ಅನಧಿಕೃತ ವಾಸ: ನೈಜೀರಿಯಾ ವಿದ್ಯಾರ್ಥಿ ವಿರುದ್ಧ ಪ್ರಕರಣ
ಮಣಿಪಾಲ, ಜು.20: ಮಣಿಪಾಲದಲ್ಲಿ ಅನಧಿಕೃತವಾಗಿ ವಾಸವಾಗಿರುವ ಮಣಿಪಾಲ ವಿವಿಯ ನೈಜಿರಿಯಾ ಮೂಲದ ವಿದ್ಯಾರ್ಥಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಫಾರ್ಮಸ್ಯೂಟಿಕಲ್ ಸೈನ್ಸ್‌ನ ಬಿ. ಫಾರ್ಮಾ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅಗಸ್ಟಿನ್ ಜ್ಯೂನಿಯರ್ ಉನಡಿಕೆ ಎಂಬಾತನ ವಿದ್ಯಾರ್ಥಿ ವೀಸಾ ಅವಧಿಯು 2014ರ ಜುಲೈ 25ಕ್ಕೆ ಮುಕ್ತಾಯಗೊಂಡಿದೆ. ಆದರೆ ಆ ಬಳಿಕ ಆತ ಭಾರತದಲ್ಲಿರಲು ವೀಸಾ ಮತ್ತು ವಾಸ್ತವ್ಯದ ನೋಂದಣಿ ಪತ್ರ ಇಲ್ಲದಿದ್ದರೂ ಅನಧಿಕೃತವಾಗಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಿದ್ದಾನೆ. ಪಾಸ್‌ಪೋರ್ಟ್ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಆತನ ಬಗ್ಗೆ ಪರಿಶೀಲನೆ ನಡೆಸಿರುವ ಮಣಿಪಾಲ ಪೊಲೀಸ್ ನಿರೀಕ್ಷಕ ಎಸ್.ವಿ.ಗಿರೀಶ್ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





