Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೋದಿ ಸರಕಾರ ಧರ್ಮಗಳ ನಡುವೆ ದ್ವೇಷ...

ಮೋದಿ ಸರಕಾರ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ16 July 2016 3:46 PM IST
share
ಮೋದಿ ಸರಕಾರ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಮಂಗಳೂರು, ಜು.16; ನರೇಂದ್ರ ಮೋದಿಯವರ ಕೇಂದ್ರ ಸರಕಾರ ಜಾತ್ಯಾತೀತ ತತ್ವಕ್ಕೆ ಬೆಂಕಿ ಹಚ್ಚಿ ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಿದೆ. ಈ ರೀತಿ ಮಾಡುವುದರಿಂದ ದೇಶಕ್ಕೆ ಒಳಿತಾಗುವುದಿಲ್ಲ. ಇದನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಮರ್ಥವಾಗಿದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅವರು ಇಂದು ಕಾಂಗ್ರೆಸ್ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಗರದ ಪುರಭವನದಲ್ಲಿ ನಡೆದ ಬ್ಲಾಕ್ ಮಟ್ಟದ ಪ್ರತಿನಿಧಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾಡಿದ ಸಾಧನೆಗಳನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ ಸಾಧನೆಯೆಂದು ಪ್ರಚಾರ ಮಾಡುತ್ತಿದೆ. ನಾವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೂ ಅದನ್ನು ಪ್ರಚಾರ ಮಾಡಲಿಲ್ಲ ಎಂದರು. ಕಳೆದ 50 ವರ್ಷಗಳಲ್ಲಿ ಆರೆಸ್ಸೆಸ್, ಬಿಜೆಪಿಯ ಹಿಂದಿನ ರೂಪ ಜನಸಂಘ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಾಕಿರಲಿಲ್ಲ. ತಮ್ಮ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಿರಲಿಲ್ಲ. ಇವರು ನಮಗೆ ದೇಶಭಕ್ತಿಯ ಪಾಠ ಕಲಿಸಲು ಹೊರಟಿದ್ದಾರೆ. ದೇಶದ ಸ್ವಾತಂತ್ರಕ್ಕಾಗಿ ಬಲಿದಾನ ಮಾಡಿದ ಪಕ್ಷಕ್ಕೆ ದೇಶಭಕ್ತಿಯ ಪಾಠ ಹೇಳುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಕಳೆದ 60 ವರ್ಷಗಳಿಂದ ದೇಶಕ್ಕೆ ಏನನ್ನು ಮಾಡಿಲ್ಲ ಎಂದು ಬಿಜೆಪಿ ಪ್ರಚಾರ ಮಾಡುತ್ತಿದೆ. ದೇಶವನ್ನು ಕಟ್ಟಿರುವುದು, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಾಗಿರಿಸಿರುವುದು ಕಾಂಗ್ರೆಸ್. ಬಂದರು, ವಿಮಾನ ನಿಲ್ದಾಣ, ಹೆದ್ದಾರಿ, ರೈಲು ವ್ಯವಸ್ಥೆಯನ್ನು ಕಟ್ಟಿದ್ದು ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ. ಯಾವುದೆ ಒಂದು ಪಟ್ಟಣ, ಊರು ಒಮ್ಮಿಂದೊಮ್ಮೆಗೆ ಸೃಷ್ಟಿಯಾಗುವುದಿಲ್ಲ. ಅದಕ್ಕೆ ಸಮಯ ತಗಲುತ್ತದೆ . ಅದೇ ರೀತಿ ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ದಿಯನ್ನು ಮಾಡಿದೆ ಎಂದು ಹೇಳಿದರು.ಕೇಂದ್ರ ಸರಕಾರ ಅಧಿಕಾರಕ್ಕೆ ಬಂದು 26 ತಿಂಗಳಾದರೂ ಕಪ್ಪು ಹಣ ವಾಪಾಸು ಬರಲಿಲ್ಲ.ಭರವಸೆಯಂತೆ 15 ಲಕ್ಷ ರೂದೇಶದ ನಾಗರಿಕರಿಗೆ ಸಿಕ್ಕಿಲ್ಲ. ಪ್ರತಿರ್ಷ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದವರು ವರ್ಷಕ್ಕೆ 2 ಲಕ್ಷ ಉದ್ಯೋಗ ಸೃಷ್ಟಿಸಲಿಲ್ಲ. 

