಾಡುವುದು ಸೇರಿದಂತೆ ಸಮಾಜಘಾತುಕ ಶಕ್ತಿಗಳಿಂದ ತೊಂದರೆ ಉಂಟಾದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಎಸ್ಪಿ ರವಿ ಡಿ. ಚೆನ್ನಣ್ಣನವರ್‌ನಾಗರಿಕರಿಗೆ ಮನವಿ ಮಾಡಿದ್ದಾರೆ.







