Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಿಡ, ಮರಗಳ ಮೇಲೆ ಪ್ರೀತಿ ಇರಲಿ:...

ಗಿಡ, ಮರಗಳ ಮೇಲೆ ಪ್ರೀತಿ ಇರಲಿ: ಮೀನಾಕ್ಷಿ ಶಾಂತಿಗೋಡು

ಪಾಣಾಜೆ ಶಾಲೆಯಲ್ಲಿ ಕೋಟಿವೃಕ್ಷ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ21 July 2016 5:09 PM IST
share
ಗಿಡ, ಮರಗಳ ಮೇಲೆ ಪ್ರೀತಿ ಇರಲಿ: ಮೀನಾಕ್ಷಿ ಶಾಂತಿಗೋಡು

ಪುತ್ತೂರು, ಜು.21: ಮರಗಿಡಗಳನ್ನು ಬೆಳೆಸಿದರೆ ನಮ್ಮ ವಾತಾವರಣವು ಉತ್ತಮವಾಗಿರುವುದಲ್ಲದೆ ನೀರಿನ ಅಭಾವವನ್ನು ಕಡಿಮೆ ಮಾಡುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯು ನೀರಿನ ಅಭಾವವನ್ನು ಈ ಬಾರಿ ಕಂಡಿದೆ. ಆದುದರಿಂದ ಜಲ ಮರುಪೂರಣವನ್ನು ಮಾಡಿದರೆ ನೀರಿನ ಅಭಾವವನ್ನು ತಪ್ಪಿಸಬಹುದು ಆದುದರಿಂದ ಗಿಡಮರಗಳನ್ನು ಬೆಳೆಸಿ ಅದನ್ನು ಚೆನ್ನಾಗಿ ಪೋಷಿಸಿದರೆ ಯಾವ ಸಮಸ್ಯೆಗಳು ಬರುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ಹಮ್ಮಿಕೊಂಡ ಕೋಟಿವೃಕ್ಷ ಅಭಿಯಾನವನ್ನು ತಾವೆಲ್ಲಾ ಯಶಸ್ವಿಗೊಳಿಸಬೇಕೆಂದು ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಅವರು ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆಯಲ್ಲಿ ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಆರ್ಲಪದವು ಮತ್ತು ಪಾಣಾಜೆ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆದ ಕೋಟಿವೃಕ್ಷ ಅಭಿಯಾನದ ಪ್ರಯುಕ್ತ ನಡೆದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಮಾಲ ವಿ.ಎನ್. ಚಾರಿಟೇಬಲ್ ಟ್ರಸ್ಟ್ ಶಾಲೆಗೆ ನೀಡಿದ ಗಡಿಯಾರ, ಛೇರ್ ಮತ್ತು ಕಸದ ಬುಟ್ಟಿ ವಿತರಿಸಿದರು. ತಾಲೂಕು ಪಂಚಾಯತ್ ಸದಸ್ಯೆ ಮೀನಾಕ್ಷಿ ಮಂಜುನಾಥ್ ಸಾಂಕೇತಿಕವಾಗಿ ಸಸಿ ವಿತರಿಸಿದರು.

ದ.ಕ.ಜಿಪಂ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇದರ ಶಾಲಾಭಿವೃದ್ದಿ ಸಮಿತಿಯ ನಿರ್ಗಮನ ಅಧ್ಯಕ್ಷ ಸತ್ಯನಾರಾಯಣ ಅಡಿಗ ಮತ್ತು ಸದಸ್ಯರಿಗೆ ವಿದಾಯ ಕೂಟ ಹಾಗೂ ನೂತನ ಸಮಿತಿಯ ಪದಗ್ರಹಣ ಸಮಾರಂಭವನ್ನು ಈ ಸಂದರ್ಭದಲ್ಲಿ ನಡೆಸಲಾಯಿತು.

ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸದಾಶಿವ ರೈ ಸೂರಂಬೈಲು, ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸದಸ್ಯ ಶಿವಾನಂದ ಮಣಿಯಾಣಿ , ಸ್ನೇಹ ಜನರಲ್ ಸ್ಟೋರ್ಸ್‌ನ ಮಾಲಕ ವರದರಾಯ ನಾಯಕ್, ಬೆಟ್ಟಂಪಾಡಿ ಕ್ಲಸ್ಟರ್ ಸಿಆರ್‌ಪಿ ಜನಾರ್ಧನ ಅಲ್ಚಾರ್, ಶಾಲಾ ಮುಖ್ಯ ಶಿಕ್ಷಕಿ ಕೆ.ಶೀಲಾವತಿ, ಪಾಣಾಜೆ ಪ್ರಾ.ಕೃ.ಪ.ಸ.ಸಂಘ ದ ನಿರ್ದೇಶಕ ರವೀಂದ್ರ ಭಂಡಾರಿ ಬೈಂಕ್ರೋಡ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಅಬೂಬಕರ್ ಆರ್ಲಪದವು ಪ್ರಾಸ್ತಾವಿಕವಾಗಿ ಮಾತನಾಡಿ ಶಾಲಾ ದುರಸ್ತಿಗೆ ಅನುದಾನ ಒದಗಿಸುವಂತೆ ಕೋರಿ ಮನವಿಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ನೀಡಿದರು. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ ತೂಂಬಡ್ಕ ಅಧ್ಯಕ್ಷತೆ ವಹಿಸಿದ್ದರು.

ಶ್ರೀಪ್ರಸಾದ್ ಎನ್.ಎಸ್. ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀಹರಿ ನಡುಕಟ್ಟ ನಿರೂಪಿಸಿದರು. ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಚಂದ್ರ ಎ.ಬಿ. ಹಾಗೂ ಟ್ರಸ್ಟ್‌ನ ಎಲ್ಲಾ ಪದಾಧಿಕಾರಿಗಳು ಶಾಲಾ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X