Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಉರುಂಬಿ ಜಲವಿದ್ಯುತ್ ಯೋಜನೆ...

ಕಡಬ: ಉರುಂಬಿ ಜಲವಿದ್ಯುತ್ ಯೋಜನೆ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ16 July 2016 5:14 PM IST
share
ಕಡಬ: ಉರುಂಬಿ ಜಲವಿದ್ಯುತ್ ಯೋಜನೆ ವಿರೋಧಿಸಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಕಡಬ, ಜು.16: ಕುಮಾರಧಾರ ನದಿಗೆ ಕಳೆದ ಒಂದುವರೆ ದಶಕದಿಂದ ಸರಕಾರ ಏಳು ಕಡೆ ಕಿರು ಜಲವಿದ್ಯುತ್ ಉತ್ಪಾದನೆಗೆ ಕೆಲವು ಖಾಸಗಿ ಕಂಪೆನಿಗಳಿಗೆ ಕಾನೂನು ಬಾಹಿರವಾಗಿ ನೀಡಿದ ಅನುಮತಿಯನ್ನು ತಕ್ಷಣ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ರೈತರ ಒಗ್ಗೂಡುವಿಕೆಯಿಂದ ಜಿಲ್ಲಾಧಿಕಾರಿಗಳ ಮುಂದೆ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಎಚ್ಚರಿಸಿದರು. 

ಕುಮಾರಧಾರ ನದಿಗೆ ಕಿರುಜಲವಿದ್ಯುತ್ ಯೋಜನೆಯ ಅನುಷ್ಠಾನ ವಿರೋಧಿಸಿ ಶನಿವಾರ ಕಡಬ ವಿಶೇಷ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಕೃತಿ ವಿರೋಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಫಲವತ್ತಾದ ಭೂಮಿಯನ್ನು ನಾಶಪಡಿಸುವ ಹುನ್ನಾರದ ವಿರುದ್ಧ ರೈತರು ಜಾಗೃತರಾಗಬೇಕು. ರೈತರ ದಮನಕಾರಿ ಯೋಜನೆ ವಿರುದ್ದ ರೈತರು ಸೆಟೆದು ನಿಂತಾಗ ಭವಿಷ್ಯದ ಜನಾಂಗಕ್ಕೆ ನಮ್ಮ ಭೂಮಿ ಉಳಿಸಬಹುದು. ಪರಿಸರ ನಾಶ ಮಾಡುವ ಯೋಜನೆಯನ್ನು ಜಾರಿ ಮಾಡುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವರ್ಷದಲ್ಲಿ 40 ಲಕ್ಷ ಕೋಟಿ ರೂ.ಗಳನ್ನು ಕಂಪೆನಿಗಳಿಗೆ ನೀಡುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬೆಳೆಗಳಿಗೆ ಬೆಲೆಯಿಲ್ಲ. ಆದರೆ ಕೈಗಾರಿಕೆಗಳ ಉತ್ಪನ್ನಗಳಿಗೆ ದರ ಏರಿಕೆಯಾಗುತ್ತಿದೆ. ಯಾಕೆ ಈ ನೀತಿ ಎಂದು ಪ್ರಶ್ನಿಸಿದ ಅವರು ಸಾಮಾಜಿಕ ನ್ಯಾಯದಡಿ ಯೋಜನೆ ಅನುಷ್ಠಾನ ಮಾಡಿದರೆ ವಿರೋಧಿಸದೆ ಸ್ವಾಗತಿಸುತ್ತೇವೆ. ಕುಮಾರಧಾರ ನದಿಯಲ್ಲಿ ಕಿರುಜಲವಿದ್ಯುತ್ ಯೋಜನೆ ಅನುಷ್ಠಾನವನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು. ಸೂಕ್ತ ಸ್ಪಂದನೆ ಸಿಗದಿದ್ದಲ್ಲಿ ಹೋರಾಟದ ಸ್ವರೂಪ ಬದಲಾಗಲಿದೆ ಎಂದರು.

