ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ವರ್ಗಾವಣೆ
ಮಂಗಳೂರು, ಜು. 21: ದ.ಕ. ಜಿಲ್ಲಾಧಿಕಾರಿಯಾಗಿದ್ದ ಎ.ಬಿ.ಇಬ್ರಾಹೀಂ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.
ಸುಮಾರು 2.7 ವರ್ಷಗಳ ಕಾಲ ದ.ಕ. ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ರಾಹೀಂ ಅವರನ್ನು ರಾಜ್ಯ ಸಾರಿಗೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೀಗ ದ.ಕ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ಜಿ.ಜಗದೀಶ್ ನೇಮಕಗೊಂಡಿದ್ದಾರೆ.
2005ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಡಾ.ಜಗದೀಶ್ ಅವರು ಈ ಹಿಂದೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
Next Story