ಗುರುವಂದನಾ ಕಾರ್ಯಕ್ರಮ
ಉಡುಪಿ, ಜು.22: ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಭಗವಂತನ ಪೂಜೆ ಎಂಬ ದೃಷ್ಟಿಯಿಂದ ನಿರ್ವಹಿಸಬೇಕು. ಅದರಿಂದ ಲೋಕ ಕಲ್ಯಾಣವಾಗಬೇಕು ಎಂದು ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ತಿರುಪತಿ ತಿರುಮಲ ದೇವಸ್ಥಾನಂ ದಾಸ ಸಾಹಿತ್ಯ ಪ್ರೊಜೆಕ್ಟ್‌ನ ಸಹ ಯೋಗದೊಂದಿಗೆ ರಾಜಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಪುರಂದರೇಶ್ವರಿ ಮಾತನಾಡಿದರು.ರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ದಾಸ ಸಾಹಿತ್ಯ ಪ್ರೊಜೆಕ್ಟ್‌ನ ವಿಶೇಷ ಅಕಾರಿ ಪಿ.ಆರ್. ಆನಂದ ತೀರ್ಥಾಚಾರ್, ಬಿಎಸ್ಸೆನ್ನೆಲ್‌ನ ಮಂಗಳೂರು ವಲಯ ಅಕಾರಿ ಜಿ.ಆರ್.ರವಿ, ಉದ್ಯಮಿ ರಮಣ್ ಉಪಸ್ಥಿತರಿದ್ದರು.
Next Story





