Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ರಿಯೋ ಒಲಿಂಪಿಕ್ಸ್ ತಂಡಕ್ಕೆ...

ಭಾರತದ ರಿಯೋ ಒಲಿಂಪಿಕ್ಸ್ ತಂಡಕ್ಕೆ ಬೀಳ್ಕೊಡುಗೆ

ರಾಯಭಾರಿಗಳಾದ ರಹಮಾನ್, ಸಲ್ಮಾನ್‌ರಿಂದ ಸ್ಫೂರ್ತಿಯುತ ಮಾತು

ವಾರ್ತಾಭಾರತಿವಾರ್ತಾಭಾರತಿ19 July 2016 11:30 PM IST
share
ಭಾರತದ ರಿಯೋ ಒಲಿಂಪಿಕ್ಸ್ ತಂಡಕ್ಕೆ ಬೀಳ್ಕೊಡುಗೆ

ಹೊಸದಿಲ್ಲಿ, ಜು.19: ಭಾರತೀಯ ಒಲಿಂಪಿಕ್ ಅಸೋಸಿಯೇಶನ್(ಐಒಎ) ಸೋಮವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಗೀತ ಮಾಂತ್ರಿಕ ಎ.ಆರ್. ರಹಮಾನ್ ಹಾಗೂ ಬಾಲಿವುಡ್ ನಟ ಸಲ್ಮಾನ್ ಖಾನ್ ಸ್ಫೂರ್ತಿಯುತ ಮಾತುಗಳಿಂದ ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಅಥ್ಲೀಟ್‌ಗಳಿಗೆ ಬೀಳ್ಕೊಡುಗೆ ನೀಡಿದರು.

 ರಿಯೋ ಗೇಮ್ಸ್‌ನ ತರಬೇತಿ ಹಾಗೂ ಸಮಾರಂಭಗಳಲ್ಲಿ ಧರಿಸುವ ಉಡುಪುಗಳ ಅನಾವರಣದೊಂದಿಗೆ ಒಲಿಂಪಿಕ್ ಜ್ವರ ಪ್ರತಿಯೊಬ್ಬರಲ್ಲೂ ಹೆಚ್ಚಾಯಿತು. ಕಾರ್ಯಕ್ರಮದಲ್ಲಿ ಟೆನಿಸ್ ತಾರೆ ಸಾನಿಯಾ ಮಿರ್ಝಾ, ಬ್ಯಾಡ್ಮಿಂಟನ್ ಆಟಗಾರರಾ ಪಿ.ವಿ ಸಿಂಧು ಹಾಗೂ ಕೆ. ಶ್ರೀಕಾಂತ್, ಜಿಮ್ನಾಸ್ಟ್ ದೀಪಾ ಕರ್ಮಾಕರ್, ಕುಸ್ತಿಪಟುಗಳಾದ ಬಬಿತಾ ಕುಮಾರಿ, ವಿನೇಶ್ ಫೋಗತ್, ಜುಡೋ ಪಟು ಅವತಾರ್ ಸಿಂಗ್ ಹಾಗೂ ಟೇಬಲ್ ಟೆನಿಸ್ ಆಟಗಾರ ಮನಿಕಾ ಬಾತ್ರಾ ಸಹಿತ ಇನ್ನಿತರ ಅಥ್ಲೀಟ್‌ಗಳು ಭಾಗವಹಿಸಿದ್ದರು.

 ಯಾರೂ ಕೂಡ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಾವೇನು ಮಾಡಲಿದ್ದೇವೆಂದು ವಿಶ್ವಕ್ಕೆ ತೋರಿಸಿಕೊಡಿ. ಸಂಗೀತ ಹಾಗೂ ಕ್ರೀಡೆಗಳು ಬಲಿಷ್ಠವಾದ ಒಗ್ಗಟ್ಟಿನ ಅಂಶಗಳಾಗಿವೆ ಎಂದು ಹೇಳಿದ ರಹಮಾನ್, ‘ಕೋಯಿ ಹಮ್‌ಸೇ ಜೀತ್ನಾ ಪಾವೆ’ ಹಾಗೂ ‘ಜೈ ಹೋ’ ಹಾಡುಗಳನ್ನು ಹಾಡಿದರು.

