Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ, ಜೆಡಿಎಸ್‌ನಿಂದ ಗಾಜಿನ ಮನೆಯಲ್ಲಿ...

ಬಿಜೆಪಿ, ಜೆಡಿಎಸ್‌ನಿಂದ ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯತ್ತ ಕಲ್ಲು ಎಸೆಯುವ ಪ್ರಯತ್ನ: ಸಿಎಂ

ವಾರ್ತಾಭಾರತಿವಾರ್ತಾಭಾರತಿ19 July 2016 4:55 PM IST
share
ಬಿಜೆಪಿ, ಜೆಡಿಎಸ್‌ನಿಂದ ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯತ್ತ ಕಲ್ಲು ಎಸೆಯುವ ಪ್ರಯತ್ನ: ಸಿಎಂ

ಬೆಂಗಳೂರು, ಜು.19: ತಮ್ಮ ಮೇಲೆ ಹತ್ತಾರು ಕೇಸುಗಳು ಇದ್ದರೂ ಅದನ್ನು ಮರೆತಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯತ್ತ ಕಲ್ಲು ಎಸೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಮತ್ತೊಬ್ಬರ ವಿರುದ್ಧ ಮಾತನಾಡುವಾಗ ಪ್ರತಿಪಕ್ಷಗಳವರು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದು ತಿಳಿಸಿದರು. ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಅವರು ಸ್ವ ಇಚ್ಛೆಯಿಂದ ರಾಜಿನಾಮೆ ನೀಡಿದ್ದಾರೆ. ಪಕ್ಷ ಮತ್ತು ಸರಕಾರಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಅವರು ಈ ನಿರ್ಧಾರ ಕೈಗೊಂಡರು. ಮಂತ್ರಿಗಳಾಗಿದ್ದಾಗ ಬಿಜೆಪಿ ಮತ್ತು ಜೆಡಿಎಸನ ಯಾವ ನಾಯಕರು ನೈತಿಕತೆ ಆಧಾರದ ಮೇಲೆ ರಾಜಿನಾಮೆ ಕೊಟ್ಟಿದ್ದಾರೆ ? ಆ ಪಕ್ಷದ ನಾಯಕರಿಗೆ ಮತ್ತೊಬ್ಬರ ರಾಜಿನಾಮೆ ಕೇಳುವ ನೈತಿಕತೆಯೇ ಇಲ್ಲ ಎಂದರು.

ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಈಶ್ವರಪ್ಪಸೇರಿದಂತೆ ಬಿಜೆಪಿಯಲ್ಲಿ 18ಕ್ಕೂ ಹೆಚ್ಚು ಮುಖಂಡರ ಮೇಲೆ ಕ್ರಿಮಿನಲ್ ಕೇಸುಗಳು ದಾಖಲಾಗಿವೆ. ಆದರೂ ಅವರು ಭಾರಿ ಪ್ರಾಮಾಣಿಕರಂತೆ ನಾವು ಯಾವುದೇ ಕೇಸಿನಲ್ಲಿ ಭಾಗಿಯಾಗಿಲ್ಲ ಎಂದು ಹೇಳುತ್ತಾರೆ. ಇನ್ನು ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಹೋದರನ ವಿರುದ್ಧವೂ ಕೇಸುಗಳಿವೆ. ಇವರೆಲ್ಲ ನೈತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಆರೋಪಿಸಿದರು.

ಪೊಲೀಸರು ಸದಾ ಒತ್ತಡದಲ್ಲಿ ಕೆಲಸ ಮಾಡುತ್ತಾರೆ ಎಂಬುದನ್ನು ನಾನೂ ಒಪ್ಪುತ್ತೇನೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ 2003ರಿಂದ 2013ರ ವರೆಗೆ ರಾಜ್ಯದಲ್ಲಿ 122 ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ನಮಗೂ ನೋವಿದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಆದರೆ ಶೆಟ್ಟರ್ ಮತ್ತು ಕುಮಾರಸ್ವಾಮಿ ಅವರುಗಳು ತಾವು ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದರು.

