Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂಹಕ್ಕು ವಂಚಿತರ ಹೋರಾಟ ಸಮಿತಿಯಿಂದ...

ಭೂಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 July 2016 9:40 PM IST
share
ಭೂಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಪ್ರತಿಭಟನೆ

ಶಿವಮೊಗ್ಗ, ಜು. 20: ರಾಜ್ಯದಲ್ಲಿ ಸ್ವಂತ ಮನೆಯಿಲ್ಲದೆ ಜೀವನ ಸಾಗಿಸುತ್ತಿರುವ ಬಡವರು, ದಲಿತರು, ದುರ್ಬಲರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಭೂ ಒಡೆತನದ ಹಕ್ಕು ಕಲ್ಪಿಸಬೇಕು ಎಂದು ಆಗ್ರಹಿಸಿ, ಭೂಮಿ ಮತ್ತು ಹಕ್ಕು ವಂಚಿತರ ಹೋರಾಟ ಸಮಿತಿಯು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು. ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಪತ್ರ ಅರ್ಪಿಸಿತು. ಸಾಗುವಳಿ ಭೂಮಿ ಹಾಗೂ ವಸತಿ ನಿವೇಶನ ನಾಡಿನ ಪ್ರತಿಯೊಬ್ಬರ ಹಕ್ಕು ಎಂದು ಘೋಷಿಸಬೇಕು. ಇದರ ಅನುಷ್ಠಾನಕ್ಕಾಗಿ ಕರ್ನಾಟಕ ಭೂ ಸುಧಾರಣೆ ಅಧಿನಿಯಮ 1961 ಮತ್ತು 1974 ಕ್ಕೆ ತಿದ್ದುಪಡಿ ತರಬೇಕು. ಕೃಷಿಕರಿಗೆ ಸ್ವಂತ ಭೂಮಿ, ಸ್ವಾವಲಂಬಿ ಕೃಷಿ ಮತ್ತು ಆಹಾರ ಸ್ವಾವಲಂಬನೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸ್ವಂತ ಭೂಮಿ ನೀಡಲು ಕಾನೂನಿನ ತೊಡಕಿದ್ದರೆ ಅದನ್ನು ನಿವಾರಿಸಿಕೊಳ್ಳಬೇಕು. ಪ್ರತಿ ಕುಟುಂಬಕ್ಕೆ 5 ಎಕರೆ ಭೂಮಿ ಹಾಗೂ ವಸತಿರಹಿತ ಕುಟುಂಬಕ್ಕೆ 30x

  40 ಚದರಡಿಯ ನಿವೇಶನ ಹಂಚಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ನಿಜವಾದ ಫಲಾನುಭವಿಗಳಿಗೆ ಭೂ ಮಂಜೂರಾತಿ ಮಾಡಲು ಸರಕಾರ ವಿಫಲವಾಗಿದೆ. ಭೂ ಕಬಳಿಸಿದ ಬಲಾಢ್ಯರ ವಿಷಯದಲ್ಲಿ ಸರಕಾರಗಳು ರಾಜಿಯಾಗಿವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕವಾಗಿದೆ. ವ್ಯವಸ್ಥೆಯಲ್ಲಿ ಮನೆ ಮಾಡಿರುವ ತಾರತಮ್ಯ ಧೋರಣೆಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಹಾಗೂ ಸರಕಾರಿ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಂಡು ಉದ್ದೇಶಿತ ಕೆಲಸಕ್ಕೆ ಬಳಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಬೇಕು. ಈ ಸಮಿತಿಗೆ ರಾಜ್ಯದ ಭೂಮಿಯ ಆಡಿಟಿಂಗ್ ನಡೆಸಬೇಕು. ಭೂಕಬಳಿಕೆ ನೀತಿಯನ್ನು ಪ್ರಕಟಿಸಬೇಕು. ಕನಿಷ್ಠ ಭೂಮಿ ಮತ್ತು ವಸತಿ ಇಲ್ಲದವರ ಪಟ್ಟಿ ತಯಾರಿಸಬೇಕು. ವಸತಿ, ಕೃಷಿ, ಸಣ್ಣ ಕೈಗಾರಿಕೆಗೆ ಬೇಕಾಗುವ ಭೂಮಿ ಪ್ರಮಾಣವನ್ನು ನಿಗದಿ ಮಾಡಬೇಕು. ಕಾರ್ಪೊರೇಟ್ ಶಕ್ತಿಗಳಿಂದ ರೈತರನ್ನು ಕಾಪಾಡಬೇಕು. ಕೃಷಿಯ ಸಮಗ್ರ ಉಳಿವಿಗೆ ಸಮಗ್ರ ನೀತಿ ರೂಪಿಸಬೇಕು. ಮೀಟರ್ ಬಡ್ಡಿಗೆ ಕಡಿವಾಣ ಹಾಕಬೇಕು. ಕೃಷಿ ಸಹಾಯಧನ ನೀಡಬೇಕು. ಕೃಷಿ ಬೆಲೆ ನೀತಿಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಕೆ.ಎಲ್.ಅಶೋಕ್, ಎಂ. ಗುರುಮೂರ್ತಿ, ವೀರೇಶ್, ರಾಘವೇಂದ್ರ, ಶ್ರೀಪಾಲ್, ಶಿವಾನಂದ ಕುಗ್ವೆ, ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X