ಇರಾ: ವನಮಹೋತ್ಸವ ಮತ್ತು ಅಭಿನಂದನಾ ಸಮಾರಂಭ

ಕೊಣಾಜೆ, ಜು.23: ಇರಾ ಬಾಳೆಪುಣಿ ಮಸೀದಿ ವತಿಯಿಂದ ವನಮಹೋತ್ಸವ ಮತ್ತು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ರಿಗೆ ಅಭಿನಂದನಾ ಸಮಾರಂಭ ಶುಕ್ರವಾರ ಬಾಳೆಪುಣಿ ಮಸೀದಿ ವಠಾರದಲ್ಲಿ ನಡೆಯಿತು.
ಬಾಳೆಪುಣಿ ಮಸೀದಿಯ ಅಧ್ಯಕ್ಷ ಇಬ್ರಾಹೀಂ ಹಾಜಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ಸಮಾರಂಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರರನ್ನು ಮಸೀದಿಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಮಸೀದಿಯ ಧರ್ಮಗುರು ಮಹಮ್ಮದ್ ಅಲಿ ಪೈಝಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುರ್ರಝಾಕ್ ಕುಕ್ಕಾಜೆ, ಪಂಚಾಯತ್ ಸದಸ್ಯರಾದ ಎಂ.ಬಿ.ಉಮ್ಮರ್, ಮೊಯ್ದುಕುಂಞಿ, ಸೆಫಿಯಾ, ಮಾಜಿ ಸದಸ್ಯ ಸಿ.ಎಚ್.ಮುಹಮ್ಮದ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಂ.ಬಿ.ಸಖಾಫಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





