Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೌರ್ಜನ್ಯ ನಿಲ್ಲದಿದ್ದರೆ ಮತಾಂತರ

ದೌರ್ಜನ್ಯ ನಿಲ್ಲದಿದ್ದರೆ ಮತಾಂತರ

ಗುಜರಾತ್ ದಲಿತರ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ21 July 2016 10:30 PM IST
share

ಅಹ್ಮದಾಬಾದ್, ಜು.21: ದಲಿತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುಖ್ಯಮಂತ್ರಿ ಆನಂದಿ ಬೆನ್ ಕರೆ ನೀಡಿರುವಂತೆಂಯೇ ಹಿಂದುತ್ವದ ಹೆಸರಿನಲ್ಲಿ ದೌರ್ಜನ್ಯ ನಿಲ್ಲದಿದ್ದರೆ ಹಿಂದೂ ಧರ್ಮವನ್ನೇ ಬಿಡುತ್ತೇವೆ ಎಂದು ಗುಜರಾತ್ ದಲಿತರು ಬೆದರಿಕೆ ಹಾಕಿದ್ದಾರೆ.

  ತರುವಾಯ ದಲಿತ ಹೋರಾಟಗಾರರ ಸತ್ಯ ಶೋಧನಾ ತಂಡ ಸತ್ತ ಗೋವೊಂದರ ಚರ್ಮ ಸುಲಿದು ಸಾಗಣೆ ಮಾಡುತ್ತಿದ್ದರೆನ್ನಲಾದ ದಲಿತ ಕುಟುಂಬವೊಂದರ ಏಳು ಮಂದಿ ಸದಸ್ಯರ ಮೇಲೆ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ನಡೆದ ದೌರ್ಜನ್ಯ ಪ್ರಕರಣದ ಸಂಬಂಧ ವರದಿ ಬಿಡುಗಡೆ ಮಾಡಿದೆ.
ಎಂಟು ಮಂದಿಯ ತಂಡದ ಸತ್ಯ ಶೋಧನಾ ವರದಿಯಂತೆ ಆರೋಪಿಗಳು ದಲಿತ ಕುಟುಂಬದ ಮೇಲೆ ಹಿಂದುತ್ವದ ಹೆಸರಿನಲ್ಲಿ ಹಲ್ಲೆ ನಡೆಸಿದ್ದು ಅವರಿಗೆ ಆರೆಸ್ಸೆಸ್, ಬಿಜೆಪಿ ಹಾಗೂ ವಿಹಿಂಪ ಬೆಂಬಲವಿತ್ತೆಂದು ಹೇಳಿದೆ.
ಸೌರಾಷ್ಟ್ರ ಮತ್ತಿತರ ಜಿಲ್ಲೆಗಳಲ್ಲಿ ಪ್ರತಿಭಟನೆಗಳ ಕಾವು ಹೆಚ್ಚುತ್ತಿದ್ದಂತೆಯೇ ಈ ವರದಿ ಬಿಡುಗಡೆಯಾಗಿದೆ. ತನ್ಮಧ್ಯೆ ರಾಜ್ಯದಲ್ಲಿ ಏಳು ದಲಿತರು ಆತ್ಮಹತ್ಯೆಗೆ ಯತ್ನಿಸಿದ್ದರೆ, ಅವರಲ್ಲಿ ಒಬ್ಬ ಮೃತಪಟ್ಟಿದ್ದಾನೆ. ಗಲಭೆಕೋರರ ಕಲ್ಲು ತೂರಾಟದಿಂದ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರೂ ಸಾವಿಗೀಡಾಗಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಇನ್ನೂ ಏಳು ಜನರನ್ನು ಬಂಧಿಸಿದ್ದು ಒಟ್ಟು ಬಂಧನಗಳ ಸಂಖ್ಯೆ 16ಕ್ಕೆ ಏರಿದೆ.
ಆರೋಪಿಗಳು ಉನಾ ಪೊಲೀಸ್ ಠಾಣೆಯ ಎದುರೇ ದಲಿತ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆಂದು ಸತ್ಯ ಶೋಧನಾ ತಂಡದಲ್ಲಿದ್ದ ದಲಿತ ಹಕ್ಕು ಕಾರ್ಯಕರ್ತ ಕೌಶಿಕ್ ಪರ್ಮಾರ್ ಆಪಾದಿಸಿದ್ದಾರೆ.
 ಅರೋಪಿಗಳು ತಮ್ಮ ಭಾವಚಿತ್ರ ತೆಗೆದು, ನಂತರ ದೌರ್ಜನ್ಯದ ವಿಡಿಯೋ ಚಿತ್ರೀಕರಣ ನಡೆಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆಂದಾದರೆ ಅವರಿಗೆ ಪೊಲೀಸರು, ಆರೆಸ್ಸೆಸ್, ಬಿಜೆಪಿ ಹಾಗೂ ವಿಹಿಂಪದ ಬೆಂಬಲವಿದ್ದು ತಮಗೇನೂ ತೊಂದರೆಯಾಗಲು ಸಾಧ್ಯವಿಲ್ಲವೆಂಬ ನಂಬಿಕೆ ಅವರಲ್ಲಿತ್ತು ಎಂದು ಪರ್ಮಾರ್ ಹೇಳಿದ್ದಾರೆ.
ರಾಜ್ಯದಾದ್ಯಂತ ಗೋ ರಕ್ಷಕ್ ಸಮಿತಿಗಳನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದರು. ರಾಜ್ಯದ ಪೊಲೀಸರು ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆಂದು ಆರೋಪಿಸಿದ ಅವರು ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ. ಸಂತ್ರಸ್ತರಿಗೆ ರೂ. 10 ಲಕ್ಷ ಪರಿಹಾರ ನೀಡಬೇಕೆಂದೂ ಅವರು ಆಗ್ರಹಿಸಿದ್ದಾರೆ.


ಸತ್ಯ ಶೋಧನಾ ತಂಡ ಸಂತ್ರಸ್ತರನ್ನು ಹಾಗೂ ಘಟನೆ ನಡೆದ ಗ್ರಾಮವನ್ನು ಸಂದರ್ಶಿಸಿದೆ. ವರದಿಯ ಪ್ರಕಾರ ಹತ್ತಿರ ಗ್ರಾಮಗಳಲ್ಲಿ ಸಿಂಹಗಳು ಎರಡು ದನಗಳನ್ನು ಕೊಂದಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X