Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಕೃತಿಕ ಸಮತೋಲನ ಕಾಪಾಡಲು ಪ್ರಾಣಿಗಳ...

ಪ್ರಾಕೃತಿಕ ಸಮತೋಲನ ಕಾಪಾಡಲು ಪ್ರಾಣಿಗಳ ಆರೋಗ್ಯವೂ ಮುಖ್ಯ:ಮುಹಮ್ಮದ್ ಮೋನು

ವಾರ್ತಾಭಾರತಿವಾರ್ತಾಭಾರತಿ18 July 2016 5:01 PM IST
share
ಪ್ರಾಕೃತಿಕ ಸಮತೋಲನ ಕಾಪಾಡಲು ಪ್ರಾಣಿಗಳ ಆರೋಗ್ಯವೂ ಮುಖ್ಯ:ಮುಹಮ್ಮದ್ ಮೋನು

ಉಳ್ಳಾಲ, ಜು.18: ಮಾತು ಆಡಬಲ್ಲ ಮನುಷ್ಯರು ಅಸೌಖ್ಯ ಕಾಡುವಾಗ ವೈದ್ಯರಲ್ಲಿ ಸಮಸ್ಯೆ ಹೇಳಿ ಔಷಧ ಕೇಳಿ ಗುಣಮುಖರಾಗುತ್ತಾರೆ. ಹಾಗೆಯೇ ಪೃಕೃತಿಯ ಸಮತೋಲನವನ್ನು ಕಾಪಾಡಲು ಮೂಕ ಪ್ರಾಣಿಗಳಿಗೂ ಪಶುಚಿಕಿತ್ಸಾಲಯಗಳಲ್ಲಿ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ ದೊರೆಯುವಂತಾ ಗಬೇಕೆಂದು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಹೇಳಿದ್ದಾರೆ.

ದ.ಕ ಜಿಲ್ಲಾಪಂಚಾಯತ್, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಯೋಗದಲ್ಲಿ ತಲಪಾಡಿಯ ಹಿಂದೂ ರುಧ್ರಭೂಮಿ ರಸ್ತೆಯ ಹಳೆಯ ಅಂಗನವಾಡಿ ಕೇಂದ್ರದ ಕಟ್ಟಡದಲ್ಲಿ ಪ್ರದೇಶದ ಜನರ ಬೇಡಿಕೆಯನ್ವಯ ನೂತನವಾಗಿ ಆರಂಭಿಸಲಾದ ತಾತ್ಕಾಲಿಕ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರದೇಶದ ಜನರ ಬೇಡಿಕೆಯಂತೆ ಸಚಿವ ಯು.ಟಿ ಖಾದರ್‌ರ ಆದೇಶದನ್ವಯ ತಲಪಾಡಿಯಲ್ಲಿ ತುರ್ತಾಗಿ ತಾತ್ಕಾಲಿಕ ಪಶು ಚಿಕಿತ್ಸಾಲಯವನ್ನು ಆರಂಭಿಸಲಾಗಿದೆ. ಸ್ಥಳೀಯ ತಲಪಾಡಿ ಗ್ರಾ.ಪಂ ಮತ್ತು ಹಿಂದೂ ರುದ್ರಭೂಮಿಯ ನಿರ್ವಹಣಾ ಸಮಿತಿಯವರು 10 ಸೆಂಟ್ಸ್ ಜಾಗವನ್ನು ಕಲ್ಪಿಸಿ ಕೊಟ್ಟರೆ 25 ಲಕ್ಷ ರೂ. ಅನುದಾನದಲ್ಲಿ ಈಗಾಗಲೇ ಪಾವೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪಶುಚಿಕಿತ್ಸಾಲಯದ ಮಾದರಿಯಲ್ಲೇ ಇಲ್ಲೂ ಕೂಡ ಸುಸಜ್ಜಿತ ಚಿಕಿತ್ಸಾಲಯವನ್ನು ನಿರ್ಮಿಸಿ ಕೊಡುವ ಭರವಸೆ ನೀಡಿದರು.

ತಲಪಾಡಿ ಗ್ರಾ.ಪಂ ಅಧ್ಯಕ್ಷ ಸುರೇಶ್ ಆಳ್ವ ಮಾತನಾಡಿ, ತಲಪಾಡಿ ಗ್ರಾಮ ಸಭೆಯಲ್ಲಿ ತಾತ್ಕಾಲಿಕ ಪಶು ಚಿಕಿತ್ಸಾಲಯ ನಿರ್ಮಾಣದ ಬಗೆಗೆ ಪ್ರಸ್ತಾಪ ಬಂದಾಗ ಅಂದಿನ ತಲಪಾಡಿ ತಾಲೂಕು ಪಂಚಾಯತ್ ಕ್ಷೇತ್ರದ ಸದಸ್ಯೆ ಸುರೇಖಾ ಚಂದ್ರಹಾಸ್ ಅವರು ಹಳೆಯ ಅಂಗನವಾಡಿ ಕಟ್ಟಡದಲ್ಲಿ ಚಿಕಿತ್ಸಾಲಯ ಪ್ರಾರಂಭಿಸಲು ಪ್ರಯತ್ನಿಸಿದ್ದುದರ ಫಲವಾಗಿ ಯೋಜನೆ ಆರಂಭಿಸುವಂತಾಗಿದೆ. ಹಾಗೆಯೇ ತಲಪಾಡಿ ಪಂಚಾಯತ್‌ಗೆ ಆದಾಯದ ದೃಷ್ಠಿಯಲ್ಲಿ ಇನ್ನೊಂದು ವಾಣಿಜ್ಯ ಕಟ್ಟಡದ ಅಗತ್ಯತೆ ಇದ್ದು ಆದಷ್ಟು ಶೀಘ್ರ ತಾ.ಪಂನಿಂದ ಅನುದಾನ ಕಲ್ಪಿಸುವಂತೆ ಮುಹಮ್ಮದ್ ಮೋನು ಅವರಲ್ಲಿ ವಿನಂತಿಸಿದರು.

ತಾ.ಪಂ. ಸದಸ್ಯರಾದ ಅಬೂಬಕರ್ ಸಿದ್ಧೀಕ್ ಕೊಳಂಗೆರೆ, ಸುರೇಖಾ ಚಂದ್ರಹಾಸ್, ತಲಪಾಡಿ ಗ್ರಾ.ಪಂ. ಉಪಾಧ್ಯಕ್ಷೆ ಜಯಲಕ್ಷ್ಮೀ ಟಿ., ಸದಸ್ಯರಾದ ವಿನಯ ಕುಮಾರ್, ಮಂಗಳೂರು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಜಣ್ಣ, ಪಶು ವೈದ್ಯಾಧಿಕಾರಿ ನಾಗರಾಜ್, ಹಿರಿಯ ಪಶು ವೈದ್ಯ ಪರೀಕ್ಷಕ ಚಂದ್ರಹಾಸ್, ತಲಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X