ಉಡುಪಿ: 5 ಕೆ.ಜಿ. ಗಾಂಜಾ, ಚರಸ್ ನಾಶ
ಉಡುಪಿ, ಜು.22: ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಚರಸ್ ಹಾಗೂ ಗಾಂಜಾವನ್ನು ನ್ಯಾಯಾಲಯದ ಆದೇಶದಂತೆ ಜು.22ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ನಾಶಪಡಿಸಲಾಯಿತು.
ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಉಡುಪಿ ನಗರ ಪೊಲೀಸ್ ಠಾಣೆ, ಮಣಿಪಾಲ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ 4 ಪ್ರಕರಣಗಳಲ್ಲಿ ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡ 2 ಕೆ.ಜಿ. ಚರಸ್ ಮತ್ತು 3 ಕೆ.ಜಿ. 104 ಗ್ರಾಂ ಗಾಂಜಾವನ್ನು ನ್ಯಾಯಾಲಯದ ಆದೇಶದಂತೆ ಬೆಂಕಿ ಹಾಕಿ ಸುಡುವ ಮೂಲಕ ನಾಶಪಡಿಸಲಾಯಿತು. ಈ ಸಂದರ್ಭ ಕಮಿಟಿಯ ಸದಸ್ಯರಾದ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಡಾ.ಸುಮನಾ ಡಿ.ಪಿ., ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಷ್ಣು ವರ್ಧನ್ ಎನ್., ಕುಂದಾಪುರ ಡಿವೈಎಸ್ಪಿ ಪ್ರವೀಣ್ ನಾಯ್ಕಿ ಹಾಗೂ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





