Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲದಲ್ಲಿ ಬಿಜೆಪಿಗೆ ಕಾಂಗ್ರೆಸ್...

ಅರುಣಾಚಲದಲ್ಲಿ ಬಿಜೆಪಿಗೆ ಕಾಂಗ್ರೆಸ್ ತಿರುಮಂತ್ರ ಪೇಮಾ ಖಂಡು ನೂತನ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ16 July 2016 7:19 PM IST
share
ಅರುಣಾಚಲದಲ್ಲಿ ಬಿಜೆಪಿಗೆ ಕಾಂಗ್ರೆಸ್ ತಿರುಮಂತ್ರ ಪೇಮಾ ಖಂಡು ನೂತನ ಮುಖ್ಯಮಂತ್ರಿ

ಇಟಾನಗರ್, ಜು.16: ಅರುಣಾಚಲಪ್ರದೇಶದಲ್ಲಿ ನಡೆದ ನಾಟಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ನಬಂ ಟುಕಿಯವರ ಬದಲಿಗೆ ಪ್ರೇಮ ಖಂಡು ಅವರನ್ನು ಹೊಸ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವಿಂದು ಆಯ್ಕೆ ಮಾಡಿದೆ. ಖಂಡು ಇಬ್ಬರು ಪಕ್ಷೇತರರು ಸಹಿತ 45 ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಸರಕಾರ ರಚನೆಗೆ ಅಹವಾಲು ಮಂಡಿಸಿದ್ದಾರೆ.
ಕ್ಷಿಪ್ರವಾಗಿ ಬದಲಾದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್‌ನಿಂದ ಕೆಳಗಿಳಿಸಲ್ಪಟ್ಟ ಬಂಡುಕೋರ ಮುಖ್ಯಮಂತ್ರಿ ಖಾಲಿಕೊ ಪುಲ್, 30 ಮಂದಿ ಬಂಡುಕೋರ ಶಾಸಕರೊಂದಿಗೆ ಕಾಂಗ್ರೆಸ್‌ನ ತೆಕ್ಕೆಗೆ ಮರಳಿದ್ದಾರೆ.
ರಾಜ್ಯಪಾಲ ತಥಾಗತ ರಾಯ್, ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಟುಕಿಯವರಿಗೆ ನಿರ್ದೇಶನ ನೀಡಿದ್ದರು. ಅದಕ್ಕೆ ಕೆಲವೇ ತಾಸುಗಳ ಮೊದಲು, ಕಾಂಗ್ರೆಸ್ ಶಾಸಕಾಂಗ ಪಕ್ಷವು ಸಭೆ ಸೇರಿ ದಿವಂಗತ ಮುಖ್ಯಮಂತ್ರಿ ದೋರ್ಜಿ ಖಂಡು ಅವರ ಪುತ್ರ, 37ರ ಹರೆಯದ ಪ್ರೇಮ ಖಂಡು ಅವರನ್ನು ತನ್ನ ಹೊಸ ನಾಯಕನನ್ನಾಗಿ ಆಯ್ಕೆ ಮಾಡಿತು.
 ಖಂಡು ಅವರ ಹೆಸರನ್ನು ಟುಕಿ ಸೂಚಿಸಿದ್ದು, ಹಾಜರಿದ್ದ 44 ಮಂದಿ ಶಾಸಕರು ಅದನ್ನು ಅವಿರೋಧವಾಗಿ ಅಂಗೀಕರಿಸಿದರು. ಉಚ್ಚಾಟಿತ ಮುಖ್ಯಮಂತ್ರಿ ಖಾಲಿಕೊ ಪುಲ್ ಬಂಡುಕೋರ ಶಾಸಕರೊಂದಿಗೆ ಸಭೆಗೆ ಹಾಜರಾಗಿದ್ದರು. ಆದರೆ, ಸ್ಪೀಕರ್ ನಬಂ ರೆಬಿಯಾ ಉಪಸ್ಥಿತರಿರಲಿಲ್ಲ.
60 ಸದಸ್ಯ ಬಲದ ಅರುಣಾಚಲಪ್ರದೇಶ ವಿಧಾನಸಭೆಯಲ್ಲಿ ಹಾಲಿ 58 ಸದಸ್ಯರಿದ್ದು, ಇಬ್ಬರು ಪಕ್ಷೇತರರು ಸಹಿತ 47 ಶಾಸಕರ ಬೆಂಬಲ ತನಗಿದೆಯೆಂದು ಕಾಂಗ್ರೆಸ್ ಪ್ರತಿಪಾದಿಸಿದೆ.
ಶಾಸಕಾಂಗ ಪಕ್ಷದ ಸಭೆಗೆ ಮೊದಲು ರಾಜ್ಯಪಾಲರನ್ನು ಭೇಟಿಯಾಗಿದ್ದ ಟುಕಿ, ಸಿಎಲ್‌ಪಿ ನಾಯಕ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಇಚ್ಛೆ ಹಾಗೂ ನೂತನ ನಾಯಕನ ಆಯ್ಕೆಯ ನಿರ್ಧಾರದ ಬಗ್ಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X