Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟರ ಸರಕಾರಿ ಜಮೀನು ಮಾರಾಟ ...

ಪರಿಶಿಷ್ಟರ ಸರಕಾರಿ ಜಮೀನು ಮಾರಾಟ ಪರ್ಯಾಯ ಜಮೀನು ಇದ್ದರೆ ಮಾತ್ರ ಅನುಮತಿ: ಕಾಗೋಡು

ವಾರ್ತಾಭಾರತಿವಾರ್ತಾಭಾರತಿ22 July 2016 10:25 PM IST
share

ಶಿವಮೊಗ್ಗ, ಜು.22: ಹರಿಜನ-ಗಿರಿಜನರಿಗೆ ಸರಕಾರದಿಂದ ಮಂಜೂರಾದ ಜಮೀನು ಮಾರಾಟ ಮಾಡಲು ಅನುಮತಿ ನೀಡುವುದಕ್ಕೆ ಮುಂಚಿತವಾಗಿ, ಅವರು ಬೇರೆ ಕಡೆ ಜಮೀನು ಖರೀದಿಸಿರಬೇಕು. ಇದಕ್ಕೆ ಸಂಬಂಧಿಸಿದ ಕ್ರಯಪತ್ರ ಸಲ್ಲಿಸಿದ ನಂತರವಷ್ಟೇ ಜಮೀನು ಮಾರಾಟಕ್ಕೆ ಹರಿಜನ-ಗಿರಿಜನರಿಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೂಚಿಸಿದ್ದಾರೆ. ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜನಸಂಪರ್ಕ ಹಾಗೂ ಸಾರ್ವಜನಿಕ ಕುಂದುಕೊರತೆ ಸಭೆ ಉದ್ಘಾಟಿಸಿದ ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ಕೆಲವು ಅಧಿಕಾರಿಗಳು ಜಮೀನು ಖರೀದಿಸಿದ ಮಾಹಿತಿ ಸಂಗ್ರಹಿಸದೆ ಹರಿಜನ-ಗಿರಿಜನರಿಗೆ ಸರಕಾರದಿಂದ ಮಂಜೂರಾದ ಜಮೀನು ಮಾರಾಟಕ್ಕೆ ಅನುಮತಿ ನೀಡುವ ಪ್ರಸ್ತಾವನೆ ಕಳುಹಿಸಿ ಕೊಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲವೆಂದರು. ತೊಡಗಿಸಿಕೊಳ್ಳಿ:

ಹೋರಾಟದ ರೀತಿಯಲ್ಲಿ ಕಂದಾಯಾಧಿಕಾರಿಗಳು ಹಕ್ಕು ಪತ್ರ ನೀಡುವ ಜವಾಬ್ದಾರಿಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಪಂ ಮತ್ತು ಕಂದಾಯ ಇಲಾಖೆ ಜವಾಬ್ದಾರಿಯಿಂದ ಕೆಲಸ ಮಾಡಿದಲ್ಲಿ ಹಕ್ಕುಪತ್ರ ನೀಡುವುದು ಸುಲಭವಾಗಲಿದೆ. ಬಗರ್‌ಹುಕುಂ, ಅರಣ್ಯ ಹಕ್ಕು ಮತ್ತು ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ ಅಡಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯನ್ನು 3 ತಿಂಗಳೊಳಗೆ ಇತ್ಯರ್ಥಗೊಳಿಸಬೇಕು. ಡಿಸೆಂಬರ್ ಒಳಗಡೆ ಹಕ್ಕುಪತ್ರ ನೀಡುವ ಕೆಲಸ ಆರಂಭಿಸಬೇಕು ಎಂದರು. ಜಿಲ್ಲೆಯಲ್ಲಿ ಸುಮಾರು 80 ಸಾವಿರ ಅರ್ಜಿಗಳು ವಿಲೇವಾರಿ ಆಗಬೇಕಿವೆೆ. ಈ ಪೈಕಿ 45 ಸಾವಿರ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ. ಉಳಿದ ಅರ್ಜಿಗಳನ್ನೂ ಸಹ ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ಗ್ರಾಮ ಅರಣ್ಯ ಸಮಿತಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಗ್ರಾಮಾಂತರ ಪ್ರದೇಶದಲ್ಲಿ ಸರಕಾರಿ ಜಾಗದಲ್ಲಿ ಮನೆಕಟ್ಟಿಕೊಂಡವರಿಗೆ ಹಕ್ಕುಪತ್ರವನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ಹೇಳಿದರು.

 ಗ್ರಾಮ ಅರಣ್ಯ ಸಮಿತಿಗಳು ಒಂದು ವೇಳೆ ಕೆಲಸ ಮಾಡದಿದ್ದಲ್ಲಿ ಅಥವಾ ಅದರ ಸದಸ್ಯರು ಸಹಕರಿಸದಿದ್ದಲ್ಲಿ ಅವರನ್ನು ತೆಗೆದು ಹಾಕುವ ಅಧಿಕಾರ ಗ್ರಾಮಸಭೆಗಿದೆ. ಗ್ರಾಮಸಭೆಯನ್ನು ಕರೆದು ಅಲ್ಲಿ ನಿರ್ಣಯಪಾಸು ಮಾಡಿ, ಹೊಸ ಗ್ರಾಮ ಅರಣ್ಯ ಸಮಿತಿ ರಚಿಸಬಹುದು ಎಂದರು.

ಸರಕಾರಿ ಜಾಗದಲ್ಲಿ, ನಗರ ಪ್ರದೇಶದಲ್ಲಿ ಮನೆಕಟ್ಟಿಕೊಂಡವರಿಗೂ ಸಹ ಇದು ಅನ್ವಯವಾಗಲಿದೆ. ಆದರೆ, ನಗರಸಭೆ, ಪಾಲಿಕೆ ಜಾಗ ಇದಕ್ಕೆ ಅನ್ವಯವಾಗುವುದಿಲ್ಲ. ಗ್ರಾಮ ಠಾಣಾ ಜಾಗವನ್ನು ಗುರುತಿಸಿ ಗಡಿ ಹಾಕುವ ಮತ್ತು ಹೊಸದಾಗಿ ಗ್ರಾಮಠಾಣಾ ಜಾಗವನ್ನು ಗುರುತಿಸುವ ಕೆಲಸ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಜನರ ಬಹುದಿನದ ಸಮಸ್ಯೆ ಇತ್ಯರ್ಥವಾಗಲು ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿ ಜ್ವಲಂತ ಸಮಸ್ಯೆಗಳನ್ನು ಮಾತ್ರ ಬಗೆ ಹರಿಸಲಾಗುವುದು ಎಂದರು.

ಶಾಸಕಿ ಶಾರದಾ ಪೂರ್ಯಾನಾಯ್ಕ್, ಎಂಎಲ್ಸಿ ಆರ್.ಪ್ರಸನ್ನಕುಮಾರ್, ಮೇಯರ್ ಎಸ್.ಕೆ. ಮರಿಯಪ್ಪ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಎಸ್ಪಿ ರವಿ ಡಿ. ಚೆನ್ನಣ್ಣನವರ್, ಸಿಇಒ ರಾಕೇಶ್‌ಕುಮಾರ್, ಪಾಲಿಕೆ ಆಯುಕ್ತೆ ತುಷಾರಮಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X