Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ಪ್ರಧಾನಿಯಾಗಿ ತೆರೇಸಾ ಮೇ...

ಬ್ರಿಟನ್ ಪ್ರಧಾನಿಯಾಗಿ ತೆರೇಸಾ ಮೇ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ14 July 2016 6:12 PM IST
share
ಬ್ರಿಟನ್ ಪ್ರಧಾನಿಯಾಗಿ ತೆರೇಸಾ ಮೇ ಅಧಿಕಾರ ಸ್ವೀಕಾರ

ಲಂಡನ್, ಜು. 14: ಬ್ರಿಟಿಶ್ ರಾಣಿ ದ್ವಿತೀಯ ಎಲಿಝಬೆತ್ ಬುಧವಾರ ತೆರೇಸಾ ಮೇಯನ್ನು ನೂತನ ಪ್ರಧಾನಿಯಾಗಿ ನೇಮಿಸಿದರು.

ಬಕಿಂಗ್‌ಹ್ಯಾಮ್ ಅರಮನೆಯಲ್ಲಿ ನಡೆದ ಸಭೆಯೊಂದರಲ್ಲಿ ತೆರೇಸಾ ರಾಣಿಗೆ ನಮಿಸುವುದನ್ನು ತೋರಿಸುವ ಅಧಿಕೃತ ಚಿತ್ರವೊಂದನ್ನು ಬಿಡುಗಡೆ ಮಾಡಲಾಗಿದೆ. ಬ್ರಿಟನ್‌ನ ಅಲಿಖಿತ ಸಂವಿಧಾನದ ಪ್ರಕಾರ, ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತ ಹೊಂದಿರುವ ಪಕ್ಷದ ನಾಯಕ/ನಾಯಕಿಯನ್ನು ಸರಕಾರ ರಚಿಸುವಂತೆ ರಾಣಿ/ರಾಜ ಸೂಚಿಸುತ್ತಾರೆ.

ಮಾರ್ಗರೆಟ್ ಥ್ಯಾಚರ್ ಬಳಿಕ ಮೇ ಬ್ರಿಟನ್‌ನ ಎರಡನೆ ಮಹಿಳಾ ಪ್ರಧಾನಿಯಾಗಿದ್ದಾರೆ. ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿರುವ ‘ಬ್ರೆಕ್ಸಿಟ್’ ತೀರ್ಪನ್ನು ಜಾರಿಗೊಳಿಸುವ ಗುರುತರ ಹೊಣೆ 59 ವರ್ಷ ಪ್ರಾಯದ ನಿಷ್ಠುರ ಮಾತಿನ ತೆರೇಸಾ ಮೇಲಿದೆ.

ಇದಕ್ಕೂ ಮೊದಲು ಪ್ರಧಾನಿ ಡೇವಿಡ್ ಕ್ಯಾಮರೂನ್ ತನ್ನ ರಾಜೀನಾಮೆ ಪತ್ರವನ್ನು ರಾಣಿಗೆ ಸಲ್ಲಿಸಿದರು. ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರಬೇಕೆಂದು ಜನಮತಗಣನೆಯಲ್ಲಿ ಬ್ರಿಟನಿಗರು ಬಹುಮತದ ಅಭಿಪ್ರಾಯ ವ್ಯಕ್ತಪಡಿಸಿದ ಬಳಿಕ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರವನ್ನು ಕ್ಯಾಮರೂನ್ ವ್ಯಕ್ತಪಡಿಸಿದ್ದರು.

ಬ್ರೆಕ್ಸಿಟ್ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಲು ಒತ್ತಡ

ಐರೋಪ್ಯ ಒಕ್ಕೂಟದಿಂದ ಪ್ರತ್ಯೇಕಗೊಳ್ಳುವ ಕಲಾಪಗಳನ್ನು ಆರಂಭಿಸುವಂತೆ ಬ್ರಿಟನ್‌ನ ನೂತನ ಪ್ರಧಾನಿ ತೆರೇಸಾ ಮೇಗೆ ಐರೋಪ್ಯ ಒಕ್ಕೂಟ ನಾಯಕರು ಬುಧವಾರವೇ ಒತ್ತಡ ಹೇರಿದ್ದಾರೆ.

ಬ್ರಿಟನ್‌ನ ನೂತನ ಪ್ರಧಾನಿಯೊಂದಿಗೆ ‘‘ಫಲದಾಯಕ ಕೆಲಸದ ಬಾಂಧವ್ಯ’’ವನ್ನು ತಾನು ಎದುರುನೋಡುತ್ತಿರುವುದಾಗಿ ಕಿರು ಅಭಿನಂದನಾ ಪತ್ರದಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷ ಡೊನಾಲ್ಡ್ ಟಸ್ಕ್ ಹೇಳಿದ್ದಾರೆ.

ಬ್ರೆಕ್ಸಿಟ್ ಮಾತುಕತೆಗಳ ಆರಂಭವನ್ನು ವಿಳಂಬಿಸದಂತೆ ಐರೋಪ್ಯ ಆಯೋಗದ ಅಧ್ಯಕ್ಷ ಜೀನ್-ಕ್ಲಾಡ್ ಜಂಕರ್ ತೆರೇಸಾರನ್ನು ಒತ್ತಾಯಿಸಿದ್ದಾರೆ.

ಇದೇ ಅಭಿಪ್ರಾಯವನ್ನು ಐರೋಪ್ಯ ಪಾರ್ಲಿಮೆಂಟ್‌ನ ಅಧ್ಯಕ್ಷ ಮಾರ್ಟಿನ್ ಶುಲ್ಝ್ ವ್ಯಕ್ತಪಡಿಸಿದರು.

ಬ್ರೆಕ್ಸಿಟ್ ಮಾತುಕತೆಗಳನ್ನು ಬೇಗನೆ ಆರಂಭಿಸುವಂತೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಕೂಡ ಬ್ರಿಟನ್‌ನ ನೂತನ ಪ್ರಧಾನಿಯನ್ನು ಒತ್ತಾಯಿಸಿದರು.

ಜರ್ಮನಿಯ ಚಾನ್ಸಲರ್ ಆ್ಯಂಜೆಲಾ ಮರ್ಕೆಲ್ ಕೂಡ ಫೋನ್ ಮೂಲಕ ತೆರೇಸಾರನ್ನು ಅಭಿನಂದಿಸಿ, ಬ್ರೆಕ್ಸಿಟ್ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡುವಂತೆ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X