‘ರಾಜ್ಯಭಾಷೆಯ ಶಿಕ್ಷಣ ಜಾರಿಗೆ ಕೇಂದ್ರದ ಮೇಲೆ ಒತ್ತಡ ಅಗತ್ಯ’
‘ಕನ್ನಡ ಶಾಲೆ ಉಳಿಸಿ’ ವಿಚಾರ ಸಂಕಿರಣ
ಬೆಂಗಳೂರು, ಜು.16: ಒಂದರಿಂದ ಐದನೆ ತರಗತಿ ವರೆಗಿನ ಶಿಕ್ಷಣವನ್ನು ರಾಜ್ಯಭಾಷೆಯಲ್ಲಿಯೆ ಜಾರಿ ಯಾಗುವಂತೆ ಕಡ್ಡಾಯ ಮಾಡಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಇದನ್ನು ಕಾರ್ಯರೂಪಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸೇರಿದಂತೆ ಸಂಘ, ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿ ಸರಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ಹಿರಿಯ ಸಂಶೋಧಕ ಡಾ..ಚಿದಾನಂದಮೂರ್ತಿ ತಿಳಿಸಿದ್ದಾರೆ.
ಶನಿವಾರ ಕರ್ನಾಟಕ ರಣಧೀರ ಪಡೆ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ‘ಕನ್ನಡ ಶಾಲೆ ಉಳಿಸಿ’ ಅಭಿಯಾನಕ್ಕೆ ಚಾಲನೆ ಹಾಗೂ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಲ್ಲಿ ನಡೆದ ಗೋಕಾಕ್ ಚಳವಳಿಯ ಫಲವಾಗಿ ಆಗಿನ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ರಾಜ್ಯಭಾಷೆಯಾದ ಕನ್ನಡವನ್ನು ಕಡ್ಡಾಯಗೊಳಿಸಿತ್ತು. ಆದರೆ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕನ್ನಡ ಕಡ್ಡಾಯವಲ್ಲವೆಂದು ತೀರ್ಪು ನೀಡಿದೆ. ಹೀಗಾಗಿ ಕೇಂದ್ರ ಸರಕಾರ ಸಂವಿಧಾನ ದಲ್ಲಿ ತಿದ್ದುಪಡಿ ತರುವ ಮೂಲಕ ಆಯಾ ರಾಜ್ಯದಲ್ಲಿ ರುವ ಪ್ರಾದೇಶಿಕ ಭಾಷೆಯ ಮೂಲಕ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ನಾಡು, ನುಡಿಯ ಬಗ್ಗೆ ಅಭಿಮಾನ, ಹೆಮ್ಮೆ ಪಡುವಂತಹ ಮನ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಆಗಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಅವರು ತಿಳಿಸಿದರು.ಲನಚಿತ್ರ ನಿರ್ದೇಶಕ ಹಾಗೂ ಬರಹಗಾರ ಡಾ.ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯವನ್ನಾಳಿದ ಎಲ್ಲ ಸರಕಾರಗಳು ಭಾಷೆಯ ಉಳಿವಿಗೆ ಬಿಸಿಯೂಟ, ಸಮವಸ್ತ್ರ, ಸೈಕಲ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಆದರೂ ವರ್ಷದಿಂದ ವರ್ಷಕ್ಕೆ ಕನ್ನಡ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಲೆ ಬರುತ್ತಿವೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಯಾಕೆ ಸೇರಿಸುತ್ತಿಲ್ಲ ಎಂಬುದನ್ನು ನಿರ್ದಿಷ್ಟವಾಗಿ ತಿಳಿಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಪ್ರತಿಹಳ್ಳಿಯಲ್ಲಿರುವ ಸರಕಾರಿ ಶಾಲೆಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿಸಿಕೊಳ್ಳಬೇಕು. ಹಳ್ಳಿಯಲ್ಲಿ ನಡೆಯುವ ಪ್ರತಿ ಜಾತ್ರೆ-ಹಬ್ಬಗಳನ್ನು ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳೊಡನೆ ಆಚರಿಸಬೇಕು. ಹಳ್ಳಿಯ ಜನತೆಗೂ ಶಾಲೆಗೂ ಉತ್ತಮವಾದ ಬಾಂಧವ್ಯವನ್ನು ಬೆಸೆದಾಗ ಮಾತ್ರ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಮನಸು ಮಾಡಬಹುದು ಎಂದು ನಾಗತಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಿಸಿದರು.ಾರ್ಯಕ್ರಮದಲ್ಲಿ ಹಿರಿಯ ಕವಿ ಡಾ.ಎಲ್.ಎನ್.ಮುಕುಂದರಾಜ್, ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ, ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್‌ಕುಮಾರ್ ಮತ್ತಿತರರಿದ್ದರು.
ಸರಕಾರಿ ನೌಕರರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಕನ್ನಡ ಶಾಲೆಗಳ ಉಳಿವಿಗೆ ಬದ್ಧರಾಗಬೇಕು. ಇದರಿಂದ ಇತರ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಹಾಗೆಯೆ ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಬಳವನ್ನು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿಸಬೇಕು.
-ಎಂ.ಎಸ್.ಆಶಾದೇವಿ ವಿಮರ್ಶಕಿ





