Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆಡುತೋಪು ಭೂಮಿ ವರ್ಗಾವಣೆಗೆ ಒತ್ತಾಯಿಸಿ...

ನೆಡುತೋಪು ಭೂಮಿ ವರ್ಗಾವಣೆಗೆ ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ19 July 2016 11:00 PM IST
share
ನೆಡುತೋಪು ಭೂಮಿ ವರ್ಗಾವಣೆಗೆ ಒತ್ತಾಯಿಸಿ ಮನವಿ

 ಸೊರಬ, ಜು.19: ರಾಜ್ಯ ಅರಣ್ಯ ಇಲಾಖೆಗೆ 70 ಸಾವಿರ ಎಕರೆ ಎಂಪಿಎಂ ನೆಡುತೋಪು ಭೂಮಿ ವರ್ಗಾವಣೆ ಆಗಬೇಕು ಹಾಗೂ ಎಂಪಿಎಂ ಜೊತೆ 2020ರವರೆಗೆ ಇದ್ದ ಲೀಸ್ ರದ್ದಾಗಬೇಕು ಎಂದು ಒತ್ತಾಯಿಸಿ ಇಲ್ಲಿನ ಪರಿಸರ ಜಾಗೃತಿ ಟ್ರಸ್ಟ್ ಹಾಗೂ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಅರಣ್ಯ ಸಚಿವರಿಗೆ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಅಜಯ್‌ಕುಮಾರ್ ಮುಖಾಂತರ ಮನವಿ ಸಲ್ಲಿಸಿದರು.

   ಮನವಿಯಲ್ಲಿ ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆ ಅಸ್ತಿತ್ವ ಕಳೆದುಕೊಳ್ಳ್ಳುತ್ತಿರುವ ಹಿನ್ನೆಲೆಯಲ್ಲಿ 2014-2015ರಿಂದ 500 ಹೆಕ್ಟೇರ್ ಎಂಪಿಎಂ ನೆಡುತೋಪು ಕಟಾವಾದ ಭೂಮಿ ಖಾಲಿ ಇದ್ದು, 2,500 ಹೆಕ್ಟೇರ್ ನೆಡುತೋಪು ಕಟಾವಾಗದೆ 2 ವರ್ಷಗಳಿಂದ ಹಾಗೇ ಇದೆ. ನೆಡುತೋಪು ನಿರ್ಮಾಣಕ್ಕೆ ಸಿದ್ಧವಾದ 2ಲಕ್ಷ ಗಿಡಗಳಿವೆ. ಆದರೆ, ನೆಡುವವರಿಲ್ಲ. ಈ ಹಂತದಲ್ಲಿ ಎಂಪಿಎಂ ಅರಣ್ಯ ವಿಭಾಗ ಅತಂತ್ರ ಸ್ಥಿತಿಯಲ್ಲಿ ಇದೆ. ಎಂಪಿಎಂನ 70,000 ಎಕರೆ ನೆಡುತೋಪು ಭೂಮಿಯಿಂದ ಸರಕಾರಕ್ಕೆ 500ಕೋಟಿ ರೂ. ಆದಾಯ ಬರಲಿದೆ. ಇಷ್ಟು ದೊಡ್ಡ ಮೊತ್ತದ ಆರ್ಥಿಕ ಸಂಪನ್ಮೂಲ ಅರಣ್ಯ ಅಭಿವೃದ್ಧಿಯಿಂದ ಸಿಗಲಿದೆ. ಹಾಗಾಗಿ ಆದಾಯ ಬಳಸಿ ಅರಣ್ಯಾಭಿವೃದ್ಧಿಗೆ ಪ್ರಾತಿನಿಧ್ಯ ನೀಡಬೇಕು. ರೈತರಿಗೆ ಉಪಯುಕ್ತವಾಗುವ ಸಸ್ಯ ಜಾತಿಗಳನ್ನು ಬೆಳೆಸಬೇಕು. ಗ್ರಾಮ ಅರಣ್ಯ ಸಮಿತಿಗಳ ಮೂಲಕ 70,000 ಎಕರೆ ಅರಣ್ಯ ಬೆಳೆಸುವ ಕಾರ್ಯವನ್ನು ಹಂತ ಹಂತವಾಗಿ ಆರಂಭಿಸಬೇಕು. ಜನಸಹಭಾಗಿತ್ವ ಇರುವ ವಿಶೇಷ ಅರಣ್ಯ ಅಭಿವೃದ್ಧಿ ಯೋಜನೆಯನ್ನು ಅರಣ್ಯ ಇಲಾಖೆ ಇದಕ್ಕಾಗಿ ರೂಪಿಸಬೇಕು.

