ಗಣಪತಿ ಪ್ರಕರಣ: ಸಿಬಿಐಗೆ ಒಪ್ಪಿಸಲು ಆಗ್ರಹ
ಮಂಗಳೂರು, ಜು. 21: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪಿಯುಸಿಎಲ್ ಕೇಂದ್ರ ಸಮಿತಿ ಸದಸ್ಯ ಪಿ.ಬಿ. ಡೇಸಾ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯಾಂಶ ಹೊರಬರಬೇಕಾದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಕೆ.ಜೆ.ಜಾರ್ಜ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ. ರಾಜಕಾರಣಿಗಳು ವಿವಿಧ ಇಲಾಖೆಗಳ ಆಡಳಿತಾತ್ಮಕ ವಿಷಯಗಳಲ್ಲಿ ಅನಗತ್ಯ ಹಸ್ತಕ್ಷೇಪ ನಡೆಸುವುದು ನಿಲ್ಲಬೇಕು ಎಂದು ಹೇಳಿದರು.
Next Story





