Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಗಿಲ್: ಪಾಕ್ ಮೇಲೆ ಬಾಂಬ್ ದಾಳಿಗೆ...

ಕಾರ್ಗಿಲ್: ಪಾಕ್ ಮೇಲೆ ಬಾಂಬ್ ದಾಳಿಗೆ ಮುಂದಾಗಿದ್ದ ವಾಯುಪಡೆ

ವಾರ್ತಾಭಾರತಿವಾರ್ತಾಭಾರತಿ20 July 2016 11:39 PM IST
share

ಹೊಸದಿಲ್ಲಿ, ಜು.20: ಭಾರತೀಯ ವಾಯುಪಡೆ 1999ರ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಪಾಕಿಸ್ತಾನದ ಆಯಕಟ್ಟಿನ ಮತ್ತು ಪ್ರಮುಖ ಪ್ರದೇಶಗಳ ಮೇಲೆ ಬಾಂಬ್‌ದಾಳಿ ನಡೆಸಲು ವಿಸ್ತೃತ ಯೋಜನೆಯನ್ನು ರೂಪಿಸಿತ್ತು. ಭಾರತೀಯ ವಾಯುಪಡೆೆಯ ಗುರಿ ಕರಾಚಿ ಬಂದರು ಆಗಿತ್ತು ಎಂಬ ಅಂಶ ಬಹಿರಂಗವಾಗಿದೆ.

ಆದರೆ ಈ ರೂಪುರೇಷೆಗಳ ಅನುಷ್ಠಾನಕ್ಕೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರ ಅವಕಾಶ ನೀಡಲಿಲ್ಲ. ಮೇ 25ರಂದು ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಅಂದಿನ ವಾಯುಪಡೆಯ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್ ಎ.ವೈ.ಟಿಪ್ನಿಸ್ ಅವರಿಗೆ ಸ್ಪಷ್ಟ ಸೂಚನೆ ನೀಡಿ, ಪಾಕಿಸ್ತಾನದ ಒಳ ಹೊಕ್ಕು ಬಾಂಬ್ ದಾಳಿ ನಡೆಸುವುದು ಬಿಡಿ, ಯಾವುದೇ ಕಾರಣಕ್ಕೆ ನಿಮ್ಮ ಯುದ್ಧ ವಿಮಾನಗಳು ಗಡಿ ನಿಯಂತ್ರಣ ರೇಖೆಯ ಸರಹದ್ದು ಮೀರಿ ಹೋಗಬಾರದು ಎಂದು ಹೇಳಿತ್ತು. ಈ ಸಂದರ್ಭದಲ್ಲಿ ಟಿಪ್ನಿಸ್ ಅವರು, ಗಡಿ ನಿಯಂತ್ರಣ ರೇಖೆಯನ್ನು ಸ್ವಲ್ಪಮಟ್ಟಿಗೆ ಉಲ್ಲಂಘಿಸಿ, ಆಯಕಟ್ಟಿನ ಜಾಗವನ್ನು ವಶಕ್ಕೆ ಪಡೆದಿದ್ದ ಪಾಕಿಸ್ತಾನಿ ಸೈನಿಕರ ವಿರುದ್ಧ ಹೋರಾಡಲು ಟಿಪ್ನಿಸ್ ವೈಯಕ್ತಿಕ ನೆಲೆಯಲ್ಲಿ ಕೂಡಾ ಅನುಮತಿ ಕೋರಿದ್ದರು.

ವಾಯುಪಡೆ ಎಲ್‌ಒಸಿಯನ್ನು ಸ್ವಲ್ಪಮಟ್ಟಿಗೆ ಮೀರಿ ಮುನ್ನಡೆಯಲು ಕೋರಿದ್ದ ಅವಕಾಶವನ್ನು ಸರಕಾರ ಖಡಾಖಂಡಿತವಾಗಿ ನಿರಾಕರಿಸಿತ್ತು. ವಾಜಪೇಯಿ ಸ್ವತಃ ನೇರವಾಗಿ, ದಯವಿಟ್ಟು, ಎಲ್‌ಒಸಿ ಉಲ್ಲಂಘಿಸಬೇಡಿ ಎಂದಿದ್ದರು ಎಂಬುದನ್ನು ಎ.ವೈ.ಟಿಪ್ನೀಸ್ ನೆನಪಿಸಿಕೊಂಡರು. ಭಾರತದ ಈ ಸ್ವಯಂ ನಿಯಂತ್ರಣದಿಂದಾಗಿ ಕಾರ್ಗಿಲ್ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧವಾಗಿ ಪರಿವರ್ತನೆಯಾಗಲಿಲ್ಲ. ಈ ಸಂದರ್ಭದಲ್ಲಿ ಅಮೆರಿಕ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ತಾನದ ಮೇಲೆ ಒತ್ತಡ ಹೇರಿ, ಕಾರ್ಗಿಲ್‌ನಿಂದ ಸೇನೆ ವಾಪಸು ಪಡೆಯುವಂತೆ ಸೂಚಿಸಿತ್ತು.
ಭಾರತೀಯ ಸೇನೆ ಮೇ 26ರಂದು ಆರಂಭಿಸಿದ್ದ ಪ್ರತಿದಾಳಿಗೆ ಪೂರಕವಾಗಿ, ಆಕ್ರಮಣಕಾರಿ ದಾಳಿಗೆ ವಾಯುಪಡೆ ಮುಂದಾಗಿತ್ತು. ಆದರೆ ಎಲ್ಲ ಭಾರತೀಯ ಮಿಗ್-21, ಮಿಗ್-27 ಹಾಗೂ ಮೀರಜ್-2000 ಯುದ್ಧ ವಿಮಾನಗಳು ಗಡಿಯೊಳಗಿನಿಂದಲೇ ದಾಳಿ ನಡೆಸಿದವು ಎಂದು ಎನ್‌ಡಿಟಿವಿಯ ವಿಶೇಷ ಕಾರ್ಯಕ್ರಮದಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X