ಜಿಲ್ಲಾಡಳಿತದಿಂದ ಸೂಕ್ತ ಬಂದೋಬಸ್ತ್: ಡಿಸಿ
ಇಂದು ಕೊಡಗು ಬಂದ್
ಮಡಿಕೇರಿ, ಜು.13 : ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಜು. 14ರಂದು ಬಂದ್ ಕರೆ ನೀಡಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜು.14 ರಂದು ಪಿಯುಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಜಿಲ್ಲೆಯ ಮೂರು ತಾಲೂಕುಗಳ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಯಾವುದೇ ರೀತಿಯ ತೊಂದರೆ ನೀಡದೆ ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ವಿವಿಧ ಸಂಘಟನೆಗಳು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಮಾಡಿಕೊಂಡಿದೆ. 1,200 ಪೊಲೀಸ್ ಸಿಬ್ಬಂದಿ, 150 ಪೊಲೀಸ್ ಅಧಿಕಾರಿಗಳು, 25 ಕೆ.ಎಸ್.ಆರ್.ಪಿ ಹಾಗೂ 3 ಗಸ್ತು ವಾಹನಗಳನ್ನು ನಿಯೋಜಿಲಾಗಿದೆ. 100 ರಿಂದ 150 ವಾಹನಗಳು ತಪಾಸಣೆ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ. ಅಗತ್ಯವಿರುವಲ್ಲಿ ವೃತ್ತಿಪರ ಛಾಯಾಗ್ರಾಹಕರು ಮತ್ತು ವೀಡಿಯೋ ಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ ಎಂದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಒ.ಆರ್. ಶ್ರೀರಂಗಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜೆ.ಜಿ. ಜಾದವ್, ಜಿ.ಪಂ. ಸಿಇಒ ಚಾರುಲತಾ ಸೋಮಲ್, ತಹಶೀಲ್ದಾರ್ ಕುಂಜಮ್ಮ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಇಂದು ದ್ವಿತೀಯ ಪಿಯು ಪೂರಕ ಪರೀಕ್ಷೆ :
ದ್ವಿತೀಯ ಪಿಯುಸಿ ಕನ್ನಡ ವಿಷಯದ ಪೂರಕ ಪರೀಕ್ಷೆ ನಿಗದಿಯಂತೆ ಜು. 14 ರಂದು ನಡೆಯಲಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪಿ.ಯು.ಸಿ ಪೂರಕ ಪರೀಕ್ಷೆಗೆ ಯಾವುದೇ ರೀತಿಯ ಅಡಚಣೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮನವಿ ಮಾಡಿದ್ದಾರೆ. ಕೇಂದ್ರಗಳಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆ ಹಾಗೂ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಆದೇಶ ಹೊರಡಿಸಿದ್ದಾರೆ.
ಮುನ್ನೆಚ್ಚರಿಕೆಗಾಗಿ ಅಧಿಕಾರಿಗಳ ಸಭೆ:







