‘ಆಪರೇಷನ್ ಸುರಕ್ಷಾ’ ಕಾರ್ಯಾಚರಣೆಗೆ ಚಾಲನೆ
ಉಡುಪಿ, ಜು.18: ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ‘ಆಪರೇಷನ್ ಸುರಕ್ಷಾ’ ವಿಶೇಷ ಕಾರ್ಯಾಚರಣೆಗೆ ಇಂದು ಚಾಲನೆ ನೀಡಲಾಯಿತು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ಪಡುಬಿದ್ರೆ, ಕಾಪು, ಉಡುಪಿನಗರ, ಬ್ರಹ್ಮಾವರ, ಕೋಟ, ಕುಂದಾಪುರ, ಗಂಗೊಳ್ಳಿ, ಬೈಂದೂರು ಪೊಲೀಸ್ ಠಾಣೆಯಲ್ಲಿ ಮತ್ತು ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಬರುವ ಮೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ವಾಹನ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಯಿತು.
ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕ/ಸವಾರರ ವಿರುದ್ಧ ಮೋಟಾರ್ ವಾಹನ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಯಿತು.
Next Story