ಇದೇ ಸಂದರ್ಭ ಯೋಜನೆ ವಿಚಾರದಲ್ಲಿ ಮಾಹಿತಿ ನೀಡುವಂತೆ ಸ್ಥಳಕ್ಕೆ ಆಗಮಿಸಿದ ವಿಶೇಷ ತಹಶೀಲ್ದಾರ ಬಿ.ಲಿಂಗಯ್ಯರನ್ನು ಒತ್ತಾಯಿಸಿದರು. ಈ ಬಗ್ಗೆ ಮಾತನಾಡಿದ ತಹಶೀಲ್ದಾರ್, ಯೋಜನೆ ಸಂಬಂಧ 2014 ರಲ್ಲಿ ಜಿಲ್ಲಾಧಿಕಾರಿಯವರ ಸಮಕ್ಷಮದಲ್ಲಿ ನಡೆದ ಸಭೆಯಲ್ಲಿ ಚರ್ಚೆಯಾದಂತೆ ಕೊಲ್ಯ -ಪರಂಗಾಜೆ ನದಿ ತಟದಲ್ಲಿ ಜಂಟಿ ಸರ್ವೇಗೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಅಂತೆಯೇ ಯೋಜನೆ ಅನುಷ್ಠಾನವಾದಲ್ಲಿ ನೀರಿನ ಮಟ್ಟದ ಸರ್ವೇ ನಡೆಸಲಾಗಿದೆ. ಈ ಬಗ್ಗೆ ರೈತರಿಂದ ಅಕ್ಷೇಪ ವ್ಯಕ್ತವಾದುದರಿಂದ ಮೇಲಾಧಿಕಾರಿಗಳಿಗೆ ಲಿಖಿತವಾಗಿ ಬರೆಯಲಾಗುವುದು ಎಂದರು.

ಇದೇ ಸಂದರ್ಭ ಮಾತನಾಡಿದ ಉರುಂಬಿ ಅಣೆಕಟ್ಟು ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಗೋಗಾಟೆ, ಉರುಂಬಿಯಲ್ಲಿ 20 ಎಕರೆಗೂ ಹೆಚ್ಚು ಜಾಗದಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ಕಂಪೆನಿಯವರು ಬೇಲಿ ಹಾಕಿದ್ದಾರೆ. ಇದನ್ನು ತೆರವುಗೊಳಿಸಿ ಎಂದು ಒತ್ತಾಯಿಸಿದರು. ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಭರವಸೆ ನೀಡಿದರು.

ಅಲ್ಲದೆ, ಕ್ರಮಕೈಗೊಳ್ಳದಿದ್ದರೆ ಕಾನೂನು ಕ್ರಮಕ್ಕೆ ನಾವೇ ಮುಂದಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ ಎಚ್ಚರಿಸಿದರು. ಯೋಜನೆ ರದ್ದುಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್‌ರ ಮೂಲಕ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀಧರ ಶೆಟ್ಟಿ, ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ಧರ್ಣಪ್ಪ ಗೌಡ, ಶರತ್ ಮೊದಲಾದವರು ಪ್ರತಿಭಟನೆಯನ್ನು ಉದ್ದೇಶಿಸಿ ಯೋಜನೆ ವಿರುದ್ಧ ಮಾತನಾಡಿದರು.

ಮೆರವಣಿಗೆ, ಗೇಟು ತಳ್ಳಿ ಒಳ ನುಗ್ಗಿದ ಪ್ರತಿಭಟನಾಕಾರರು

ಕಡಬ ಶ್ರೀ ದುರ್ಗಾಂಬಿಕ ಅಮ್ಮನವರ ದೇವಳದ ಬಳಿ ಜಮಾಯಿಸಿ ಮೆರವಣಿಗೆ ಮುಖಾಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು. ಈ ಸಂದರ್ಭ ಕಚೇರಿಯ ಗೇಟು ಮುಚ್ಚಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಗೇಟು ತೆರೆಯುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು. ಪೊಲೀಸರು ಒಪ್ಪದಿದ್ದಾಗ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾಕಾರರು ಬಲವಂತವಾಗಿ ಗೇಟನ್ನು ತಳ್ಳಿ ಒಳನುಗ್ಗಿದ್ದರು. ಬೆರಳೆಣಿಕೆಯ ಪೊಲೀಸರು ಮೂಕಪ್ರೇಕ್ಷಕರಾದರು.

ರೈತರ ತಳ್ಳಾಟದೆದುರು ಪೊಲೀಸರ ಬಲ ಸಾಕಾರಗೊಳ್ಳಲಿಲ್ಲ. ಈ ಮಧ್ಯೆ ತಳ್ಳಾಟದಿಂದ ರೈತ ಕೃಷ್ಣಪ್ಪಎಂಬವರ ಕೈಬೆರಳಿಗೆ ಗಂಭೀರ ಗಾಯವಾಯಿತು. ಉಪ್ಪಿನಂಗಡಿ ವೃತ್ತ ನಿರೀಕ್ಷಕ ಅನಿಲ್ ಕುಲಕರ್ಣಿ, ಕಡಬ ಠಾಣಾಧಿಕಾರಿ ಉಮೇಶ್ ಉಪ್ಪಳಿಕೆ, ಉಪ್ಪಿನಂಗಡಿ ಠಾಣಾಧಿಕಾರಿ ಸಂಜೀವ ನಾಯ್ಕ ನೇತೃತ್ವದಲ್ಲಿ ಪೊಲೀಸರು ಬಂದೋಬಸ್ತು ಒದಗಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X