Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫರೀದಾಬಾದ್‌ನ ಸಾರ್ವಜನಿಕರನ್ನು...

ಫರೀದಾಬಾದ್‌ನ ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿವೆ 10 ರೂ. ನಾಣ್ಯಗಳು

ವಾರ್ತಾಭಾರತಿವಾರ್ತಾಭಾರತಿ22 July 2016 4:52 PM IST
share
ಫರೀದಾಬಾದ್‌ನ ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿವೆ 10 ರೂ. ನಾಣ್ಯಗಳು

ಫರೀದಾಬಾದ್, ಜು.22: ಫರೀದಾಬಾದ್ ನಗರದ ಜನರು ಕಳೆದೆರಡು ವಾರಗಳಿಂದ ಗೊಂದಲಕ್ಕೀಡಾಗಿದ್ದಾರೆ. ಹತ್ತು ರೂಪಾಯಿ ನಾಣ್ಯ ಚಲಾವಣೆಯಲ್ಲಿದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯೇ ಅವರ ಗೊಂದಲಕ್ಕೆ ಕಾರಣವಾಗಿದೆ.

ನಗರದ ಕೆಲವು ಅಂಗಡಿ ಮಾಲಕರು ಈ ಹತ್ತು ರೂಪಾಯಿ ನಾಣ್ಯವನ್ನು ಗ್ರಾಹಕರಿಂದ ಸ್ವೀಕರಿಸುತ್ತಾರಾದರೂ, ಹಲವರು ಅವುಗಳನ್ನು ಸಾರಾಸಗಟಾಗಿ ತಿರಸ್ಕರಿಸುತ್ತಾರೆ. ಈ ನಾಣ್ಯವನ್ನು ರಿಸರ್ವ್ ಬ್ಯಾಂಕ್ ಅಮಾನ್ಯಗೊಳಿಸಿದೆಯೆಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವುದೇ ಇದಕ್ಕೆ ಕಾರಣ.

ಈ ವದಂತಿ ಸುಳ್ಳು. ರಿಸರ್ವ್ ಬ್ಯಾಂಕ್ ಇಂತಹ ಯಾವುದೇ ನಿಯಮಾವಳಿ ತಂದಿಲ್ಲ. ಹತ್ತು ರೂಪಾಯಿ ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುವವರ ವಿರುದ್ಧ ಐಪಿಸಿಯ ಸೆಕ್ಷನ್ 498ಎ ಹಾಗೂ 489ಇ ಅನ್ವಯ ಪ್ರಕರಣ ದಾಖಲಿಸಬಹುದು ಎಂದು ಎಸ್‌ಬಿಐನ ನೀಲಂ ಚೌಕ್ ಶಾಖೆಯ ಸಹಾಯಕ ಪ್ರಬಂಧಕ ಎ.ಕೆ. ಅಹುಜಾ ಹೇಳುತ್ತಾರೆ.

ನಮಗೆ ಆಗಾಗ ಹತ್ತು ರೂಪಾಯಿ ಮೌಲ್ಯದ 2,000 ನಾಣ್ಯಗಳಿರುವ 50 ಚೀಲಗಳು ರಿಸರ್ವ್ ಬ್ಯಾಂಕಿನಿಂದ ದೊರೆಯುತ್ತವೆ. ಈ ನಾಣ್ಯವನ್ನು ಅಮಾನ್ಯ ಮಾಡಲಾಗಿಲ್ಲವೆಂಬುದು ಇದರಿಂದ ತಿಳಿಯುತ್ತದೆ ಎಂದು ಹೇಳುತ್ತಾರವರು.

ಸಣ್ಣ ಅಂಗಡಿಗಳ ಮಾಲಕರು ಮಾತ್ರವಲ್ಲ ದೊಡ್ಡ ದೊಡ್ಡ ಮಳಿಗೆಗಳವರೂ ಹತ್ತು ರೂಪಾಯಿ ಮೌಲ್ಯದ ನಾಣ್ಯಗಳನ್ನು ಗ್ರಾಹಕರಿಂದ ಸ್ವೀಕರಿಸಲು ನಿರಾಕರಿಸುತ್ತಾರೆ. ಈ ನಾಣ್ಯ ನೀಡಿದ ಗ್ರಾಹಕನಿಗೆ ಯಾವ ವಸ್ತುವನ್ನೂ ಮಾರಲು ಅವರು ಇಚ್ಛಿಸುವುದಿಲ್ಲ ಎಂದು ನಗರದ ಓರ್ವ ನಿವಾಸಿ ಹೇಳುತ್ತಾರೆ.
ಜನರು ಈಗ ಬ್ಯಾಂಕ್ ಶಾಖೆಗಳ ಹೊರಗೆ ಸರತಿ ನಿಂತು ಈ ಹತ್ತು ರೂಪಾಯಿ ಮೌಲ್ಯದ ನಾಣ್ಯಗಳನ್ನು ಹಿಂದಕ್ಕೆ ನೀಡಿ ನೋಟುಗಳನ್ನು ಪಡೆಯಲು ಹವಣಿಸುತ್ತಿದ್ದಾರಾದರೂ ಈ ನಾಣ್ಯಗಳು ಚಲಾವಣೆಯಲ್ಲಿರುವುದರಿಂದ ಅವುಗಳನ್ನು ನೋಟುಗಳಿಗೆ ವಿನಿಮಯ ಮಾಡಿ ಕೊಡಲಾಗುವುದಿಲ್ಲ ಎಂದು ನಾವು ಅವರಿಗೆ ಹೇಳುತ್ತೇವೆ ಎಂದು ಬ್ಯಾಂಕ್ ಉದ್ಯೋಗಿಯೊಬ್ಬರು ವಿವರಿಸುತ್ತಾರೆ.

ಈ ಗೊಂದಲದ ಬಗ್ಗೆ ರಿಸರ್ವ್ ಬ್ಯಾಂಕಿಗೆ ಪತ್ರ ಬರೆಯುವುದಾಗಿ ಎಸ್‌ಬಿಐನ ಸಹಾಯಕ ಪ್ರಬಂಧಕ ಅಹುಜಾ ಹೇಳುತ್ತಾರೆ. ಜನರಿಗೆ ಈ ಬಗ್ಗೆ ಬ್ಯಾಂಕ್ ಉದ್ಯೋಗಿಗಳು ಅರಿವನ್ನುಂಟು ಮಾಡಲೂ ಪ್ರಯತ್ನಿಸಲಿದ್ದಾರೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X