Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶರದ್ ಪವಾರ್, ಶ್ರೀನಿವಾಸನ್, ನಿರಂಜನ್...

ಶರದ್ ಪವಾರ್, ಶ್ರೀನಿವಾಸನ್, ನಿರಂಜನ್ ಅಧಿಕಾರಕ್ಕೆ ಕುತ್ತು

ಬಿಸಿಸಿಐ ಪದಾಧಿಕಾರಿ ವಯಸ್ಸಿನ ಮಿತಿ 70 ವರ್ಷಕ್ಕೆ ನಿಗದಿಪಡಿಸಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ18 July 2016 11:49 PM IST
share
ಶರದ್ ಪವಾರ್, ಶ್ರೀನಿವಾಸನ್, ನಿರಂಜನ್ ಅಧಿಕಾರಕ್ಕೆ ಕುತ್ತು

 ಹೊಸದಿಲ್ಲಿ, ಜು.18: ಬಿಸಿಸಿಐ ಆಡಳಿತ ಮಂಡಳಿಯ ಪದಾಧಿಕಾರಿಗಳ ವಯಸ್ಸಿನ ಮಿತಿಯನ್ನು 70 ವರ್ಷಕ್ಕೆ ನಿಗದಿಪಡಿಸುವ ಲೋಧಾ ಸಮಿತಿಯ ಶಿಫಾರಸನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಹಿರಿಯ ಆಡಳಿತಾಧಿಕಾರಿಗಳಾಗಿರುವ ಶರದ್ ಪವಾರ್, ಎನ್.ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಸಹಿತ ಇನ್ನಿತರರ ಬಿಸಿಸಿಐನ ನಂಟು ಬಹುತೇಕ ಕೊನೆಗೊಂಡಂತಾಗಿದೆ.

ಆರ್.ಎಂ. ಲೋಧಾ ಸಮಿತಿಯ ಪ್ರಮುಖ ಶಿಫಾರಸಿಗೆ ಸುಪ್ರೀಂಕೋರ್ಟ್ ಅಸ್ತು ಎಂದಿರುವ ಕಾರಣ ಸ್ವಹಿತಾಸಕ್ತಿ ಸಂಘರ್ಷ ಆರೋಪದಿಂದ ಮುಕ್ತವಾಗಲು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್(ಹಿಮಾಚಲ ಪ್ರದೇಶ), ಕಾರ್ಯದರ್ಶಿ ಅಜಯ್ ಶಿರ್ಕೆ(ಮಹಾರಾಷ್ಟ್ರ), ಖಜಾಂಚಿ ಅನಿರುದ್ಧ್ ಚೌಧರಿ(ಹರ್ಯಾಣ), ಜೊತೆ ಕಾರ್ಯದರ್ಶಿ ಅಮಿತಾಭ್ ಚೌಧರಿ(ಜಾರ್ಖಂಡ್) ಸಂಬಂಧಪಟ್ಟ ರಾಜ್ಯ ಕ್ರಿಕೆಟ್ ಸಂಸ್ಥೆಗಳಲ್ಲಿ ತಮ್ಮ ಸ್ಥಾನವನ್ನು ತ್ಯಜಿಸಬೇಕಾಗಿದೆ.

ಸುಪ್ರೀಂಕೋರ್ಟ್ ಬಿಸಿಸಿಐಗೆ ಲೋಧಾ ಸಮಿತಿಯ ಶಿಫಾರಸು ಜಾರಿಗೆ ತರಲು ಆರು ತಿಂಗಳ ಕಾಲ ಕಾಲಾವಕಾಶ ನೀಡಿದೆ.

ಬಿಸಿಸಿಐನ ಮಾಜಿ ಅಧ್ಯಕ್ಷ ಪವಾರ್‌ಗೆ 75 ವರ್ಷ, ತಮಿಳುನಾಡಿನ ಶ್ರೀನಿವಾಸನ್‌ಗೆ 71 ವರ್ಷ ಪ್ರಾಯವಾಗಿದೆ. ಈ ಇಬ್ಬರು ಕ್ರಮವಾಗಿ ಮುಂಬೈ ಹಾಗೂ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.

ಬಿಸಿಸಿಐಯ ಕಾರ್ಯದರ್ಶಿ, ಜೊತೆ ಕಾರ್ಯದರ್ಶಿ, ಖಜಾಂಚಿ ಹಾಗೂ ಉಪಾಧ್ಯಕ್ಷರಾಗಿ ಸುಮಾರು 30 ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ನಿರಂಜನ್ ಶಾಗೆ 72 ವರ್ಷ ವಯಸ್ಸಾಗಿದೆ.

