ವಿಟ್ಲ :ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ

ವಿಟ್ಲ,ಜು.20 : ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ-ನೆಹರುನಗರ ನೂರುಲ್ ಹುದಾ ಯಂಗ್‌ಮೆನ್ಸ್ ಎಸೋಸಿಯೇಶನ್ ವತಿಯಿಂದ ಇಲ್ಲಿನ ಬದ್ರಿಯಾ ಮದ್ರಸ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಇತ್ತೀಚೆಗೆ ವಿತರಿಸಲಾಯಿತು.
ಈ ಸಂದರ್ಭ ಮಸೀದಿ ಉಪಾಧ್ಯಕ್ಷ ಪಿ.ಎಂ. ಇಬ್ರಾಹಿಂ, ಕಾರ್ಯದರ್ಶಿ ಸಲೀಂ, ಖತೀಬ್ ಶುಕೂರ್ ದಾರಿಮಿ, ನೂರುಲ್ ಹುದಾ ಎಸೋಸಿಯೇಶನ್ ಅಧ್ಯಕ್ಷ ಇಮ್ರಾನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Next Story





