ಮಂಗಳೂರು: 20ನೆ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ

ಮಂಗಳೂರು, ಜು.21: ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ನೇತೃತ್ವದಲ್ಲಿ ನಗರದ ನೆಹರೂ ಮೈದಾನದಲ್ಲಿ 25 ದಿನಗಳ ಕಾಲ ನಡೆಯಲಿರುವ 20ನೆ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಗುರುವಾರ ಚಾಲನೆ ದೊರೆಯಿತು.
ಪಂದ್ಯಾವಳಿಗೆ ಚಾಲನೆ ನೀಡಿದ ಮನಪಾ ಮೇಯರ್ ಹರಿನಾಥ್, ನೆಹರು ಮೈದಾನವನ್ನು ಫುಟ್ಬಾಲ್ ಮೈದಾನ ಮಾಡುವ ನಿಟ್ಟಿನಲ್ಲಿ ಪಾಲಿಕೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ದೃಢೀಕರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಮಹಾಬಲ ಮಾರ್ಲ, ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ, ವಿಜಯ್ ಸುವರ್ಣ, ಹನೀಫ್, ಉಮೇಶ್, ಅನಿಲ್ ಪಿ.ವಿ., ಹುಸೈನ್ ಬೋಳಾರ್, ಬಾಲಕೃಷ್ಣ ಪೈ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಮೇಯರ್ ಹರಿನಾಥ್‌ರನ್ನು ಸನ್ಮಾನಿಸಲಾಯಿತು.
Next Story





