Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ ಸೇನಾ ದಂಗೆಯ ‘ರೂವಾರಿ’ಗೆ ಇಸ್ರೇಲ್...

ಟರ್ಕಿ ಸೇನಾ ದಂಗೆಯ ‘ರೂವಾರಿ’ಗೆ ಇಸ್ರೇಲ್ ಕನೆಕ್ಷನ್ ?

ವಾರ್ತಾಭಾರತಿವಾರ್ತಾಭಾರತಿ18 July 2016 10:53 AM IST
share
ಟರ್ಕಿ ಸೇನಾ ದಂಗೆಯ ‘ರೂವಾರಿ’ಗೆ ಇಸ್ರೇಲ್ ಕನೆಕ್ಷನ್ ?

ಇಸ್ತಾಂಬುಲ್, ಜು.18: ಶುಕ್ರವಾರ ರಾತ್ರಿಯ ವಿಫಲ ಸೇನಾ ದಂಗೆಯ ಸಂಬಂಧ ಬಂಧಿತರಾಗಿರುವ ಆರು ಹಿರಿಯ ಸೇನಾ ಕಮಾಂಡರುಗಳಲ್ಲಿ ಇಸ್ರೇಲ್ ನ ಟೆಲ್ ಅವೀವ್‌ನ ಟರ್ಕಿ ರಾಯಭಾರ ಕಚೇರಿಯಲ್ಲಿ ಮಿಲಿಟರಿ ಅಧಿಕಾರಿಯಾಗಿ 1998 ರಿಂದ 2000 ತನಕ ಸೇವೆ ಸಲ್ಲಿಸಿದ್ದ ಜನರ್ ಅಕಿನ್ ಓಝ್ಟುಕ್ ಕೂಡ ಸೇರಿದ್ದಾರೆ.

ಇಸ್ರೇಲ್‌ನಲ್ಲಿ ಸೇವೆ ಸಲ್ಲಿಸಿದ ನಂತರ ಟರ್ಕಿಯ ವಾಯು ಪಡೆ ಕಮಾಂಡರ್ ಆಗಿದ್ದ 64 ರ ಹರೆಯದ ಅಕಿನ್ ಕಳೆದ ವರ್ಷ ಈ ಹುದ್ದೆ ತ್ಯಜಿಸಿದ್ದರೂ ಟರ್ಕಿಯ ಅತ್ಯುನ್ನತ ಮಿಲಿಟರಿ ಕೌನ್ಸಿಲ್ ಸದಸ್ಯರಾಗಿ ಮುಂದುವರಿದಿದ್ದರು.

ಇದೀಗ ಟರ್ಕಿಯ, ವಿಶೇಷವಾಗಿ ಅಧ್ಯಕ್ಷ ತಯ್ಯಿಪ್ ಎರ್ದೊಗಾನ್ ಅವರ ಪ್ರಮುಖ ವೈರಿಯಾಗಿ ಪರಿಗಣಿತರಾಗಿರುವ ಅಕಿನ್ ಶುಕ್ರವಾರದ ಸೇನಾ ದಂಗೆ ಯತ್ನ ನಡೆಯುವ ಮೊದಲು ಖ್ಯಾತ ಮಿಲಿಟರಿ ನಾಯಕರಾಗಿದ್ದರಲ್ಲದೆ ತಮಗೆ ದೇಶದ ವಾಯುಪಡೆ ಹಾಗೂ ನ್ಯಾಟೋದಿಂದ ದೊರೆತ ಪದಕಗಳನ್ನು ಪ್ರದರ್ಶಿಸುವುದರಲ್ಲಿ ಖುಷಿ ಕಾಣುತ್ತಿದ್ದರು ಎಂದು ಇಸ್ರೇಲಿ ಸುದ್ದಿ ತಾಣ ವೈನೆಟ್ ವರದಿ ಮಾಡಿದೆ.

ಜನರಲ್ ಅಕಿನ್ ಹಾಗೂ ಅವರೊಂದಿಗೆ ಈ ಸೇನಾ ದಂಗೆ ನಡೆಸುವಲ್ಲಿ ಶಾಮೀಲಾದವರನ್ನು ದೇಶದ್ರೋಹದ ಆರೋಪದ ಮೇಲೆ ವಿಚಾರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ದೇಶದ ಸಂವಿಧಾನ ಮರಣದಂಡನೆಯನ್ನು ನಿಷೇಧಿಸಿರುವುದರಿಂದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗುವುದಿಲ್ಲವಾದರೂ, ಮುಂದೆ ಇಂತಹ ದಂಗೆಗಳಾಗದಂತೆ ತಡೆಯಲು ಸಾಂವಿಧಾನಿಕ ತಿದ್ದುಪಡಿಗಳನ್ನು ಪರಿಶೀಲಿಸಲಾಗುವುದೆಂದು ಟರ್ಕಿ ಪ್ರಧಾನಿ ಬಿನಾಲಿ ಯಿಲ್ ಡಿರಿಮ್ ಹೇಳಿದ್ದಾರೆಂದು, ಟರ್ಕಿ ಪಬ್ಲಿಕ್ ಟೆಲಿವಿಷನ್ ವರದಿಯೊಂದು ತಿಳಿಸಿದೆ.

ಅಕಿನ್ ಹೊರತಾಗಿ ಎರಡನೆ ಸೇನಾ ಕಮಾಂಡರ್ ಜನರಲ್ ಆದಮ್ ಹುದುತಿ ಮಲಟ್ಯ ಗ್ಯಾರಿಸನ್ ಕಮಾಂಡರ್ ಅವ್ನಿ ಅಂಗುನ್ ಕೂಡ ಬಂಧಿತರಲ್ಲಿ ಸೇರಿದ್ದಾರೆ. ದೇಶದ ಅತ್ಯುನ್ನತ ಮಿಲಿಟರಿ ಕೌನ್ಸಿಲ್ ಮುಂದಿನ ತಿಂಗಳು ಸಭೆ ಸೇರಿದಾಗ ತಮ್ಮನ್ನು ತಮ್ಮ ಹುದ್ದೆಗಳಿಂದ ಕೆಳಗಿಳಿಸಬಹುದೆಂಬ ಭಯದಿಂದ ಈ ಸೇನಾ ದಂಗೆಯ ನೇತೃತ್ವವನ್ನು ಅವರು ವಹಿಸಿದ್ದರೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X