ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲು ಹೈಕೋರ್ಟ್ ಆದೇಶ
ಬೆಂಗಳೂರು, ಜು.18: ರಾಜ್ಯೋತ್ಸವ ಪ್ರಶಸ್ತಿ ನೀಡಿಕೆಗೆ ಸಂಬಂಧಿ ಸಿದಂತೆ ಅರ್ಹರನ್ನು ಗುರುತಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಬಿ.ವಿ .ಸತ್ಯನಾರಾಯಣರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಹತ್ತು ದಿನದಲ್ಲಿ ನ್ಯಾಯಪೀಠಕ್ಕೆ ವರದಿ ಸಲ್ಲಿಸಬೇಕೆಂದು ಹೈಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.
ಕಳೆದ ವಿಚಾರಣೆ ವೇಳೆಯಲ್ಲಿ ನ್ಯಾಯಪೀಠವು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳು ಹೈಕೋರ್ಟ್‌ಗೆ ಖುದ್ದು ಹಾಜರಾಗಬೇಕೆಂದು ಸೂಚನೆ ನೀಡಿತ್ತು. ಆದೇಶದಂತೆ ಹಾಜರಾದ ಕಾರ್ಯದರ್ಶಿಗಳಿಗೆ ಹತ್ತು ದಿನದಲ್ಲಿ ಸಮಿತಿಯನ್ನು ರಚಿಸಿರುವ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕೆಂದು ಸೂಚನೆ ನೀಡಿತು.
Next Story





