Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಎಸ್ಸಾರ್ಟಿಸಿ ನೌಕರರಿಂದ...

ಕೆಎಸ್ಸಾರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕ ರ

ಜು.25 ರಿಂದ ರಾಜ್ಯ ವ್ಯಾಪಿ ಬಸ್ ಸಂಚಾರ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ21 July 2016 10:07 PM IST
share
ಕೆಎಸ್ಸಾರ್ಟಿಸಿ  ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕ  ರ

ಮಡಿಕೇರಿ, ಜು. 21 : ವೇತನ ತಾರತಮ್ಯ ನಿವಾರಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕೆಎಸ್ಸಾರ್ಟಿಸಿ ಸಾಫ್ ಆ್ಯಂಡ್ ವರ್ಕರ್ಸ್‌ ಯೂನಿಯನ್ ನಿರ್ಧರಿಸಿದೆ.

ಸುಮಾರು 23 ಸಾವಿರ ಕೆಎಸ್ಸಾರ್ಟಿಸಿ ಬಸ್‌ಗಳು ಜು. 25 ರಿಂದ ಸಂಚಾರವನ್ನು ಸ್ಥಗಿತಗೊಳಿಸಲಿವೆ ಎಂದು ಯೂನಿಯನ್‌ನ ಪುತ್ತೂರು ವಿಭಾಗದ ಪ್ರಧಾನ ಕಾರ್ಯದರ್ಶಿ ರಿಹಾನ್ ಶೇಖ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ಮುಷ್ಕರಕ್ಕೆ ಮುಂದಾಗಿರುವುದಾಗಿ ತಿಳಿಸಿದರು. ಕೆಎಸ್ಸಾರ್ಟಿಸಿಯ ನಾಲ್ಕು ನಿಗಮಗಳು ಏಕಕಾಲಕ್ಕೆ ಮುಷ್ಕರವನ್ನು ಆರಂಭಿಸಲಿದ್ದು, ಸುಮಾರು 2 ಕೋಟಿ ಪ್ರಯಾಣಿಕರು ಇದರಿಂದ ತೊಂದರೆ ಅನುಭವಿಸಲಿದ್ದಾರೆ ಎಂದರು.

 ಕೊಡಗು ಜಿಲ್ಲೆಯಲ್ಲಿ ಸುಮಾರು 500 ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಲಿದ್ದು, 113 ಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮೊಟಕು ಗೊಳಿಸಲಿದೆ ಎಂದು ಅವರು ತಿಳಿಸಿದರು.

 ಮೂಲ ವೇತನದಲ್ಲಿ ಶೇ. 35 ರಷ್ಟು ಹೆಚ್ಚಿಸಬೇಕು. ಎಲ್ಲಾ ಭತ್ತೆಗಳನ್ನು ಏರಿಕೆ ಮಾಡಬೇಕು. ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಎನ್‌ಐಎನ್‌ಸಿ ಪ್ರಕರಣಗಳಲ್ಲಿ ನಿರ್ವಾಹಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬಾರದು. ನಿರ್ವಾಹಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು. ಚಾಲಕರನ್ನು ಅಪಘಾತ ಪ್ರಕರಣಗಳಿಗೆ ಹೊಣೆಗಾರರನ್ನಾಗಿ ಮಾಡಬಾರದು. ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಅವರು ಇಚ್ಛೆ ಪಡುವ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಿ ಚಾಲಕ ಕಂ ನಿರ್ವಾಹಕ ಕ್ರಮವನ್ನು ಕೈಬಿಡಬೇಕು.ಸಿಬ್ಬಂದಿಯ ವೇತನದಲ್ಲಿ ಅಕ್ರಮ ಕಡಿತವನ್ನು ಪೂರ್ಣವಾಗಿ ರದ್ದು ಮಾಡಬೇಕು.ನೌಕರರು ಹಾಗೂ ಅವರ ಕುಟುಂಬ ವರ್ಗದ ವೈದ್ಯಕೀಯ ವೆಚ್ಚ ಭರಿಸಬೇಕು. ಚಾಲಕರು ಹಾಗೂ ನಿರ್ವಾಹಕರಿಗೆ ಅವರು ಮಾಡುವ ಕೆಲಸಕ್ಕೆ ಅನುಗುಣವಾಗಿ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು. ಮಹಿಳಾ ಸಿಬ್ಬಂದಿಯ ಮೇಲಿನ ಕಿರುಕುಳಗಳನ್ನು ತಡೆಯಬೇಕು ಮತ್ತು ಇವರಿಗೆ ವಿಶ್ರಾಂತಿ ಗೃಹದ ವ್ಯವಸ್ಥೆಯನ್ನು ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿರುವುದಾಗಿ ರಿಹಾನ್ ಶೇಖ್ ತಿಳಿಸಿದರು. ಕಾರ್ಯದರ್ಶಿ ಮುಹಮ್ಮದ್ ಮಾತನಾಡಿ, 2015 ಡಿ. 31 ರಂದು ವೇತನ ಪರಿಷ್ಕರಣೆಯ ಕಾಲಾವಧಿ ಮುಕ್ತಾಗೊಂಡು 8 ತಿಂಗಳು ಕಳೆದರೂ ನೌಕರರ ಬೇಡಿಕೆಗಳಿಗೆ ಸರಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲವೆಂದು ಆರೋಪಿಸಿದರು.

ಸರಕಾರ ಶೇ. 8 ರಷ್ಟು ಮಾತ್ರ ವೇತನ ಹೆಚ್ಚಳ ಮಾಡಿದ್ದು, ಸಂಸ್ಥೆಗೆ ನಷ್ಟವಾಗುತ್ತಿದೆ ಎನ್ನುವ ಕಾರಣ ನೀಡಲಾಗುತ್ತಿದೆ. ನಷ್ಟಕ್ಕೆ ನೌಕರರು ಕಾರಣವಲ್ಲವೆಂದು ಸ್ಪಷ್ಟಪಡಿಸಿದ ಅವರು ಬಸ್‌ಗಳಿಗೆ ಕಳಪೆ ಗುಣಮಟ್ಟದ ಪರಿಕರಗಳನ್ನು ಒದಗಿಸಲಾಗುತ್ತಿದೆ ಎಂದು ಆರೋಪಿಸಿದರು. ಡೀಸೆಲ್ ಬೆಲೆ ಇಳಿಕೆಯಾದರೂ ಪ್ರಯಾಣ ದರದಲ್ಲಿ ಇಳಿಕೆಯಾಗಿಲ್ಲ ಮತ್ತು ಪ್ರಯಾಣಿಕರಿಗೆ ಯಾವುದೇ ಅನುಕೂಲ ಕಲ್ಪಿಸಿಲ್ಲ. ಈ ಎಲ್ಲಾ ಅವ್ಯವಸ್ಥೆಗಳಿಗೆ ಆಡಳಿತ ವ್ಯವಸ್ಥೆಯ ಕಾರ್ಯ ವೈಖರಿ ಕಾರಣ ಎಂದು ಅವರು ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಚ್.ಎಂ.ಕುಮಾರ್, ಕಾರ್ಯದರ್ಶಿ ನಂಜುಂಡ ಸ್ವಾಮಿ, ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X