Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ಸುಡಾನ್‌ನಿಂದ ಭಾರತೀಯರ ತೆರವಿಗೆ...

ದಕ್ಷಿಣ ಸುಡಾನ್‌ನಿಂದ ಭಾರತೀಯರ ತೆರವಿಗೆ ವಿ.ಕೆ.ಸಿಂಗ್ ನೇತೃತ್ವದಲ್ಲಿ ‘ಸಂಕಟ ಮೋಚನ’

ವಾರ್ತಾಭಾರತಿವಾರ್ತಾಭಾರತಿ14 July 2016 10:48 PM IST
share

ಹೊಸದಿಲ್ಲಿ, ಜು.14: ಯುದ್ಧ ಪೀಡಿತ ದಕ್ಷಿಣ ಸುಡಾನ್‌ನಲ್ಲಿ ಸಿಲುಕಿಕೊಂಡಿರುವ 300ಕ್ಕೂ ಹೆಚ್ಚು ಭಾರತೀಯರನ್ನು ತೆರವು ಗೊಳಿಸುವುದಕ್ಕಾಗಿ ಭಾರತವು ಗುರುವಾರ ಎರಡು ಸಿ-17 ಸೇನಾ ಸಾರಿಗೆ ವಿಮಾನಗಳನ್ನು ರಾಜಧಾನಿ ನಗರ ಜುಬಾಗೆ ಕಳುಹಿಸಿದೆ.

 ನೂರಾರು ಜೀವಗಳನ್ನು ಬಲಿಪಡೆದಿರುವ ಹಿಂಸಾಚಾರದಿಂದ ನಲುಗಿರುವ ದಕ್ಷಿಣ ಸುಡಾನ್‌ನಿಂದ ಭಾರತೀಯರನ್ನು ತೆರವುಗೊಳಿಸುವ ಈ ಕಾರ್ಯಾಚರಣೆಯನ್ನು ‘ಸಂಕಟ ಮೋಚನ’ ಎಂದು ಹೆಸರಿಸಲಾಗಿದ್ದು, ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ. ಸಿಂಗ್ ಅದರ ನೇತೃತ್ವ ವಹಿಸಿದ್ದಾರೆ.
ಸಿಂಗ್‌ರೊಂದಿಗೆ ವಿದೇಶಾಂಗ ವ್ಯವಹಾರ ಸಚಿವಾಲಯದ ಆರ್ಥಿಕ ಸಂಬಂಧ ಕಾರ್ಯದರ್ಶಿ ಅಮರ್ ಸಿನ್ಹಾ, ಜಂಟಿ ಕಾರ್ಯದರ್ಶಿ ಸತ್ಬೀರ್ ಸಿಂಗ್ ಹಾಗೂ ನಿರ್ದೇಶಕ ಅಂಜನಿ ಕುಮಾರ್ ಕೈಜೋಡಿಸಲಿದ್ದಾರೆ.
ಸುಡಾನ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಹಿಂದೆ ತರಲು ಸರ್ವ ಸಾಧ್ಯ ಪ್ರಯತ್ನವನ್ನು ತಾವು ಮಾಡಲಿದ್ದೇವೆಂದು ಸುಡಾನ್‌ಗೆ ಹೋಗುವ ಮೊದಲು ಜನರಲ್ ವಿ.ಕೆ. ಸಿಂಗ್ ಹೇಳಿದ್ದಾರೆ.
ಸಿಂಧುವಾಗಿರುವ ಭಾರತೀಯ ಪ್ರಯಾಣ ದಾಖಲೆಯಿರುವ ಭಾರತೀಯರಿಗಷ್ಟೇ ಗರಿಷ್ಠ 5 ಕಿ.ಗ್ರಾಂ ಕ್ಯಾಬಿನ್ ಬ್ಯಾಗೇಜ್ ಹಾಗೂ ತಪಾಸಣೆಗೊಳಗಾಗುವ ಸರಕು ಇಲ್ಲದವರಿಗಷ್ಟೇ ವಿಮಾನವೇರಲು ಅವಕಾಶ ನೀಡಲಾಗುವುದು. ಮಹಿಳೆಯರು ಹಾಗೂ ಮಕ್ಕಳಿಗೆ ಆದ್ಯತೆ ನೀಡಲಾಗುವುದು. ಹಿಂದಿರುಗುವ ವಿಮಾನಗಳು ಕೇವಲ ದಿಲ್ಲಿಯ ವರೆಗೆ ಮಾತ್ರ ಇರಲಿವೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಸರಕಾರಿ ಪಡೆಗಳು ಹಾಗೂ ಉಪಾಧ್ಯಕ್ಷ ರೀಕ್ ವಂಚರ್‌ಗೆ ನಿಷ್ಠವಾಗಿರುವ ಮಾಜಿ ಬಂಡುಕೋರರ ಪಡೆಗಳ ನಡುವೆ ಭಾರೀ ಕದನ ನಡೆಯುತ್ತಿರುವ ದಕ್ಷಿಣ ಸುಡಾನ್‌ನ ಬೆಳವಣಿಗೆಗಳ ಮೇಲೆ ಭಾರತವು ನಿಕಟ ನಿಗಾ ಇರಿಸಿದೆ. ಅದಕ್ಕಾಗಿ ಕಾರ್ಯಪಡೆಯೊಂದನ್ನು ರಚಿಸಲಾಗಿದೆ.
ಸಚಿವಾಲಯದ ಪ್ರಕಾರ ದಕ್ಷಿಣ ಸುಡಾನ್‌ನಲ್ಲಿ ಸುಮಾರು 600 ರಷ್ಟು ಭಾರತೀಯರಿದ್ದಾರೆ. ಅವರಲ್ಲಿ 450 ಮಂದಿ ಜುಬಾದಲ್ಲಿ ಹಾಗೂ 150ರಷ್ಟು ಜನ ರಾಜಧಾನಿಯ ಹೊರಗಿದ್ದಾರೆ. ಇದುವರೆಗೆ, ಭಾರತಕ್ಕೆ ಮರಳಲು ಸುಮಾರು 300 ಮಂದಿ ಅಲ್ಲಿನ ಭಾರತೀಯ ದೂತಾವಾಸದಲ್ಲಿ ಹೆಸರು ನೋಂದಾಯಿಸಿದ್ದಾರೆ.
ಕದನ ವಿರಾಮ: ದಕ್ಷಿಣ ಸುಡಾನ್‌ನ ಅಧ್ಯಕ್ಷ ಸಲ್ವಾ ಕೈರ್ ಸೋಮವಾರ ಕದನ ವಿರಾಮ ಘೋಷಿಸಿದ್ದರು. ಪ್ರತಿ ದಾಳಿಯನ್ನು ನಿಲ್ಲಿಸಿ ತಮ್ಮ ಪಡೆಗಳನ್ನು ನಿಯಂತ್ರಿಸಿ, ನಾಗರಿಕರನ್ನು ರಕ್ಷಿಸುವಂತೆ ಅವರು ಎಲ್ಲ ಕಮಾಂಡರ್‌ಗಳಿಗೆ ನಿರ್ದೇಶನ ನೀಡಿದ್ದಾರೆಂದು ವಾರ್ತಾ ಸಚಿವ ಮೈಕೆಲ್ ಮಕುಯಿ ಸರಕಾರಿ ಸ್ವಾಮ್ಯದ ಎಸ್‌ಎಸ್‌ಟಿವಿಯಲ್ಲಿ ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X