2007ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ. ಆಗ 24 ಪೊಲೀಸ್ ಸಿಬ್ಬಂದಿ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ಶೆಟ್ಟರ್ ಅವರು ಸಿಎಂ ಆಗಿದ್ದಾಗ 17 ಮಂದಿ ಸಾವಿಗೆ ಶರಣಾಗಿದ್ದಾರೆ. ಎಲ್ಲರ ಜೀವವೂ ಅಮೂಲ್ಯ. ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಬಗ್ಗೆ ನಮಗೆ ನೋವಿದೆ. ಆದರೆ, ಜೆಡಿಎಸ್ ಮತ್ತು ಬಿಜೆಪಿ ನಾಯಕರು ತಮ್ಮ ಅವಧಿಯಲ್ಲಿ ಏನೂ ನಡೆದಿಲ್ಲ ಎಂದು ಬಿಂಬಿಸಿಕೊಳ್ಳುತ್ತಾರೆ. ಅದು ನೈತಿಕ ದಿವಾಳಿತನಕ್ಕೆ ಸಾಕ್ಷಿ. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಸಿಬಿಐ ಎಂದರೆ ಕ್ರಿಮಿನಲ್ ಇನವೆಸ್ಟಿಗೇಷನ್ ಬ್ಯೂರೋ ಎಂದು ಟೀಕೆ ಮಾಡುತ್ತಿದರು. ಮಾಜಿ ಪ್ರಧಾನಿ ದೇವೇಗೌಡರು ಸಿಬಿಐ ಎಂದರೆ ಚೋರ್ ಬಚಾವೋ ಸಂಸ್ಥೆ ಎನ್ನುತ್ತಿದ್ದರು. ಪ್ರತಿಪಕ್ಷವಾಗಿ ನಾವು 13 ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ಒತ್ತಾಯ ಮಾಡಿದರೂ ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಕಿವಿಗೊಡಲಿಲ್ಲ. ಅಕ್ರಮ ಗಣಿಗಾರಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸದನದಲ್ಲಿ ಐದು ದಿನ ಅಹೋರಾತ್ರಿ ಧರಣಿ ನಡೆಸಿದರೂ, ಬೆಂಗಳೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ಮಾಡಿದರೂ ಕೇಳಲಿಲ್ಲ. ಕೇಂದ್ರದಲ್ಲಿ ಎನಡಿಎ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಆ ಪಕ್ಷದ ನಾಯಕರ ಬಣ್ಣ ಬಯಲಾಗಿದೆ. ಈಗ ಅವರು ಸಿಬಿಐ ಕುರಿತು ಬಾಯಿಪಾಠ ಮಾಡುತ್ತಿದ್ದಾರೆ. ಇದು ಇಬ್ಬಗೆ ಧೋರಣೆ ಅಲ್ಲವೇ? ಸಿಬಿಐ ಎಂದರೆ ನಮಗೆ ಭಯ ಇಲ್ಲ. ಗೌರವ ಇದೆ. ಇದೇ ಕಾರಣಕ್ಕೆ ನಮ್ಮ ಸರಕಾರ ಈವರೆಗೆ 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದೆ ಎಂದರು.

ಬಂಡಾರು ದತ್ತಾತ್ರೇಯ, ಸ್ಮ್ಪ್ರತಿ ಇರಾನಿ, ಉಮಾ ಭಾರತಿ ಸೇರಿದಂತೆ ಕೇಂದ್ರದ 13 ಸಚಿವರ ವಿರುದ್ಧ ಕೇಸುಗಳಿವೆ. ಎಫಐಆರ್ ಸಹ ದಾಖಲಾಗಿದೆ. ಉಮಾಭಾರತಿ ಅವರ ವಿರುದ್ಧವೇ 30 ಪ್ರಕರಣಗಳಿವೆ. ಇತ್ತೀಚೆಗೆ ಸಂಪುಟ ಸೇರಿದವರ ಪೈಕಿ 7 ಮಂದಿ ವಿರುದ್ಧ ಕ್ರಿಮಿನಲ್ ಕೇಸುಗಳು ದಾಖಲಾಗಿದೆ. ರಾಜ್ಯ ಬಿಜೆಪಿ ನಾಯಕರೇಕೆ ಅವರಿಂದ ರಾಜಿನಾಮೆ ಕೊಡಿಸಿಲ್ಲ. ಜಾರ್ಜ್ ಒಬ್ಬರೇನಾ ಅವರಿಗೆ ಸಿಕ್ಕಿದ್ದು. ಕಾನೂನು ಎಲ್ಲರಿಗೂ ಒಂದೇ ಅಲ್ಲವೇ ? ನಮಗೊಂದು ಅವರಿಗೊಂದು ಕಾನೂನು ಇದೆಯೇ ?ಹೆಣದ ಮೇಲೆ ರಾಜಕೀಯ ಮಾಡಬಾರದು ಎಂಬ ಕಾರಣಕ್ಕೆ ನಾವು ಕೇಂದ್ರ ಸಚಿವರ ರಾಜಿನಾಮೆಗೆ ಒತ್ತಾಯ ಮಾಡಿಲ್ಲ. ನನ್ನ ವಿರುದ್ಧವೂ ಕೇಸುಗಳಿವೆ ಎಂದು ಆರೋಪ ಮಾಡಿದ್ದಾರೆ. ಪ್ರಕರಣಗಳು ದಾಖಲಾಗಿದ್ದು ನಿಜ. ಅವೆಲ್ಲವೂ ಸಾರ್ವಜನಿಕರ ಹಿತಕ್ಕಾಗಿ ಧರಣಿ, ಪ್ರತಿಭಟನೆ ನಡೆಸಿದಾಗ ದಾಖಲಾಗಿತ್ತು. ಎಲ್ಲವೂ ಇತ್ಯರ್ಥವಾಗಿದೆ. ಮತ್ತೊಬ್ಬರ ತೇಜೋವಧೆಯನ್ನು ಹೇಗೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ಇದನ್ನು ಹೇಳಿದ್ದು ಎಂದರು.

ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಲಾಪ ಸುಗಮವಾಗಿ ನಡೆಯಬೇಕು. ಈ ಕಾರಣಕ್ಕಾಗಿಯೇ ನಾವು ಅಧಿವೇಶವನ ಕರೆದದ್ದು. ಆದರೆ, ಪ್ರತಿಪಕ್ಷಗಳು ಕಲಾಪಕ್ಕೆ ಅವಕಾಶವನ್ನೇ ಕೊಡಲಿಲ್ಲ. ನಾವೂ ಜನರ ಬಳಿಗೆ ಹೋಗುತ್ತೇವೆ. ಪ್ರತಿಪಕ್ಷಗಳ ಬಣ್ಣ ಬಯಲು ಮಾಡುತ್ತೇವೆ ಎಂದು ಮುಖ್ಯಮಂತ್ರಿಯವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X