Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಶುಭಾಗ್ಯ ಯೋಜನೆಯ ಅನುಷ್ಠಾನಕೆ...

ಪಶುಭಾಗ್ಯ ಯೋಜನೆಯ ಅನುಷ್ಠಾನಕೆ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ19 July 2016 11:03 PM IST
share
ಪಶುಭಾಗ್ಯ ಯೋಜನೆಯ ಅನುಷ್ಠಾನಕೆ ಪೂರ್ವಭಾವಿ ಸಭೆ

 ಮಡಿಕೇರಿ, ಜು.19 : ಪಶುಭಾಗ್ಯ ಯೋಜನೆ ಅನುಷ್ಠಾನ ಸಂಬಂಧ ನಗರದ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ಪೂರ್ವಭಾವಿ ಸಭೆ ನಡೆಯಿತು. ಸಣ್ಣ ಮತ್ತು ಅತೀ ಸಣ್ಣ ರೈತರು ಪಶುಭಾಗ್ಯ ಯೋಜನೆಯಡಿ ಹಸು, ಹಂದಿ, ಕೋಳಿ, ಆಡು ಘಟಕಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಸ್ವಾವಲಂಬನೆ ಗಳಿಸಿ ಉತ್ತಮ ಜೀವನ ನಡೆಸುವಂತಾಗಬೇಕು ಎಂಬ ಆಶಯದಿಂದ ಸರಕಾರ ಪಶುಭಾಗ್ಯ ಯೋಜನೆಯನ್ನು ಕಳೆದ ವರ್ಷದಿಂದ ಜಾರಿಗೊಳಿಸಿದೆ. ಸಭೆಯಲ್ಲಿ ಪಶುಭಾಗ್ಯ ಯೋಜನೆಯಡಿ ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ 1.20 ಲಕ್ಷ ರೂ.ವರೆಗೆ ಸಾಲ ಪಡೆದು ಹಸು, ಹಂದಿ, ಕೋಳಿ, ಆಡು, ಕುರಿ ಘಟಕಗಳನ್ನು ಸ್ಥಾಪಿಸಲು ಸಹಾಯ ಧನವನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇ.50ರಷ್ಟು, ಇತರೆ ಸಮುದಾಯದವರಿಗೆ ಶೇ.25 ರಷ್ಟು ಸಹಾಯಧನವನ್ನು ಒದಗಿಸಲಾಗುತ್ತದೆ. ಹಂದಿ ಸಾಕಣೆಯಲ್ಲಿ 4 ಹಂದಿಗಳನ್ನು ನೀಡಲಾಗುತ್ತಿದ್ದು, 94 ಸಾವಿರ ರೂ.ಘಟಕ ವೆಚ್ಚವಾಗಿದೆ. ಆಡು ಸಾಕಣೆಯಲ್ಲಿ 11 ಆಡುಗಳನ್ನು ನೀಡಲಾಗುತ್ತಿದ್ದು, 67,440ರೂ. ಘಟಕ ವೆಚ್ಚ ಒದಗಿಸಲಾಗುತ್ತದೆ. ಹಾಗೆಯೇ 200 ಮಾಂಸದ ಕೋಳಿ ಸಾಕಣೆೆಗಾಗಿ 85 ಸಾವಿರ ರೂ. ಘಟಕ ವೆಚ್ಚವನ್ನು ಭರಿಸಲಾಗುತ್ತದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ನಾಗರಾಜು ಅವರು ಮಾಹಿತಿ ನೀಡಿದರು. ಒಟ್ಟಾರೆ ಮಡಿಕೇರಿ ತಾಲೂಕಿನಲ್ಲಿ ಹೈನುಗಾರಿಕೆ 15 ಗುರಿಯಲ್ಲಿ ಸಾಮಾನ್ಯ 7, ಪರಿಶಿಷ್ಟ ಜಾತಿ 3, ಮಹಿಳೆ 5, ಆಡು ಸಾಕಣೆೆ 6, ಹಂದಿ ಸಾಕಣೆ 2, ಕೋಳಿ ಸಾಕಣೆ 3 ಫಲಾನುಭವಿಗಳನ್ನು ನಿಗದಿ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ ಹೈನುಗಾರಿಕೆಗೆ ಒಟ್ಟು 181 ಫಲಾನುಭವಿಗಳಿಗೆ ನಿಗದಿ ಮಾಎಲಾಗಿದ್ದು,್ದ, ಸಾಮಾನ್ಯ 130, ಪರಿಶಿಷ್ಟ ಜಾತಿ 14, ಪರಿಶಿಷ್ಟ ಪಂಗಡ 8, ಮಹಿಳೆಯರು 29, ಕೋಳಿ ಸಾಕಣೆೆಯಲ್ಲಿ ಒಟ್ಟು 5 ನಿಗದಿ ಮಾಡಲಾಗಿದ್ದು, 5 ಸಾಮಾನ್ಯ ಫಲಾನುಭವಿಗಳಿಗೆ ನಿಗದಿ ಮಾಡಲಾಗಿದೆ. ವೀರಾಜಪೇಟೆ ತಾಲೂಕಿನಲ್ಲಿ ಆಡು ಸಾಕಣೆೆಯಲ್ಲಿ ಒಟ್ಟು 15 ನಿಗದಿ ಮಾಡಲಾಗಿದ್ದು, ಸಾಮಾನ್ಯ 14, ಪರಿಶಿಷ್ಟ ಜಾತಿ 1., ಹಂದಿ ಸಾಕಣೆೆಯಲ್ಲಿ 10 ನಿಗದಿ ಮಾಡಲಾಗಿದ್ದು,, ಸಾಮಾನ್ಯ 7, ಪರಿಶಿಷ್ಟ ಜಾತಿ 2, ಪರಿಶಿಷ್ಟ ಪಂಗಡ 1., ಕೋಳಿ ಸಾಕಣೆಯಲ್ಲಿ ಒಟ್ಟು 20 ನಿಗದಿ ಮಾಡಲಾಗಿದ್ದು, ಸಾಮಾನ್ಯ 15, ಪರಿಶಿಷ್ಟ ಜಾತಿ 3, ಪರಿಶಿಷ್ಟ ಪಂಗಡ 2 ಗುರಿ ನಿಗದಿ ಮಾಡಲಾಗಿದೆ. ಆಸಕ್ತ ಅರ್ಹರು ಹತ್ತಿರದ ಪಶು ಚಿಕಿತ್ಸಾಲಯಗಳು, ತಾಲೂಕು ಪಶು ಸಂಗೋಪನಾ ಇಲಾಖೆಯಲ್ಲಿ ಅರ್ಜಿ ಪಡೆದು ಆ.14 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಬಾರ್ಡ್ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಕಾಬ್ಸೆಟ್ ನಿರ್ದೇಶಕರು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ಪಶುಪಾಲನಾ ಇಲಾಖೆ ಕಚೇರಿಗಳಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಡಾ.ಸಿ.ನಾಗರಾಜು ತಿಳಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎ.ದೇವಯ್ಯ, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಸಿ.ನಾಣಯ್ಯ, ಕಾಬ್ಸೆಟ್ ನಿರ್ದೇಶಕ ನಾಗೇಂದ್ರ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶಾಂತೇಶ್, ಡಾ.ಚೆಟ್ಟಿಯಪ್ಪ, ಡಾ.ಪ್ರಸನ್ನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X