ಶವದ ಮೇಲೆ ಬಿಜೆಪಿ ರಾಜಕೀಯ: ಡಿಕೆಶಿ

ಮಂಗಳೂರು,ಜು.16: ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಆಗುತ್ತಿದ್ದು, ವರದಿ ಬಂದ ಬಳಿಕ ಸತ್ಯಾಂಶ ಬಹಿರಂಗವಾಗಲಿದೆ. ಆದರೆ ಬಿಜೆಪಿ ಶವದ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳ ನಿಮಿತ್ತ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿಯವರಿಗೆ ಆರೋಪ ಮಾಡುವುದೇ ಒಂದು ಚಾಳಿ ಎಂದು ಹೇಳಿದ ಅವರು, ಕಾಂಗ್ರೆಸ್‌ನಲ್ಲಿ ಸೂಟ್‌ಕೇಸ್ ಸಂಸ್ಕೃತಿ ಇಲ್ಲ. ಎಚ್.ಡಿ. ಕುಮಾರಸ್ವಾಮಿ ಮಾತಿಗೆ ತಲೆಬುಡ ಇಲ್ಲ. ಸಾಕ್ಷಾಧಾರ ಇದ್ದರೆ ಮಾತನಾಡಬೇಕೇ ಹೊರತು ಸುಮ್ಮನೆ ಮಾತನಾಡುವುದು ಸರಿಯಲ್ಲ ಎಂದು ಡಿವೈಎಸ್ಪಿ ಗಣಪತಿ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿಸಿದರು. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ. ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಲಾಗುವುದು ಎಂದು ಅವರು ಹೇಳಿದರು