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಇಳಿಕೆಯಾದರೂ ಪೆಟ್ರೋಲ್ ಬೆಲೆ ಇಳಿಸಲಿಲ್ಲ ಎಂದು ಹೇಳಿದರು. ಬಿಜೆಪಿ ಸರಕಾರ ನಾಲ್ಕಾಣೆಯ ಕೆಲಸ ಮಾಡಿ ಹನ್ನೆರಡಾಣೆಯ ಪ್ರಚಾರ ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ತಮ್ಮ ಕಾರ್ಯಕ್ರಮಗಳೆಂದು ಮಾರ್ಕೆಟಿಂಗ್ ಮಾಡುತ್ತಿದೆ. ಯಾವುದೆ ಸ್ಲೋಗನ್‌ನಿಂದ ಹೊಟ್ಟೆ ತುಂಬುವುದಿಲ್ಲ ಎಂಬುವುದನ್ನು ಕೇಂದ್ರ ಸರಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.ಅಂಬೇಡ್ಕರ್ ಅವರ 125ನೆ ಜನ್ಮದಿನಾಚರಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಅಂಧಶ್ರದ್ದೆಯನ್ನು ಹೋಗಲಾಡಿಸಲು ಕಾನೂನನ್ನು ತರುವ ಮೂಲಕ ಅವರಿಗೆ ಗೌರವ ನೀಡಬೇಕಾಗಿದೆ. ನೆಹರುರವರು ಹಿಂದು ಕೋಡ್‌ತರುವ ಸಂದರ್ಭದಲ್ಲಿ ಅದಕ್ಕೆ ಸಾಕಷ್ಟು ವಿರೋಧವಿತ್ತು. ನಂತರ ಅವರು ಹಂತಹಂತವಾಗಿ ಅದನ್ನು ಜಾರಿಗೆ ತಂದರು. ರಾಜ್ಯ ಸರಕಾರ ಯಾವ ಪದ್ದತಿಯು ಸಮಾಜಕ್ಕೆ ಕೇಡು ತರುತ್ತಿದೆಯೋ ಅದನ್ನು ತಡೆಯಲು ಪ್ರಯತ್ನ ಮಾಡಬೇಕು. ಬೆತ್ತಲೆ ಸೇವೆ, ಅಸ್ಪೃಶ್ಯತೆ, ನರಬಲಿ ನಿಷೇಧ ಮಾಡಿದರೆ ವಿಪಕ್ಷಗಳು ಅದನ್ನು ವಿರೋಧಿಸುವುದಿಲ್ಲ. ಅದನ್ನು ಜಾರಿಗೆ ತರುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಇತ್ತೀಚೆಗೆ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಶಾಂತರಾಮ ನಾಯ್ಕ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಸಲೀಂ ಅಹಮ್ಮದ್, ಮಂಗಳೂರು ಮಹಾನಗರಪಾಲಿಕೆ ಮೇಯರ್ ಕೆ.ಹರಿನಾಥ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಜೆ.ಆರ್.ಲೋಬೋ , ಶಕುಂತಳ ಶೆಟ್ಟಿ, ಮೊಯ್ದಿನ್ ಬಾವ, ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಶಾಸಕ ಕೆ.ವಿಜಯಕುಮಾರ್ ಶೆಟ್ಟಿ, ಎಐಸಿಸಿ ಸದಸ್ಯ ಪಿ.ವಿ.ಮೋಹನ್, ಕೆಪಿಸಿಸಿ ಸದಸ್ಯರಾದ ಮೊಹಮ್ಮದ್ ಮಸೂದ್, ಸುರೇಶ್ ಬಲ್ಲಾಳ, ತೇಜಸ್ವಿ ರಾಜ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಮತ ಡಿ ಗಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಸೇವಾದಳ ಮುಖ್ಯ ಸಂಘಟಕ ಅಶ್ರಫ್ ಎಚ್.ಎಂ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಬಾಲಕೃಷ್ಣ ಶೆಟ್ಟಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ , ಕಾಂಗ್ರೆಸ್ ಮುಖಂಡರುಗಳಾದ ಎಂ.ಎ ಗಫೂರ್, ಶಶಿಧರ್ ಹೆಗ್ಡೆ, ಕಳ್ಳಿಗೆ ತಾರನಾಥ ಶೆಟ್ಟಿ, ಮಂಜುನಾಥ ಭಂಡಾರಿ, ಪದ್ಮನಾಭ ನರಿಂಗಾನ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಬ್ಲೋಸಮ್ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X