‘‘ಉಚ್ಚ ನ್ಯಾಯಾಲಯದ ತೀರ್ಪಿನಿಂದ ಬೇಸರವಾಗಿದೆ. ಆದರೆ, ನ್ಯಾಯಾಲಯದ ತೀರ್ಪನ್ನು ಗೌರವಿಸುವೆ. ಸುಪ್ರೀಂ ತೀರ್ಪನ್ನು ಸಂಪೂರ್ಣ ಅನುಷ್ಠಾನಗೊಳಿಸಲು ಇನ್ನೂ ಕನಿಷ್ಠ 18 ತಿಂಗಳು ಬೇಕಾಗಬಹುದು’’ ಎಂದು ನಿರಂಜನ್ ಶಾ ಹೇಳಿದ್ದಾರೆ.

ಬಿಸಿಸಿಐ ಮೊದಲಿಗೆ ತನ್ನೊಳಗೆ ಲೋಧಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಿ. ಆಮೇಲೆ ರಾಜ್ಯ ಸಂಸ್ಥೆಗಳಲ್ಲಿ ಜಾರಿಗೆ ತರಬಹುದು ಎಂದು ಶಾ ಸಲಹೆ ನೀಡಿದರು.

ಬಿಸಿಸಿಐ ಆಡಳಿತದಲ್ಲಿ ಸುಧಾರಣೆ ತರಲು ಲೋಧಾ ಸಮಿತಿ ಮಾಡಿರುವ ಹೆಚ್ಚಿನೆಲ್ಲಾ ಶಿಫಾರಸುಗಳನ್ನು ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್, ಸಚಿವರು, ಸರಕಾರಿ ಅಧಿಕಾರಿಗಳು ಹಾಗೂ 70 ವರ್ಷ ಮೇಲ್ಪಟ್ಟವರು ಬಿಸಿಸಿಐ ಪದಾಧಿಕಾರಿಯಾಗುವುದನ್ನು ನಿರ್ಬಂಧಿಸಿದೆ. ಬಿಸಿಸಿಐಯನ್ನು ಆರ್‌ಟಿಐ ಕಾಯ್ದೆ ಅಡಿ ತರಬೇಕೇ, ಬೆಟ್ಟಿಂಗ್‌ನ್ನು ಕಾನೂನುಬದ್ದಗೊಳಿಸಬೇಕೇ ಎಂಬುದನ್ನು ಸಂಸತ್‌ನಲ್ಲಿ ನಿರ್ಧರಿಸಬೇಕು ಎಂದು ನ್ಯಾಯಾಲಯ ತನ್ನ ಐತಿಹಾಸಿಕ ತೀರ್ಪಿನಲ್ಲಿ ತಿಳಿಸಿದೆ.

ಸುಪ್ರೀ ತೀರ್ಪಿಗೆ ತಲೆಬಾಗುವೆ: ರಾಜೀವ್ ಶುಕ್ಲಾ

ಹೊಸದಿಲ್ಲಿ, ಜು.18: ಕ್ರಿಕೆಟ್ ಮಂಡಳಿಯಲ್ಲಿ ಸುಧಾರಣೆ ಮಾಡಬೇಕೆಂಬ ಸುಪ್ರೀಂಕೋರ್ಟ್‌ನ ತೀರ್ಪನ್ನು ನಾವು ಗೌರವಿಸುತ್ತೇವೆ. ಲೋಧಾ ಸಮಿತಿ ಮಾಡಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಕ್ರಿಕೆಟ್ ಮಂಡಳಿ ಕಾರ್ಯಪ್ರವೃತ್ತವಾಗಲಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಹಾಗೂ ಐಪಿಎಲ್ ಚೇರ್‌ಮನ್ ರಾಜೀವ್ ಶುಕ್ಲಾ ಹೇಳಿದ್ದಾರೆ.

ನಾವು ಸುಪ್ರೀಂ ನಿರ್ಧಾರವನ್ನು ಗೌರವಿಸುತ್ತೇವೆ. ಲೋಧಾ ಸಮಿತಿಯ ಶಿಫಾರಸುಗಳನ್ನು ಹೇಗೆ ಜಾರಿಗೆ ತರಬಹುದು ಎಂಬ ಕುರಿತು ಯೋಚಿಲಿದ್ದೇವೆ ಎಂದು ಸುದ್ದಿವಾಹಿನಿಗಳಿಗೆ ಶುಕ್ಲಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X