  

ಶಿವಮೊಗ್ಗ ಜಿಲ್ಲೆ ಈಗಾಗಲೇ ಮುಳುಗಡೆ, ಗಣಿಗಾರಿಕೆ, ಕೃಷಿಗಾಗಿ ಅರಣ್ಯ ಅತಿಕ್ರಮಣ ಇತ್ಯಾದಿಯಿಂದ 1ಲಕ್ಷ ಎಕರೆ ಕಾಡು ಕಳೆದುಕೊಂಡಿದೆ. ಸಾಗರ, ತೀರ್ಥಹಳ್ಳಿ, ಹೊಸನಗರ, ಸೊರಬ, ಭದ್ರಾವತಿ ತಾಲೂಕುಗಳಲ್ಲಿ ಎಂಪಿಎಂ ನೆಡುತೋಪು ನಿರ್ಮಾಣದಿಂದ ಸ್ವಾಭಾವಿಕ ಅರಣ್ಯ ನಾಶವಾಗಿದೆ. ಈ ಕಾರಣಕ್ಕಾಗಿ ನೆಡುತೋಪು ನಿರ್ಮಾಣಕ್ಕೆ ವೃಕ್ಷ ಲಕ್ಷ ಆಂದೋಲನದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸ್ಥಳೀಯ ನ್ಯಾಯಾಲಯಗಳು ಹನ್ನೆರಡು ಸ್ಥಳಗಳಲ್ಲಿ ತಡೆ ನೀಡಿ ಸ್ವಾಭಾವಿಕ ಅರಣ್ಯ ನಾಶ ಮಾಡಬಾರದು ಎಂದು ಆದೇಶ ನೀಡಿದೆ. ಏಕಜಾತಿ ನೆಡುತೋಪುಗಳಿಂದ ಜಲಮೂಲ ನಾಶವಾಗಿದೆ, ಸೊಪ್ಪು, ಕಟ್ಟಿಗೆ ಸಿಗುತ್ತಿಲ್ಲ. ಜೀವ ಕಳೆದುಕೊಂಡ ನೈಸರ್ಗಿಕ ಅರಣ್ಯ ಬೆಳೆಸಲು ಸಮಾರೋಪಾದಿಯ ಪ್ರಯತ್ನ ಆಗಬೇಕು. ಅದಿಲ್ಲವಾದರೆ ನೆಡುತೋಪುಗಳು, ಬೆಲೆಬಾಳುವ ಮರಗಳು ಕಳ್ಳ ಸಾಗಣೆಗೆ ಅವಕಾಶವಾಗುತ್ತದೆ. ಖಾಸಗಿಯವರ ಅತಿಕ್ರಮಣವಾಗುತ್ತದೆ. ಮಲೆನಾಡಿನ ಅಮೂಲ್ಯ ಸರಕಾರಿ ಭೂಮಿ ಖಾಸಗಿಯವರ ಪಾಲಾಗಬಹುದು. ಈ ಹಿನ್ನೆಲೆಯಲ್ಲಿ ಸರಕಾರ ಪಶ್ಚಿಮ ಘಟ್ಟದ ಅಮೂಲ್ಯ ಭೂಮಿಯನ್ನು ಎಂಪಿಎಂನಿಂದ ಹಿಂದಕ್ಕೆ ಪಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಟ್ರಸ್ಟ್‌ನ ಉಪಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಪ್ರಧಾನ ಕಾರ್ಯದರ್ಶಿ ಗುರುಕುಮಾರ್ ಪಾಟೀಲ್, ಕಾರ್ಯದರ್ಶಿ ವೀರಪ್ಪಗೌಡ, ನಿರ್ದೇಶಕ ಎಂ.ನಾಗಪ್ಪ ವಕೀಲ್, ಸಮಿತಿಯ ಅಧ್ಯಕ್ಷ ಜೆ.ಎಸ್.ಚಿದಾನಂದಗೌಡ, ಕಾರ್ಯದರ್ಶಿ ವೀರೇಂದ್ರಗೌಡ, ಯೋಗೇಶ್, ನೆಮ್ಮದಿ ಸುಬ್ಬು, ಪ್ರವೀಣ್, ವಿಜಯಗೌಳಿ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X