Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಂಬಲ್ಡನ್‌ನಿಂದ ಸಿಖ್ ವ್ಯಕ್ತಿಯನ್ನು...

ವಿಂಬಲ್ಡನ್‌ನಿಂದ ಸಿಖ್ ವ್ಯಕ್ತಿಯನ್ನು ಹೊರದಬ್ಬಿದರು

ವಾರ್ತಾಭಾರತಿವಾರ್ತಾಭಾರತಿ13 July 2016 11:59 PM IST
share

ಲಂಡನ್, ಜು. 13: ಬ್ರಿಟನ್‌ನಲ್ಲಿ ‘ಬ್ರೆಕ್ಸಿಟ್’ (ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವುದು) ನಂತರದ ಜನಾಂಗೀಯ ನಿಂದನೆ ಹೇಗಿರಬಹುದು ಎನ್ನುವ ಮುನ್ಸೂಚನೆಯನ್ನು ಕಳೆದ ವಾರ ವಿಂಬಲ್ಡನ್‌ನಲ್ಲಿ ನಡೆದ ಘಟನೆಯೊಂದು ನೀಡಿದೆ. ವಿಂಬಲ್ಡನ್ ಪಂದ್ಯದ ಟಿಕೆಟ್ ಪಡೆಯುವುದಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಸಿಖ್ ವ್ಯಕ್ತಿಯೊಬ್ಬರನ್ನು ಅಲ್ಲಿಂದ ಹೊರದಬ್ಬಲಾಯಿತು. ಆ ವ್ಯಕ್ತಿ ತನ್ನ ಸುತ್ತಲಿದ್ದ ಜನರಿಗೆ ‘‘ಕಿರಿ ಕಿರಿ’’ ಉಂಟು ಮಾಡುತ್ತಿದ್ದರು ಎನ್ನುವುದೇ ಇದಕ್ಕೆ ಕಾರಣ.

ಆ ಟೆನಿಸ್ ಪ್ರೇಮಿಯು ಬಳಿಕ ಫೇಸ್‌ಬುಕ್‌ನಲ್ಲಿ ತನ್ನ ಹತಾಶೆಯನ್ನು ಹರಿಯಬಿಟ್ಟಿದ್ದಾರೆ. ಆದರೆ, ತನ್ನ ಗುರುತನ್ನು ಬಹಿರಂಗಪಡಿಸಲು ಅವರು ಇಚ್ಛಿಸಿಲ್ಲ.

ವಿಂಬಲ್ಡನ್‌ನ ಸೆಂಟರ್ ಕೋರ್ಟ್‌ನ ಟಿಕೆಟ್‌ಗಾಗಿ ರಾತ್ರಿ ಸರದಿಯಲ್ಲಿ ನಿಂತಿದ್ದ ಅವರನ್ನು ಭದ್ರತಾ ಸಿಬ್ಬಂದಿ ಹೊರದಬ್ಬಿದ್ದರು. ಭದ್ರತಾ ಸಿಬ್ಬಂದಿ ಜನಾಂಗೀಯವಾದಿಗಳಂತೆ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅವರು ಫೇಸ್‌ಬುಕ್‌ನಲ್ಲಿ ತನ್ನ ಹತಾಶೆಯನ್ನು ವ್ಯಕ್ತಪಡಿಸಿದ ಬಳಿಕ ಹಲವು ಮಂದಿ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರ ಪೈಕಿ ಕೆಲವರು ಅಧಿಕಾರಿಗಳಿಗೆ ದೂರು ಕೊಡುವಂತೆಯೂ ಒತ್ತಾಯಿಸಿದ್ದಾರೆ.

‘‘ನಿಮ್ಮಿಂದಾಗಿ ನಿಮ್ಮ ಸುತ್ತಲಿರುವ ಕೆಲವು ಜನರು ಇರಿಸುಮುರಿಸಿಗೊಳಗಾಗಿದ್ದಾರೆ. ಹಾಗಾಗಿ, ನಿಮ್ಮ ಬಗ್ಗೆ ದೂರು ತೆಗೆದುಕೊಂಡು, ತಕ್ಷಣ ಇಲ್ಲಿಂದ ಹೋಗುವಂತೆ ನಿಮಗೆ ಸೂಚನೆ ನೀಡಬೇಕಾಗಿದೆ, ಸರ್’’ ಎಂದು ಭದ್ರತಾ ಸಿಬ್ಬಂದಿ ಹೇಳಿರುವುದಾಗಿ ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

‘‘ನನಗೆ ಆಘಾತವಾಯಿತು. ನಾನು ಪ್ರತಿಭಟನೆ ನಡೆಸಬೇಕಾಗಿತ್ತು ಹಾಗೂ ಮಾತನಾಡಬೇಕಾಗಿತ್ತು ಎಂದು ಈಗ ಅನಿಸುತ್ತಿದೆ. ಆದರೆ, ನಾನು ಹಿಂಜರಿದೆ ಹಾಗೂ ವೌನವಾಗಿ ಅಲ್ಲಿಂದ ಹೊರ ಹೋದೆ. ಇನ್ನು ನನಗೆ ಅಲ್ಲಿಗೆ ಇನ್ನೊಮ್ಮೆ ಹೋಗಬೇಕೆಂದು ಅನಿಸುವುದಿಲ್ಲ. ವಿಂಬಲ್ಡನ್ ಈಗಲೂ ನನ್ನ ನೆಚ್ಚಿನ ಪಂದ್ಯಾವಳಿಗಳ ಪೈಕಿ ಒಂದಾಗಿದೆ’’ ಎಂದು ಅವರು ‘ಮೆಟ್ರೊ ಯುಕೆ’ಗೆ ಹೇಳಿದ್ದಾರೆ.

ವಿಂಬಲ್ಡನ್ ಅಧಿಕಾರಿಗಳ ಪ್ರತಿಕ್ರಿಯೆ: ‘‘ಇಂದು ಬೆಳಗ್ಗೆ (ಶುಕ್ರವಾರ) 4:42ಕ್ಕೆ ಸರತಿ ಸಾಲಿನಿಂದ ಹೊರಹೋಗುವಂತೆ ವ್ಯಕ್ತಿಯೊಬ್ಬರಿಗೆ ಸೂಚಿಸಲಾಯಿತು ಎಂಬುದನ್ನು ನಾವು ಖಚಿತಪಡಿಸುತ್ತೇವೆ. ಅವರ ವರ್ತನೆಯ ಬಗ್ಗೆ ಅವರೊಂದಿಗೆ ಸರತಿ ಸಾಲಿನಲ್ಲಿ ಇದ್ದ ಹಲವಾರು ಮಂದಿಯಿಂದ ದೂರುಗಳು ಬಂದ ಬಳಿಕ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ವರ್ಷದ ವಿಂಬಲ್ಡನ್ ಚಾಂಪಿಯನ್‌ಶಿಪ್ ವೇಳೆ, ಸರತಿ ಸಾಲಿನಲ್ಲಿನ ಅವರ ವರ್ತನೆ ಬಗ್ಗೆ ಆರು ಬಾರಿ ಅವರಿಗೆ ಎಚ್ಚರಿಕೆ ನೀಡಲಾಗಿತ್ತು’’ ಎಂದು ವಿಂಬಲ್ಡನ್ ಅಧಿಕಾರಿಗಳು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X