‘‘ನೀವು ಶ್ರೇಷ್ಠ ಪ್ರದರ್ಶನ ನೀಡಿ. ಉಳಿದೆಲ್ಲವನ್ನೂ ಭಗವಂತನಿಗೆ ಬಿಡಿ. ಆದರೆ, ದೇವರಿಗೆ ಹೆಚ್ಚು ಭಾರ ಬಿಡಬೇಡಿ’’ ಎಂದು ಒಲಿಂಪಿಕ್‌ನ ಸದ್ಭಾವನಾ ರಾಯಭಾರಿ ಆಗಿರುವ ಸಲ್ಮಾನ್ ಖಾನ್ ತನ್ನದೇ ಶೈಲಿಯಲ್ಲಿ ಅಥ್ಲೀಟ್‌ಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಥ್ಲೀಟ್‌ಗಳು ಹಾಗೂ ಕೋಚ್‌ಗಳಿಗೆ ಟೀಮ್ ಕಿಟ್ ಹಾಗೂ ಪುಷ್ಪಗುಚ್ಛಗಳನ್ನು ನೀಡಲಾಯಿತು.

‘‘ಐಒಎ ಬ್ರಾಂಡ್ ವೌಲ್ಯವನ್ನು 500 ಕೋಟಿ ರೂ.ಗೆ ಏರಿಸುವ ಯೋಜನೆಯಿದೆ. ಈ ಮೂಲಕ ಯುಎಸ್ ಒಲಿಂಪಿಕ್ ಸಂಸ್ಥೆಯಂತೆಯೇ ಆರ್ಥಿಕ ವಾಗಿ ಸಬಲರಾಗಲು ಪ್ರಯತ್ನಿಸಲಿದ್ದೇವೆ. ನಮಗೆ ಮೂಲಭೂತ ಸೌಕರ್ಯಗಳಿಗೆ ಸರಕಾರದ ಬೆಂಬಲದ ಅಗತ್ಯವೂ ಇದೆ’’ ಎಂದು ಐಒಎ ಅಧ್ಯಕ್ಷ ಎನ್. ರಾಮಚಂದ್ರನ್ ಹೇಳಿದ್ದಾರೆ. ರಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತದಿಂದ ಒಟ್ಟು 120 ಅಥ್ಲೀಟ್‌ಗಳು(54 ಮಹಿಳೆಯರ ಸಹಿತ) ಭಾಗವಹಿಸುತ್ತಿದ್ದಾರೆ. ಈ ಬಾರಿ ಲಂಡನ್ ಒಲಿಂಪಿಕ್ಸ್‌ಗಿಂತ 30 ಶೇ.ದಷ್ಟು ಹೆಚ್ಚಿನ ಅಥ್ಲೀಟ್‌ಗಳು ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

‘‘ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಅಥ್ಲೀಟ್‌ಗಳಿಗೆ ಸರಕಾರ ಉದಾರವಾಗಿ ಆರ್ಥಿಕ ಸಹಾಯ ಮಾಡಿದೆ. ಈ ಹಿಂದೆ ಕಂತಿನ ಪ್ರಕಾರ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿ 90 ಶೇ. ಹಣವನ್ನು ಒಂದೇ ಬಾರಿ ಬಿಡುಗಡೆ ಮಾಡಿದ್ದೇವೆ. ಉಳಿದ 10 ಶೇ. ಹಣವನ್ನು ಲೆಕ್ಕಪತ್ರ ಸಲ್ಲಿಸಿದ ಬಳಿಕ ನೀಡಲಾಗುತ್ತದೆ. ದೀಪಾ ಕರ್ಮಾಕರ್ ಹಾಗೂ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕಾರಣ ಒಲಿಂಪಿಕ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಆತ್ಮವಿಶ್ವಾಸ ಹೆಚ್ಚಾಗಿದೆ’’ ಎಂದು ಕೇಂದ್ರ ಕ್ರೀಡಾ ಕಾರ್ಯದರ್ಶಿ ರಾಜೀವ್ ಯಾದವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X