Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ: ಪ್ರಜಾಪ್ರಭುತ್ವದ ಪರವಾಗಿ ನಿಲ್ಲಿ...

ಟರ್ಕಿ: ಪ್ರಜಾಪ್ರಭುತ್ವದ ಪರವಾಗಿ ನಿಲ್ಲಿ ಎರ್ದೊಗಾನ್‌ರಿಂದ ಜನರಿಗೆ ಮೊಬೈಲ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ16 July 2016 10:49 PM IST
share
ಟರ್ಕಿ: ಪ್ರಜಾಪ್ರಭುತ್ವದ ಪರವಾಗಿ ನಿಲ್ಲಿ ಎರ್ದೊಗಾನ್‌ರಿಂದ ಜನರಿಗೆ ಮೊಬೈಲ್ ಸಂದೇಶ

ಅಂಕಾರ, ಜು. 16: ಟರ್ಕಿ ಅಧ್ಯಕ್ಷ ತಯ್ಯಿಪ್ ಎರ್ದೊಗಾನ್‌ ಶನಿವಾರ ತನ್ನ ದೇಶದ ಪ್ರಜೆಗಳ ಮೊಬೈಲ್‌ಗಳಿಗೆ ಸಂದೇಶವೊಂದನ್ನು ಕಳುಹಿಸಿ, ಪ್ರಜಾಪ್ರಭುತ್ವ ಮತ್ತು ಶಾಂತಿಯ ಪರವಾಗಿ ನಿಲ್ಲುವಂತೆ ಕರೆ ನೀಡಿದ್ದಾರೆ.
‘‘ಆರ್‌ಟಿ ಎರ್ದೊಗಾನ್‌’’ರಿಂದ ಬಂದ ಮೊಬೈಲ್ ಸಂದೇಶದಲ್ಲಿ ರಿಸೆಪ್ ತಯ್ಯಿಪ್ ಎರ್ದೊಗಾನ್‌ರ ಪೂರ್ಣ ಹೆಸರಿನ ಸಹಿಯಿದೆ.
ಸ್ವಲ್ಪವೇ ಸೈನಿಕರ ವಿರುದ್ಧ ಬೀದಿಗಿಳಿಯುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ.
‘‘ಇದಕ್ಕೆ ಅವರು ಭಾರೀ ಬೆಲೆಯನ್ನು ತೆರುತ್ತಾರೆ’’ ಎಂದು ಎರ್ದೊಗಾನ್‌ ಎಚ್ಚರಿಸಿದರು.
‘‘ಬಂಡಾಯ ದೇವರು ನಮಗೆ ನೀಡಿದ ಕಾಣಿಕೆಯಾಗಿದೆ. ಯಾಕೆಂದರೆ, ಇದು ನಮ್ಮ ಸೇನೆಯನ್ನು ಶುದ್ಧೀಕರಿಸಲು ನಮಗೆ ಅವಕಾಶ ನೀಡಿದೆ’’ ಎಂದರು.
ಬಳಿಕ, ಟ್ವಿಟರ್‌ನಲ್ಲಿ ಎಚ್ಚರಿಕೆಯೊಂದನ್ನು ನೀಡಿದ ಅವರು, ಇನ್ನೊಂದು ಕ್ಷಿಪ್ರಕ್ರಾಂತಿ ಯಾವುದೇ ಕ್ಷಣದಲ್ಲೂ ಸಂಭವಿಸಬಹುದು ಎಂದರು.
ಬಂಡುಕೋರ ಸೈನಿಕರು ಒತ್ತೆಯಾಳಾಗಿ ಇರಿಸಿದ್ದ ಸೇನಾ ಮುಖ್ಯಸ್ಥರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಕ್ಷಿಪ್ರಕ್ರಾಂತಿ ವಿಫಲವಾದರೂ, ನ್ಯಾಟೊ ಸದಸ್ಯ ದೇಶ ಟರ್ಕಿಯಲ್ಲಿ ಅದು ಸಾಕಷ್ಟು ಅಸ್ಥಿರತೆಯನ್ನು ಉಂಟು ಮಾಡಬಹುದಾಗಿದೆ. ಐರೋಪ್ಯ ಒಕ್ಕೂಟ ಮತ್ತು ಸಿರಿಯದ ನಡುವೆ ಇರುವ ಟರ್ಕಿಯ ನಗರಗಳನ್ನು ಐಸಿಸ್ ಭಯೋತ್ಪಾದಕರು ಗುರಿಯಾಗಿಸುತ್ತಿದ್ದಾರೆ ಹಾಗೂ ಕುರ್ದಿಶ್ ಪ್ರತ್ಯೇಕತಾವಾದಿಗಳ ವಿರುದ್ಧವೂ ಸರಕಾರ ಹೋರಾಡುತ್ತಿದೆ.

ವಿಹಾರದಲ್ಲಿದ್ದ ಎರ್ದೊಗಾನ್‌
ಕ್ಷಿಪ್ರಕ್ರಾಂತಿ ಆರಂಭಗೊಂಡಾಗ ಎರ್ದೊಗಾನ್‌ ದೇಶದ ನೈರುತ್ಯ ಕರಾವಳಿಯಲ್ಲಿ ಪ್ರವಾಸದಲ್ಲಿದ್ದರು. ಶನಿವಾರ ಮುಂಜಾನೆಯ ಮೊದಲು ಅವರು ಇಸ್ತಾಂಬುಲ್ ತಲುಪಿದರು. ಅಟಾತುರ್ಕ್ ವಿಮಾನ ನಿಲ್ದಾಣದ ಹೊರಗೆ ಅವರು ಇರುವುದನ್ನು ಟಿವಿಯಲ್ಲಿ ತೋರಿಸಲಾಯಿತು.
ಬಳಿಕ, ವಿಮಾನ ನಿಲ್ದಾಣದಲ್ಲಿ ಸಾವಿರಾರು ಧ್ವಜಧಾರಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಎರ್ದೊಗಾನ್‌, ದೇಶದ ಮೇಲೆ ಸರಕಾರ ನಿಯಂತ್ರಣ ಹೊಂದಿದೆ ಎಂದು ಹೇಳಿದರು.
ರಿಸಾರ್ಟ್ ಪಟ್ಟಣ ಮಾರ್ಮರಿಸ್‌ನಲ್ಲಿ ತನ್ನನ್ನು ಹತ್ಯೆ ಮಾಡಲು ಸಂಚುಕೋರರು ಸಂಚು ರೂಪಿಸಿದ್ದರು ಎಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X