ಬ್ಯಾರೀಸ್ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಕುಂದಾಪುರ, ಜು.18: ಕೋಡಿ ಬ್ಯಾರೀಸ್ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಸೋಮವಾರ ವನಮಹೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಮತ್ತು ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
Next Story





