ವ್ಯಕ್ತಿಯ ಉತ್ಕೃಷ್ಟ ಮನೋಭಾವದಿಂದ ಉತ್ಕೃಷ್ಟ ಭವಿಷ್ಯ: ಡಾ. ಹಯವದನ ಉಪಾಧ್ಯ

ಕುಂದಾಪುರ, ಜು.18: ಕೋಡಿಯ ಜಿ.ಕೆ.ಮೊಯ್ದೀನ್ ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕ ಡಾ. ಹಯವದನ ಉಪಾಧ್ಯ ಉಪನ್ಯಾಸ ನೀಡುತ್ತಾ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಪ್ರೇಮ ಹಾಗೂ ಸಾಮರಸ್ಯದೊಂದಿಗೆ ಭವ್ಯಭಾರತದ ಪ್ರಜೆಗಳಾಗಬೇಕು. ಉತ್ಕೃಷ್ಟ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಶುಭಹಾರೈಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಮೀರ್ ಅಧ್ಯಕ್ಷತೆ ವಹಿಸಿದ್ದರು.
ಸಂಖ್ಯಾಶಾಸ್ತ್ರ ಉಪನ್ಯಾಸಕ ಸುರೇಂದ್ರ ಶೆಟ್ಟಿ ಸ್ವಾಗತಿಸಿ, ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story





