Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ನಲ್ಲಿ ಸಂಪರ್ಕ ಸಕ್ರಮಗೊಳಿಸಿ...

ಅಕ್ರಮ ನಲ್ಲಿ ಸಂಪರ್ಕ ಸಕ್ರಮಗೊಳಿಸಿ ಇಲ್ಲವೇ, ಕಡಿತ ಮಾಡಿ: ಜಿಲ್ಲಾಧಿಕಾರಿ ನಕುಲ್

ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ20 July 2016 9:47 PM IST
share
ಅಕ್ರಮ ನಲ್ಲಿ ಸಂಪರ್ಕ ಸಕ್ರಮಗೊಳಿಸಿ ಇಲ್ಲವೇ, ಕಡಿತ ಮಾಡಿ: ಜಿಲ್ಲಾಧಿಕಾರಿ ನಕುಲ್

ಕಾರವಾರ, ಜು.20: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಕ್ರಮವಾಗಿ ಪಡೆದಿರುವ ನಲ್ಲಿ ಸಂಪರ್ಕಗಳನ್ನು ದಂಡ ವಸೂಲಿ ಮಾಡಿ ಸಕ್ರಮಗೊಳಿಸಬೇಕು. ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬುಧವಾರ ನಗರದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನಗರ ವ್ಯಾಪ್ತಿಯಲ್ಲಿ 98, 083 ಆಸ್ತಿಗಳ ಪೈಕಿ ಕೇವಲ 38, 572 ಕಡೆಗಳಲ್ಲಿ ಮಾತ್ರ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಕಾರವಾರ ನಗರದಲ್ಲಿ 15, 653 ಆಸ್ತಿಗಳ ಪೈಕಿ ಕೇವಲ 1, 583 ಅಧಿಕೃತ ನಲ್ಲಿ ಸಂಪರ್ಕಗಳಿವೆ. ಶಿರಸಿಯಲ್ಲಿ 16, 792 ಆಸ್ತಿಗಳ ಪೈಕಿ 7, 747 ಅಧಿಕೃತ ನಲ್ಲಿ ಸಂಪರ್ಕಗಳಿವೆ. ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಅನಧಿಕೃತ ನಲ್ಲಿ ಸಂಪರ್ಕಗಳನ್ನು ಗುರುತಿಸಿ ನಿಯಮಾನುಸಾರ ಸಕ್ರಮಗೊಳಿಸಬೇಕು. ಇಲ್ಲದಿದ್ದಲ್ಲಿ ಅಂತಹ ಸಂಪರ್ಕಗಳನ್ನು ಕಡಿತ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಕಾರವಾರ, ದಾಂಡೇಲಿ ಮತ್ತು ಶಿರಸಿ ನಗರಸಭೆ, ಭಟ್ಕಳ ಪುರಸಭೆ, ಹೊನ್ನಾವರ, ಸಿದ್ದಾಪುರ, ಮುಂಡಗೋಡು ಮತ್ತು ಯಲ್ಲಾಪುರ ಪಟ್ಟಣ ಪಂಚಾಯತ್‌ಗಳಲ್ಲಿ ಮೀಟರ್ ಅಳವಡಿಸದೇ ಇರುವ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ನಿರ್ದೇಶನಗಳನ್ನು ಪಾಲಿಸಲಾಗಿಲ್ಲ. ಇದರಿಂದ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಸದರಿ ಸ್ಥಳೀಯ ಸಂಸ್ಥೆಗಳು ಸರಕಾರದ ನಿರ್ದೇಶನದ ಪ್ರಕಾರ ದರವನ್ನು ಶೇಕಡಾವಾರು ಪರಿಷ್ಕರಿಸಬೇಕು ಎಂದರು.

ಪೌರ ಕಾರ್ಮಿಕರಿಗೆ ಸೌಲಭ್ಯ: ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ, ಕೈಗವಚ, ಶೂ ಕಡ್ಡಾಯವಾಗಿ ಪ್ರತಿವರ್ಷ ಒದಗಿಸಬೇಕು. ಪ್ರತಿವರ್ಷ ಎರಡು ಬಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ಪೌರ ಕಾರ್ಮಿಕರಿಗೆ ಮನೆಗಳ ನಿರ್ಮಾಣಕ್ಕೆ ನಿವೇಶನಗಳನ್ನು ಗುರುತಿಸುವಂತೆ ಈಗಾಗಲೇ ಹಲವು ಬಾರಿ ಸೂಚನೆಗಳನ್ನು ನೀಡಲಾಗಿದೆ. ಆದ್ಯತೆ ಮೇರೆಗೆ ಈ ಕಾರ್ಯವನ್ನು ಮಾಡಬೇಕು. ಹೊರಗುತ್ತಿಗೆ ಆಧಾರದ ಪೌರ ಕಾರ್ಮಿಕರಿಗೆ ಸಂಬಂಧಪಟ್ಟ ಸಂಸ್ಥೆಯಿಂದ ವೇತನ ಪಾವತಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೇರವಾಗಿ ಪಾವತಿ ಮಾಡುವಂತಿಲ್ಲ ಎಂದು ಸೂಚಿಸಿದರು.

ಶೇ.22.75 ಯೋಜನೆ, ಶೇ.7.2 ಯೋಜನೆ ಹಾಗೂ ಶೇ.3ರ ಯೋಜನೆಯಡಿ ಸ್ಥಳೀಯ ಸಂಸ್ಥೆಗಳು ನಿರೀಕ್ಷಿತ ಪ್ರಗತಿಯನ್ನು ಸಾಧಿಸಿರುವುದಿಲ್ಲ. ಹಲವು ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನ ನಿಧಾನಗತಿಯಲ್ಲಿದೆ. ಕಾಮಗಾರಿ ಅನುಷ್ಠಾನದಲ್ಲಿ ಲೋಪ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿದ್ದು, ಇದಕ್ಕೆ ಆಸ್ಪದ ಕೊಡಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ(ಹೆಚ್ಚುವರಿ ಪ್ರಭಾರ) ಎಚ್.ಪ್ರಸನ್ನ, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X