Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಶಿಕ್ಷಕರ ವರ್ಗಾವಣೆ ವಿರೋಧಿಸಿ...

ಪುತ್ತೂರು: ಶಿಕ್ಷಕರ ವರ್ಗಾವಣೆ ವಿರೋಧಿಸಿ ಬಿಇಒ ಕಚೇರಿ ಮುಂಭಾಗದಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ19 July 2016 5:15 PM IST
share
ಪುತ್ತೂರು: ಶಿಕ್ಷಕರ ವರ್ಗಾವಣೆ ವಿರೋಧಿಸಿ ಬಿಇಒ ಕಚೇರಿ ಮುಂಭಾಗದಲ್ಲಿ ಧರಣಿ

ಪುತ್ತೂರು, ಜು.19: ಕೌನ್ಸೆಲಿಂಗ್ ಮೂಲಕ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಬೇರೆ ಶಾಲೆಗೆ ವರ್ಗಾಯಿಸುವ ಇಲಾಖೆಯ ಕ್ರಮವನ್ನು ವಿರೋಧಿಸಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ವಿವಿಧ ಶಾಲಾ ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಇಲಾಖೆ ತನ್ನ ನಿಲುವು ಬದಲಾವಣೆಗೊಳಿಸುವ ತನಕ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಧರಣಿನಿರತರು ಎಚ್ಚರಿಸಿದರು. ಈ ಸಂದರ್ಭ ಮಾತನಾಡಿದ ಹಾರಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಹಾರಾಡಿ ಸೇರಿದಂತೆ ಕೆಲ ಶಾಲೆಗಳಲ್ಲಿ ಪೋಷಕರ ಪ್ರಯತ್ನದಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಇದೀಗ ಶೈಕ್ಷಣಿಕ ವರ್ಷದ ಮದ್ಯದಲ್ಲಿ ಶಿಕ್ಷಕರನ್ನು ಇದ್ದಕ್ಕಿದ್ದಂತೆ ಕೌನ್ಸೆಲಿಂಗ್ ನಡೆಸಿ ವರ್ಗಾವಣೆ ಮಾಡಿದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಲಿದೆ. ಮಕ್ಕಳ ಹಿತದೃಷ್ಟಿಯಿಂದ ವರ್ಗಾವಣೆ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.

ಮಾವಿನಕಟ್ಟೆ ಶಾಲಾ ಎಸ್‌ಡಿಎಂಸಿ ಸದಸ್ಯ ಬೂಡಿಯಾರ್ ಪುರುಷೋತ್ತಮ್ ರೈ, ಮೊಟ್ಟೆತ್ತಡ್ಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿಲೀಪ್, ಕೆಮ್ಮಾಯಿ ಕೃಷ್ಣನಗರ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಿನ್ನಪ್ಪ ಗೌಡ, ಹಿರೇಬಂಡಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಹೊಸಮನೆ, ಸೂರಂಬೈಲು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್, ಏಕತ್ತಡ್ಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪದ್ಮನಾಭ, ಕುದ್ಮಾರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಲತಾ, ಕೊಂರ್ಬಡ್ಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಲೀಲಾವತಿ ಮತ್ತಿತರರು ಮಾತನಾಡಿ ತಮ್ಮ ಶಾಲೆಯಲ್ಲಿನ ಶಿಕ್ಷಕರನ್ನು ವರ್ಗಾವಣೆಗೊಳಿಸದಂತೆ ವಿನಂತಿಸಿದರು.

ಧರಣಿನಿರತರ ಮನವಿಗೆ ಪ್ರತಿಕ್ರಿಯೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್., ಸರಕಾರದ ಆದೇಶದಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಈ ಹಿಂದೆ ಎರಡು ಬಾರಿ ಕೌನ್ಸೆಲಿಂಗ್‌ಗೆ ದಿನ ನಿಗದಿ ಮಾಡಲಾಗಿದ್ದರೂ ಕೌನ್ಸಿಲಿಂಗ್ ನಡೆಸಲು ಸಾಧ್ಯವಾಗಿಲ್ಲ. ಸೋಮವಾರ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಆಯುಕ್ತರು ಕೌನ್ಸೆಲಿಂಗ್ ನಡೆಸಲು ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೌನ್ಸಿಲಿಂಗ್ ಮಾಡಲಾಗುತ್ತಿದೆ. ಇದನ್ನು ತಡೆಯಲು ತನಗಾಗಲೀ, ಡಿಡಿಪಿಐ ಅವರಿಗೆ ಆಗಲೀ ಸಾಧ್ಯವಿಲ್ಲ. ಈ ಬಗ್ಗೆ ಸರಕಾರವೇ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಲು ಪ್ರಯತ್ನ ನಡೆಸಿದರು.

ಆದರೆ ಇದನ್ನು ಒಪ್ಪದ ಪೋಷಕರು ಕೌನ್ಸೆಲಿಂಗ್ ಮುಂದೂಡುವಂತೆ ಪಟ್ಟು ಹಿಡಿದರು. ಆಗ್ರಹ ಹೆಚ್ಚಾಗುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಪ್ರತ್ಯೇಕ ಸಭೆ ನಡೆಸಲು ವೇದಿಕೆ ಕಲ್ಪಿಸಿದರು. ಅದರಂತೆ ಎಸ್‌ಡಿಎಂಸಿ ಅಧ್ಯಕ್ಷರ ಜೊತೆ ಬಿಇಒ ಸಬೆ ನಡೆಸಿ, ಮನವಿ ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X